saptsagar_admin

ಮಾಧ್ಯಮ ಕೌಶಲಗಳ ಸದುಪಯೋಗಕ್ಕೆ ಕರೆ

ಸಪ್ತಸಾಗರ ವಾರ್ತೆ ವಿಜಯಪುರ:ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ ಕೌಶಲಗಳು ಬಹಳ ಪ್ರಾಮುಖ್ಯತೆ ಪಡೆದಿದ್ದು, ವಿದ್ಯಾರ್ಥಿನಿಯರು ಈ ಕೌಶಲ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗÀ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇವರ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ‘ವಿಡಿಯೋಗ್ರಾಫಿ ಕೌಶಲಗಳು’…

Read More

ತಾಲೂಕಾ ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ನಡೆಸಿತ್ವರಿತವಾಗಿ ಸ್ಪಂದಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ನ.28: ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿವಿಕಲಚೇತನರ ಕುಂದುಕೊರತೆ ಸಭೆ ನಡೆಸಿ,ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಕಲಚೇತನರ ಸಮಸ್ಯೆಗಳನ್ನು ಸ್ಥಳೀಯವಾಗಿ ಸ್ಪಂದಿಸಿ, ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ಆಯೋಜಿಸಿ ಅವರ ಸಮಸ್ಯೆಗೆ ಪರಿಹಾರ ಒದಗಿಸಲು ಪ್ರಯತ್ನಿಸಬೇಕು. ವಿಕಲಚೇತನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿ, ಆಸ್ಪತ್ರೆ,…

Read More

ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ- ಎಸ್.ಕೆ. ಒಂಟಿಗೋಡಿ

ಸಪ್ತಸಾಗರ ವಾರ್ತೆ, ವಿಜಯಪುರ ನ.28:ಸಾರ್ವಜನಿಕರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ಅತ್ಯಂತ ಸಹಾನುಭೂತಿಯಿಂದ ಸಮಸ್ಯೆಗಳನ್ನು ಆಲಿಸಿ, ನಿಮ್ಮ ಹಂತದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ಒಂಟಿಗೋಡಿ ಅವರು ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿದರು.ಬಸವನ ಬಾಗೇವಾಡಿಯ ಪುರಸಭೆಯ ಸಭಾ ಭವನದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳ ಸಂರಕ್ಷಣೆ, ಉಲ್ಲಂಘನೆ, ತಡೆಗಟ್ಟುವುದು ಮತ್ತು ಪರಿಹಾರ ಒದಗಿಸುವುದೇ ಉದ್ದೇಶವಾಗಿದೆ….

Read More

ವೃಕ್ಷಥಾನ್ ಹೆರಿಟೇಜ್ ರನ್ : ಸ್ಥಳದಲ್ಲಿಯೇ ನೊಂದಣಿಗೆ ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ, ನ. 28: ಸ್ವಚ್ಚ, ಸುಂದರ, ಸದೃಢ ವಿಜಯಪುರಕ್ಕಾಗಿ ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಂದ ಮನವಿ ಬಂದಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 4, 5 ಹಾಗೂ 6 ರಂದು ಮೂರು ದಿನಗಳ‌ ಕಾಲ‌ ಸ್ಥಳದಲ್ಲಿಯೇ‌ ನೋಂದಣಿಗೆ‌ ಅವಕಾಶ ಕಲ್ಪಿಸಲಾಗಿದೆ.ಮೊದಲು ಬರುವ ಕೇವಲ‌ 1000(ಒಂದು ಸಾವಿರ) ಜನರಿಗೆ ಅವಕಾಶ ಮಾತ್ರ ನೋಂದಣಿಗೆ ಅವಕಾಶ ಒದಗಿಸಲಾಗಿದೆ. ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಪರಿಸರಾಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.ಈಗಾಗಲೇ 21…

Read More

ಚಾಣಕ್ಯ ಆಡಳಿತ ತರಬೇತಿ ಯೋಜನೆ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪಯರ, ನ. 27:ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರಿಗೆ ನಾಗರಿಕ ಸೇವೆಗಳಾದ ಐ.ಎ.ಎಸ್ ಅಥವಾ ಕೆ.ಎ.ಎಸ್ ಸ್ಪಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಪಡೆಯುವ ಸಂಬಂಧ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು, ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.1 ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ…

Read More

ವಿವಿಧ ವೈದ್ಯರ ಗುತ್ತಿಗೆ ಆಧಾರ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ.27: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾಕೇರ್ ನಲ್ಲಿ ತಜ್ಞ ವೈದ್ಯರು, ಹಿರಿಯ ವೈದ್ಯಾಧಿಕಾರಿ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜನರಲ್ ಸರ್ಜರಿ ತಜ್ಞ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ತಜ್ಞ,,ಅನಸ್ತೇಸಿಯಾ ತಜ್ಞ, ರೇಡಿಯಾಲಜಿ ತಜ್ಞ, ನ್ಯೂರೊ ಸರ್ಜರಿ ತಜ್ಞ ಹಾಗೂ ಹಿರಿಯ…

