saptsagar_admin

ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಅನುಪ್ರಿಯಾ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರಡಿ. 14: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ…

Read More

ದೇಶದ 140 ಕೋಟಿ ಜನರ ಮತದಾನದ ಹಕ್ಕಿಗಾಗಿ ಹೋರಾಟ:ಡಿಕೆಶಿ

ಸಪ್ತಸಾಗರ ವಾರ್ತೆ, ನವದೆಹಲಿ, ಡಿ.14:“ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ…

Read More

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.12:ಮಹಾನಗರ ಪಾಲಿಕೆವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಬಸ್ ಹಾಗೂ ರೈಲು ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ಕಂಡುಬಂದಲ್ಲಿ ಸಂಬಂಧಿಸಿದವರು ಮಹಾನಗರ ಪಾಲಿಕೆ ಕಚೇರಿಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ,ಗೌರವದ ಸಂಕೇತ-ಶಿವಚಂದ್ರ ಕತ್ನಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 12: ಕುವೆಂಪು ರಚಿಸಿದ ನಾಡಗೀತೆಯು ಕನ್ನಡಿಗರ ಹೃದಯದ ನಾದವಾಗಿದ್ದು, ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ, ಭೂಗೋಳ, ವೈವಿಧ್ಯತೆಯನ್ನು ಸಾರುವ ಒಂದು ಅಮರ ಗೀತೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.ಶುಕ್ರವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ನಾಡಗೀತೆಯ ನೂರರ ಹಾಗೂ ವಂದೇ ಮಾತರಂ ಗೀತೆಯ ನೂರೈವತ್ತರ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಗೀತೆಯು ಕರ್ನಾಟಕದ ಸ್ವಾಭಿಮಾನ ಮತ್ತು ಘನತೆಯನ್ನು ಎತ್ತಿ…

Read More

ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.12:ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 21ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-1: 7760992263, ವಿಜಯಪುರ-2: 7760992264,…

Read More

ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ

ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ವಿಜಯಪುರ-ಬೆಂಗಳೂರ ಕಲ್ಯಾಣ ರಥ ಸಾರಿಗೆಯ ಪ್ರಯಾಣ ದರದಲ್ಲಿ ರಿಯಾಯಿತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11: ಪ್ರಯಾಣಿಕರ ಬೇಡಿಕೆಯಂತೆ, ವಿಜಯಪುರ-ಬೆಂಗಳೂರ ಮಾರ್ಗದ ಕಲ್ಯಾಣ ರಥ ವೊಲ್ಲೋ ಮಲ್ಟಿ ಎಕ್ಸಲ್ ಎಸಿ ಸ್ಲಿಪರ್ ಬಸ್ ಪ್ರಯಾಣ ದರದಲ್ಲಿ ರೂ.100 ಅಂದರೆ, ಶೇ 6% ರಷ್ಟು ರಿಯಾಯಿತಿ ನೀಡಲಾಗಿದೆ.ವಿಜಯಪುರ-ಬೆಂಗಳೂರ ಕಲ್ಯಾಣ ರಥ ಬಸ್ಸಿನ ದರ ರೂ. 1,399 ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ಈ ರಿಯಾಯತಿ ದರದ ಉಪಯೋಗ ಪಡೆದುಕೊಳ್ಳುವಂತೆಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ರೈತರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಿದ್ದರಾಮಯ್ಯ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.ನಮ್ಮ ಸರ್ಕಾರ ಬಂದ ಬಳಿಕ ಪ್ರತಿಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ ಎಂದರು.ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು…

Read More