ಮಹಿಳೆಯರ ಹಕ್ಕು, ಸಾಧನೆ ಅರಿಯಲು ಪುಸ್ತಕಗಳು ಸಹಾಯಕಾರಿ: ಪ್ರೊ. ವಿಜಯಾ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7: ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಇಂತಹ ಮಹಿಳಾ ಕೇಂದ್ರಿಕೃತ ಪುಸ್ತಕ ಪ್ರದರ್ಶನಗಳು ಸಹಾಯಕವಾಗುತ್ತವೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿಶ್ವವಿದ್ಯಾನಿಲಯ ಗ್ರಂಥಾಲಯದ ಸಹಯೋಗದಲ್ಲಿ ಮಾರ್ಚ್ 7 ರಿಂದ ಮಾರ್ಚ್ 10 ರವರೆಗೆ ವಿಶ್ವವಿದ್ಯಾನಿಲಯ ಗ್ರಂಥಾಲಯ ಆವರಣದಲ್ಲಿ ವಿಶೇಷ ಪುಸ್ತಕ ಪ್ರದರ್ಶನವನ್ನು…