Read More

ಈರುಳ್ಳಿ ದರ ಕುಸಿಯದಂತೆ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವರ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27 : ರಾಜ್ಯದಲ್ಲಿ ಈರುಳ್ಳಿ ಬೆಳೆಗೆ ದರ ಕುಸಿಯದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವರು ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.ಗುರುವಾರ ಬಸವನಬಾಗೇವಾಡಿ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕಡಿಮೆ ದರಕ್ಕೆ ಈರುಳ್ಳಿ ಖರೀದಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಕೃಷಿ ಮಾರುಕಟ್ಟೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ ಅವರು ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸ್ಥಳಕ್ಕೆ ತೆರಳಿ…

Read More

ತಿಕೋಟಾದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.ಈ ಸಭೆಯಲ್ಲಿ ತಿಕೋಟಾ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಅವರು ಮಾತನಾಡಿ, ‘ಪ್ರಜಾಪ್ರಭುತ್ವ’- ಜನರಿಗಾಗಿ, ಜನರಿಂದ, ಜನರಿಗೋಸ್ಕರ ಇರುವ ಆಡಳಿತ. ಅದು ನಮ್ಮೆಲ್ಲರ ಜೀವನಶೈಲಿ ಮತ್ತು ನಾವು ಪ್ರತಿದಿನ ಎದುರಿಸುವ ಹಕ್ಕುಗಳು ಹಾಗೂ ಜವಾಬ್ದಾರಿಗಳ ಸಂಕೇತವಾಗಿದೆ. ಪ್ರತಿಯೊಬ್ಬ ಪ್ರಜೆಯನ್ನೂ ಸಮಾನತೆಯೆಡೆಗೆ ಕರೆದೊಯ್ಯವುದೇ ಸಂವಿದಾನದ ಆಶಯವಾಗಿತ್ತು. ಸಂವಿಧಾನ ಜಾರಿಗೆ…

Read More

ಕೃಷಿ ಸೇನಾನಿಯ ಸಾಧನೆ: ಸಕ್ಕರೆ ಸಚಿವರ ಮೆಚ್ಚುಗೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27 : ತಮ್ಮ ಕ್ಷೇತ್ರದಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ಸಂಶೋಧನಾ ಹಂತದಲ್ಲಿರುವ ಕಬ್ಬು ಬೆಳೆದು, ಅಧಿಕ ಇಳುವರಿಯ ಸಾಧನೆ ಮಾಡಿರುವ ಮಾಜಿ ಸೈನಿಕ-ರೈತನನ್ನು ಸ್ವಯಂ ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವರೇ ಸನ್ಮಾನಿಸಿ, ಗೌರವಿಸಿ, ಪ್ರೋತ್ಸಾಹ ನೀಡಿದ್ದಾರೆ.ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಮಾಜಿ ಸೈನಿಕ ನಾರಾಯಣ ಸಾಳುಂಕೆ ಎಂಬವರು ಕೇವಲ ಮೂರು ವರ್ಷದಲ್ಲಿ ಕಬ್ಬು ಬೆಳೆಯಲ್ಲಿ ಅನುಕರಣೀಯ ಸಾಧನೆ ಮಾಡಿದ್ದಾರೆ. ಇದನ್ನರಿತ ಕ್ಷೇತ್ರದ ಶಾಸಕರೂ ಆಗಿರುವ ಕಬ್ಬು…

Read More

ನೂತನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿ ಪ್ರಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ನ. 26: ನೂತನವಾಗಿ ನೋಂದಣಿಯಾಗಿರುವ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ (ಯುನಿಯನ್) ಕಚೇರಿ ನಗರದ ಸೊಲ್ಲಾಪುರ ರಸ್ತೆ ಚಾಲುಕ್ಯ ನಗರದಲ್ಲಿ ಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸಿ ಪ್ರಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸಂಜಯ ಪಾಟೀಲ ಕನಮಡಿ , ಉಪಾಧ್ಯಕ್ಷ ಚಂದ್ರಶೇಖರ ಕವಟಗಿ,ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ , ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ, ಮೌನೇಶ ಪತ್ತಾರ, ಸತೀಶ ಶಿಂತ್ರೆ , ವಿವೇಕಾನಂದ ಶಿರೋಳ್ಕರ್ , ಯಮನಪ್ಪ ಸಾತಿಹಾಳ…

Read More