saptsagar_admin

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಅನುದಾನಕ್ಕೆ ಒಪ್ಪಿಗೆ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 19: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ…

Read More

ಚಡಚಣ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ: ಪತ್ತೆಯಾದ ಬ್ಯಾಗ್ ನಲ್ಲಿ 6.55 ಕೆಜಿ ಚಿನ್ನಾಭರಣ, 41.4 ಲಕ್ಷ ನಗದು ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19:ಚಡಚಣ ಎಸ್‌ಬಿ‌ಐ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರರು ಮಹಾರಾಷ್ಟ್ರದ ಹುಲಿಜಂತಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಬಚ್ಚಿಟ್ಟಿದ್ದ ಬ್ಯಾಗ್ ನಲ್ಲಿ 6.55 ಕೆಜಿ ಚಿನ್ನಾಭರಣ ಹಾಗೂ 41.4 ಲಕ್ಷ ರೂಪಾಯಿ ದೊರೆತಿದೆ.ದರೋಡೆಕೋರರು ಚಿನ್ನಾಭರಣ, ನಗದು ಇರುವ ಬ್ಯಾಗ್ ವೊಂದನ್ನು ಹುಲಿಜಂತಿ ಗ್ರಾಮದ ಹಾಳು ಬಿದ್ದ ಮನೆ ಮೇಲ್ಛಾವಣಿ ಮೇಲೆ ಬಿಟ್ಟು ಹೋಗಿರುವುದು ಪೊಲೀಸರ ಕೈಗೆ ಸಿಕ್ಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಓರ್ವ ದರೋಡೆಕೋರ ಹಾಳು ಬಿದ್ದಮನೆಯ ಮೇಲ್ಚಾವಣಿ…

Read More

ಸಿಂದಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19:ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜನರಿಗೆ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಸಂಭವಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಜಿಲ್ಲೆಯ ಸಿಂದಗಿ ಪಟ್ಟಣದ ಸುತ್ತಮುತ್ತ ಒಂದೇ ದಿನ ನಾಲ್ಕು ಬಾರಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.ನಿನ್ನೆ ಮಧ್ಯಾಹ್ನ 3 ಗಂಟೆ, ರಾತ್ರಿ 10 ಗಂಟೆ 11ನಿಮಿಷ, ಮತ್ತೆ ರಾತ್ರಿ 10.25, ಮತ್ತೊಮ್ಮೆ 10.47 ಒಟ್ಟು 4 ಬಾರಿ ಭೂಮಿ ಕಂಪನಿಸಿದ ಅನುಭವವಾಗಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.ಜೋರಾದ…

Read More

ತಿಕೋಟದಲ್ಲಿ ಸೆ. 21 ರಿಂದ ಮೂರು ದಿನಗಳ ಕಾಲ ದ್ರಾಕ್ಷಿ ಬೆಳೆ ವಿಚಾರ ಸಂಕಿರಣ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 :ಸೆ. 21ರಿಂದ ಮೂರು ದಿನಗಳ ಕಾಲಜಿಲ್ಲೆಯ ತಿಕೋಟಾದ ಕನಕದಾಸ ಭವನದಲ್ಲಿ ರಾಜ್ಯಮಟ್ಟದ ದ್ರಾಕ್ಷಿ ವಿಚಾರ ಸಂಕಿರಣ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಅನೇಕ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ನಿವಾರಣೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಮಗ್ರ ಚಿಂತನ-ಮಂಥನ ನಡೆಸಲಾಗುವುದು. ಕರ್ನಾಟಕ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗ್ರಹಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು.ಧರಣಿ ಸತ್ಯಾಗ್ರಹ ಉದ್ದೇಶಿಸಿ ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮಾತನಾಡಿ, ಸರಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು ೧೪೯ ಎಕರೆಗೂ ಹೆಚ್ಚು ಸ್ಥಳಾವಕಾಶ ಸರಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಸರ್ಕಾರ ಇದನ್ನು ಗುರುತಿಸಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಕೊಪ್ಪಳದಲ್ಲಿ ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇತ್ತೀಚೆಗೆ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ…

Read More

ಸೆ. 26ರಂದು ಬೃಹತ್ ಉದ್ಯೋಗ ಮೇಳ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…

Read More

ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ತಾಲೂಕಿನ ಶಿವಣಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಗುರುವಾರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಯುನುಸ್ ಕರ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಸಹಕಾರಿ ವರ್ಷದ ಆಯವ್ಯಯಗಳ ಬಗ್ಗೆ ಅನುಮೋದನೆ ಪಡೆಯುವುದು, ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಉಪಾಧ್ಯಕ್ಷ ನಾಗೇಂದ್ರ ಬಡಿಗೇರ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ವಿ. ಗುಣದಾಳಮಠ, ನಿರ್ದೇಶಕರಾದ ಮಡ್ದಪ್ಪ…

Read More

ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 : ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ನಡೆಯಿತು.ಈ‌ ಅಭಿಯಾನದ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ…

Read More