ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡಿ -ರಿಷಿ ಆನಂದ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.1: ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಮಟ್ಟದಲ್ಲಿ…


