saptsagar_admin

ಮಹಿಳೆಯರನ್ನು ಮುಖ್ಯವಾಹಿನಿಗೆ ತರುವುದೇ ಕ್ಷೇತ್ರದ ಮುಖ್ಯ ಉದ್ದೇಶ : ದಿನೇಶ ಪೂಜಾರಿ

ಸಪ್ತಸಾಗರ ವಾರ್ತೆ ಬಸವನ ಬಾಗೇವಾಡಿ, ಸೆ. 18 : ಮಹಿಳೆಯರನ್ನು ಸಬಲೀಕರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ ಸಿ ಟ್ರಸ್ಟ್ ಬ.ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ರಬಿನಾಳ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಅವರು ದೀಪ ಬೆಳಗುವುದರ…

Read More

ಪರಿಸರ ಸಂರಕ್ಷಿಸಲು ತಾಯಿ ಹೆಸರಿನಲ್ಲಿ ಒಂದು ಮರ ಎಂಬ ವಿಶಿಷ್ಟ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಪರಿಸರ ರಕ್ಷಣೆ ಹಾಗೂ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಲು ವಿಶಿಷ್ಟ ಕಾರ್ಯಕ್ರಮವೊಂದನ್ನು ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೇರಾ ಯುವ ಭಾರತ ವಿಜಯಪುರ ಹಾಗೂ ಸಖಿ ಯುವ ಮಹಿಳಾ ಸೇವಾ ಸಂಸ್ಥೆ ಅಡಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ಮರ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರವನ್ನು ರಕ್ಷಿಸಿ ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.ಶಾಲೆಯ ಹೆಡ್ ಮಾಸ್ಟರ್ ಶಿವರಾಮ ಜಮ್ಮನಕಟ್ಟಿ, ಪ್ರಲ್ಹಾದ…

Read More

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ ಸೆ.18:ಜಿಲ್ಲಾಡಳಿತದ ಮೂಲಕ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.7ರ ಬೆಳಿಗ್ಗೆ 9-30 ಗಂಟೆಗೆ ನಗರದ ಶ್ರೀ…

Read More

ವಿಶ್ವಕರ್ಮರ ಕೊಡುಗೆ ಅಪಾರ- ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಸೆ.19ರಂದು ಮೀನು ಮರಿಗಳ ಮಾರಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ನಗರದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಸೆ. 19 ರಂದು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1.ರೂ ನಂತೆ ಮಾರಾಟ ಮಾಡಲಾಗುತ್ತಿದೆ.ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704, 9900776205, ದೂ.08352-264516 ಹಾಗೂ ಮೊ:9480518679 ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗುಣಮಟ್ಟದ ಸೇವೆ ನೀಡುವಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಮುಂಚೂಣಿಯಲ್ಲಿ: ಬಸನಗೌಡ ಪಾಟೀಲ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ…

Read More

ಮಾದಕ ದ್ರವ್ಯ-ವಸ್ತು ಕಡಿವಾಣಕ್ಕೆ ಶಾಲಾ-ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಮೂಲಕ ಜಾಗೃತಿ ಮೂಡಿಸಿ -ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.17: ಜಿಲ್ಲೆಯಲ್ಲಿ ಮಾದಕ ದ್ರವ್ಯ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಸ್ಥಾಪಿಸಿ, ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ದ್ರವ್ಯ-ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಶಾಲಾ ಕಾಲೇಜ್‍ಗಳಲ್ಲಿ ನಿರ್ಮಿಸಿದ…

Read More

ಸೆ. 20ರಂದು ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:220/110/11ಕೆ.ವಿ ಬಸವನ ಬಾಗೇವಾಡಿ ಸ್ವೀಕಾರ-ಕೇಂದ್ರದ 100 ಎಮ್.ವಿ.ಎ-1, 2 ಮತ್ತು 3 ಪರಿವರ್ತಕಗಳ ಮೇಲೆ ಬರುವ ಎಲ್ ಐ ಎಸ್‌ಗಳಾದ ಬಳೂತಿ, ಮಸೂತಿ, ಹನಮಾಪುರ ಮತ್ತು ಮುಳವಾಡ, 110ಕೆವ್ಹಿ ಚಿಮ್ಮಲಗಿ ಹಾಗೂ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ,ಮಟ್ಟಿಹಾಳ, ಮಲಘಾಣ,ರೋಣಿಹಾಳ, ಮುಕರ್ತಿಹಾಳ, ನಿಡಗುಂದಿ, ದಿಂಡವಾರ, ಕನಕಾಲ, ಉಕ್ಕಲಿ ಹಾಗೂ ನಂದಿಹಾಳ, ಉಪ ಕೇಂದ್ರಗಳಲ್ಲಿ ಹಾಗೂ 13ಕೆ.ವ್ಹಿ ಲಿಂಗದಳ್ಳಿ ಎಲ್.ಐ.ಎಸ್ ಹಾಗೂ 33ಕೆವ್ಹಿ ಮನಗೂಳಿ, ಮುತ್ತಗಿ, ಹೂ.ಹಿಪ್ಪರಗಿ, ದೇವರ ಗೆಣ್ಣೂರ…

Read More

ನಾಳೆ ಕುರುಬ ಸಮಾಜದ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ. 22ರಿಂದ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕುರುಬ ಸಮಾಜದ ಪೂರ್ವಭಾವಿ ಸಭೆಯನ್ನು ಸೆ. 18ರಂದು ಬೆಳಗ್ಗೆ 11-30 ಗಂಟೆಗೆ ಮಧುವನ ಹೋಟೆಲ್ ಸಭಾಂಗಣದಲ್ಲಿ ಕರೆಯಲಾಗಿದೆ.ಗಣತಿದಾರರು ತಮ್ಮ ಮನೆಗೆ ಬಂದಾಗ ಸರ್ಕಾರದಿಂದ ಸಾಮಾಜಿಕ, ಶಿಕ್ಷಣ, ಆರ್ಥಿಕ ಹಾಗೂ ಉದ್ಯೋಗ ಇತ್ಯಾದಿ ಸರ್ಕಾರದ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ನಮ್ಮ ಸಮಾಜದ ಬಂಧುಗಳು ಧರ್ಮ ಕಾಲಂ 8″ರಲ್ಲಿ ಹಿಂದೂ ಎಂದು…

Read More

ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಮಾಜಿ ಸಚಿವ ಎಸ್.ಅರ್. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17 : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವರಾದ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ…

Read More