saptsagar_admin

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸಂಕಲ್ಪ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 24: ಶಾಲೆಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸುವದರ ಮೂಲಕ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಚಲ ಸಂಕಲ್ಪ ಹೊಂದಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮೋಹಿತೆ ವಸ್ತಿ ಮತ್ತು ಅರಕೇರಿ ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮೋಹಿತೆ ವಸ್ತಿಯಲ್ಲಿ ಕೆ.ಎಸ್.ಐ.ಐ.ಡಿ.ಸಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಪ್ರಾಥಮಿಕ ಶಾಲೆಯಲ್ಲಿ…

Read More

ಆಯುರ್ವೇದ ಚಿಕಿತ್ಸಾ ಪದ್ಧತಿ ಉಳಿಸಬೇಕು- ಡಾ. ಜಿ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 24: ಆಯುರ್ವೇದ ಪ್ರಾಚೀನ ಕಾಲದ ಶಾಸ್ತ್ರೀಯ ವಿದ್ಯೆಯಾಗಿದೆ. ವೈದ್ಯಕಿಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡುವುದರ ಮೂಲಕ ಆಯುರ್ವೇದವನ್ನು ಉಳಿಸಬೇಕು ಹಾಗೂ ಬೆಳೆಸಬೇಕು ಎಂದು ನವದೆಹಲಿಯ ಸಿಸಿಐಎಂ ಮಾಜಿ ಸದಸ್ಯ ಮತ್ತು ಗದಗ ಡಿ. ಜಿ. ಎಂ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಜಿ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿಎಲ್‌ಡಿಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮಾಗಮ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು…

Read More

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಈರಯ್ಯ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸಾಯಬಣ್ಣನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 24:ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಈರಯ್ಯ ಹಿರೇಮಠ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸಾಯಬಣ್ಣ ಹಳ್ಳಿ ನೇಮಕಗೊಂಡಿದ್ದಾರೆ.ಕರ್ನಾಟಕ ರಾಜ್ಯ ಉಪಾಧ್ಯಕ್ಷ ಎನ್.ಸಿ. ಕಾಂಬಳೆ ಹಾಗೂ ರಾಜ್ಯ ಕಾರ್ಯದರ್ಶಿ ವಿನಾಯಕ ಸೊಂಡೂರ್ ಅವರ ಶಿಪಾರಸ್ಸು ಮೇರೆಗೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮೇಶ ಬೇಕ್ರಿ ಅವರು ಈರಯ್ಯ ಶಾಂತಯ್ಯ ಹಿರೇಮಠರನ್ನು ಜಿಲ್ಲಾಧ್ಯಕ್ಷರನ್ನಾಗಿ ಹಾಗೂ ಸಾಯಬಣ್ಣ ಬಸಪ್ಪ ಹಳ್ಳಿ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Read More

ದೇಹ ದಾರ್ಡ್ಯ ಸ್ಪರ್ಧೆ: ಪ್ರಜ್ವಲ ಅಳ್ಳಗಿಗೆ ಬೆಳ್ಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23 :ನಗರದಲ್ಲಿರುವ ಶ್ರೀ ಶರಣಬಸವೇಶ್ವರ ಕಾಲೇಜ್ ಆಫ್ ಫಾರ್ಮಸಿ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಪ್ರಜ್ವಲ್ ಅಳ್ಳಗಿ ಮಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೊಥೆರಪಿಯಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿಬೆಸ್ಟ್ ಫಿಸಿಕ್ (75 ಕೆಜಿ) ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ…

Read More

ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಇತ್ಯರ್ಥ ಪಡಿಸಿ -ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ ಡಿ.23: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತಥ್ಯಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ…

Read More

ಬಸವನಬಾಗೇವಾಡಿ ಸಹಾಯಕ ಕೃಷಿ ನಿರ್ದೇಶಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23:ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ದೂರಿನ ಹಿನ್ನೆಲೆಯಲ್ಲಿ ಬಸವನಬಾಗೇವಾಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಪಾಸಣೆ ಕೈಗೊಂಡು ಆದಾಯ ಮೀರಿ 2.50 ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವುದನ್ನು ಪತ್ತೆ ಹಚ್ಚಿದ್ದಾರೆ.ಬಸವನ ಬಾಗೇವಾಡಿ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಎಂಬುವರ ವಿಜಯಪುರದ ನವರಸಪುರ ಬಡಾವಣೆಯಲ್ಲಿನ ಮನೆ, ಕಣಕಾಲ ಗ್ರಾಮದ ಫಾರ್ಮ್ ಹೌಸ್ ಹಾಗೂ ಮುದ್ದೇಬಿಹಾಳದಲ್ಲಿನ ಅವರ ಮಾವನ ಮನೆ…

Read More

ಪಿಪಿಪಿ ಬಿಜೆಪಿ ಕೂಸು:ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23 :ಪಿಪಿಪಿ ಬಿಜೆಪಿ ಹಾಗೂ ಮೋದಿ ಅವರ ಕೂಸು. ಪಿಪಿಪಿ ಮಾದರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಸೋಮವಾರ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ನಮ್ಮವರು. ಆದರೆ ಹೋರಾಟಗಾರರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಬಿಜೆಪಿ ನಾಯಕರು ಮೊದಲು ಹೋಗಿ ಪ್ರಧಾನಿ ಅವರನ್ನು ಖಾಸಗೀಕರಣದ…

Read More

ದ್ವೇಷ ಭಾಷಣ ಮಸೂದೆಗೆ ಅಂಕಿತ ಬೇಡ: ಈಶ್ವರಪ್ಪ ರಾಜ್ಯಪಾಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23: ದ್ವೇಷ ಭಾಷಣ ವಿರೋಧಿ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮನವಿ ಮಾಡಿಕೊಂಡಿದ್ದಾರೆ.ಸೋಮವಾರ ಮಧ್ಯಾಹ್ನ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಮತ್ತೆ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಹುನ್ನಾರ ನಡೆಸಿದೆ. ಹೀಗಾಗಿ ಈ ವಿಧೇಯಕವನ್ನು ರಾಜ್ಯಪಾಲರು ಒಪ್ಪಲೇಬಾರದು ಎಂದು ಒತ್ತಾಯಿಸಿದರು.ಅಂದು ಸರ್ವಾಧಿಕಾರ ವರ್ತನೆ ತೋರಿದ ದಿ.ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ಪರಿಣಾಮ ಕಾಂಗ್ರೆಸ್ ಪಕ್ಷ…

Read More

ಡಿ.29ರಂದು ರಾಷ್ಟ್ರಕವಿ ಕುವೆಂಪು-ಜನವರಿ 1 ರಂದು ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿಜಯಂತಿ ಆಚರಣೆಗೆ ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.23: ಡಿಸೆಂಬರ್.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ಜನೆವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ಡಿ.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ…

Read More

ಜ.2ರಂದು ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ಆಯ್ಕೆಗೆ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.23: ವಿಜಯಪುರ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ಗೋಲಗುಂಬಜ್ ಹತ್ತಿರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜನವರಿ 2ರ ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಆಸಕ್ತರು ತಮ್ಮ ಸ್ವವಿವರ, ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8971127772 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ…

Read More