saptsagar_admin

ಡಿ.22 ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11:ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2025-26ನೇ ಒಂದನೇ ಹಾಗೂ ಎರಡನೇ ತ್ರೈಮಾಸಿಕದ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಡಿ.22 ರಂದು ಬೆಳಿಗ್ಗೆ 10:30ಕ್ಕೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಈ ಸಭೆಯಲ್ಲಿ ಸದಸ್ಯರು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿರಿಷಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ-ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ ಡಿ.11:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು…

Read More

ಎಸ್.ನಿಜಲಿಂಗಪ್ಪನವರುಕರ್ನಾಟಕಕಂಡಅಪರೂಪದರಾಜಕಾರಣಿ: ಸಿಎಂಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಳಗಾವಿ, ಡಿಸೆಂಬರ್ 10: ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬುಧವಾರ ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು….

Read More

ಸದನದಲ್ಲಿ ನಿರುದ್ಯೋಗಿಗಳ ಪರ ಧ್ವನಿ ಎತ್ತಿದ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 10: ಅರ್ಹ ಯುವಕ ಯುವತಿಯರಿಗೆ ಉದ್ಯೋಗ ನೀಡಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಣವನ್ನೆಲ್ಲ ಬಳಸಿ, ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ ಎಂದು ಬಸನಗೌಡ ಪಾಟೀಲ ಯತ್ನಾಳ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ರಹಿತ ಪ್ರಶ್ನೆ ಸಂಖ್ಯೆ 400 ರ ಮೂಲಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿರುವ ಬಗ್ಗೆ ಮತ್ತು ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಗಮನ ಸೆಳೆದು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕೆಂದು…

Read More

ರಾಷ್ಟ್ರಮಟ್ಟದ ಸೈಕ್ಲಿಂಗ್ ನಲ್ಲಿ ಪುನೀತ ಬಿರಾದಾರಗೆ ಬೆಳ್ಳಿ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10 : ಭಾರತೀಯ ಸೈಕ್ಲಿಂಗ್ ಫೆಡರೇಶನ್ ಹಾಗೂ ಸೈಕ್ಲಿಂಗ್ ಅಸೋಶಿಯೇಶನ್ ಆಫ್ ಓರಿಸ್ಸಾ ಸಹಯೋಗದಲ್ಲಿ ಸಂಬಾಲಪುರಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ ಬಿರಾದಾರ 16 ವಯೋಮಾನದ ಬಾಲಕರ ವಿಭಾಗದ 30 ಕಿ.ಮೀ ಟೀಮ್ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ…

Read More

ಲಿಂಗ ತಾರತಮ್ಯ ಮತ್ತು ಬಾಲ್ಯ ವಿವಾಹ ಪದ್ಧತಿ ಕಿತ್ತೊಗೆಯಬೇಕು : ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10:ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಇರುವ ತಾರತಮ್ಯವನ್ನು ಕಡಿಮೆ ಮಾಡುವುದಲ್ಲದೆ ಇದನ್ನು ಸಮಾಜದಿಂದ ಬೇರು ಸಮೇತ ಕಿತ್ತೊಗೆಯುವ ಕಾರ್ಯವನ್ನು ಮಾಡಬೇಕು ಎಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಅರವಿಂದ ಎಸ್ ಹಾಗರಗಿ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ…

Read More

ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.10:ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ ಅವರು ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

Read More

ಕೌಶಲ್ಯಾಭಿವೃದ್ಧಿ ಇಂದಿನ ಅಗತ್ಯ: ಶಂಕರಗೌಡ ಸೋಮನಾಳ

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 9: ಆಧುನಿಕ ಶಿಕ್ಷಣದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೊಂದುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ, ಸಿಕ್ಯಾಬ್ ಎ.ಆರ್.ಎಸ್. ಇನಾಮದಾರ, ಪರೀಕ್ಷೆ ವಿಭಾಗ ಹಾಗೂ ಐಕ್ಯೂಎಸಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಆಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ‍್ಯಾಗಾರವನ್ನು ಉದ್ಘಾಟಿಸಿ ಅವರು…

Read More

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪಾಲಕರ ಸಹಕಾರ ಅವಶ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ಮಕ್ಕಳಿಗೆ ಸಂವಹನ ಕಲೆಯನ್ನು, ಪ್ರಶಸ್ತಿ ಪಡೆದವರ ಸಾಧನೆಯನ್ನು ತಿಳಿಸುವುದು ಮತ್ತು ಅವರಿಗೆ ಶಿಕ್ಷಕರು ಪಾಲಕರು ಪ್ರೇರಣೆಯನ್ನು ನೀಡಿ ಸತ್ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಎ.ಎಸ್.ಹಿಪ್ಪರಗಿ ಪ್ರತಿಷ್ಠಾನ ಮತ್ತು ಸಮನ್ವಯ ಆಂಗ್ಲ ಮಾಧ್ಯಮಿಕ ಶಾಲೆ ಬ ಇವುಗಳ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷ್ಣಾಜಿ ದಂಪತಿ ಮತ್ತು ಶಂಭು ತುಪ್ಪದ ಕೊಡಮಾಡಿದ ದತ್ತಿ ದಾಸೋಹಿಗಳು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಇವರು…

Read More

ಅಹಿಂದ ವಿದ್ಯಾರ್ಥಿ ಪರಿಷತ್ ಘಟಕಕ್ಕೆ ರಾಜ್ಯಾಧ್ಯಕ್ಷರಾಗಿ ಶಂಕರ ವಡ್ರೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9:ಅಹಿಂದ ವಿದ್ಯಾರ್ಥಿ ಪರಿಷತ್ ಘಟಕದ ರಾಜ್ಯಾದ್ಯಕ್ಷರಾಗಿ ಶಂಕರ ಘೋರಕನಾಥ ವಡ್ರೆ ಮರಗೂರ ಅವರು ಆಯ್ಕೆಯಾಗಿದ್ದಾರೆ.ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ (ರಿ) ಬೆಂಗಳೂರು ರಾಜ್ಯಾದ್ಯಕ್ಷ ಪ್ರಭುಲಿಂಗ ದೊಡ್ಡಿಣಿ ಅವರ ಆದೇಶದ ಮೇರೆಗೆ ಅಹಿಂದ ವಿದ್ಯಾರ್ಥಿ ಪರಿಷತ್ ಘಟಕ ರಾಜ್ಯಾದ್ಯಕ್ಷರನ್ನಾಗಿ ಶಂಕರ ಘೋರಕನಾಥ ವಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಹಾಗೂ ವಿಠ್ಠಲ ಬಿರಾದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More