saptsagar_admin

ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರೀಯ ಪುರಸ್ಕಾರ: ವಿಜಯಪುರ ಜಿಪಂ ಸಿಇಒ ರಿಷಿ ಆನಂದಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ದಕ್ಷಿಣದ ರಾಜ್ಯಗಳಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ “ರಾಷ್ಟ್ರೀಯ ಜಲ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ ಅವರು ಜಿಪಂ ಸಿಇಒ ರಿಷಿ ಆನಂದ….

Read More

ತಾಲೂಕು-ಜಿಲ್ಲಾಮಟ್ಟದ ವಿಶೇಷ ಚೇತನರ ಕ್ರೀಡಾಕೂಟ:ನೋಂದಣಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಐದು ತಾಲೂಕುಗಳಲ್ಲಿ ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ಆಯೋಜಿಸಲಾಗಿದೆ.ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ನವೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ವೈ.ಚಿಂಚಲಿ-ಮೊಬೈಲ ಸಂಖ್ಯೆ: 9449939580, ರವಿ ರಾಠೋಡ-ಮೊಬೈಲ ಸಂಖ್ಯೆ: 903555337, ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ಮಳಗೊಂಡ-ಮೊಬೈಲ ಸಂಖ್ಯೆ: 9632315492, ಪರಶುರಾಮ ಭೋಸಲೆ-ಮೊಬೈಲ ಸಂಖ್ಯೆ: 9972441464, ಸಿಂದಗಿ ತಾಲೂಕು…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More

20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 18: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತಾಶ್ರಯದಲ್ಲಿ ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನವೆಂಬರ್ 20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7…

Read More

ಇನಕ್ಯೂಬೆಶನ್ – ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ,ನ.17: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಇನಕ್ಯೂಬೆಶನ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಕ್ಯಾಬ್ ಇನ್ ಸ್ಟಿಟ್ಯೂಟ್ ಆಫ್ ಇಂಜನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.ಸಿಡಾಕ್‌ನ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ ಮಾತನಾಡಿ, ಇಂಜಿನಿಯರಿಂಗ್ ಪದವಿಯ ನಂತರ ಸ್ವಂತ ಉದ್ಯಮ ಸ್ಥಾಪಿಸಲು ಪಡೆಯಬೇಕಾದ ಅಗತ್ಯ ವೃತ್ತಿ…

Read More

ಅಜಾದ್ ಅವರ ಕೊಡುಗೆ ಉನ್ನತ ಶಿಕ್ಷಣಕ್ಕೆ ಅಮೂಲ್ಯ: ಡಾ. ರಾಮು ಸಜ್ಜನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಮೌಲಾನಾ ಅಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ಮೌಲಾನಾ ಅಜಾದ್ ಅವರ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಶಿಕ್ಷಣ…

Read More

ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ವಿಜಯಪುರ ಜಿಲ್ಲಾ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಇತ್ತೀಚೆಗೆ ನಗರದ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನಾಡಗೀತೆ ನೂರರ ಸಂಭ್ರಮ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ ಲಭಿಸಿದೆ.ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಳೆದ ಮೂರು ದಶಕಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಸಮಾಜಮುಖಿ ಬದುಕಿಗೆ ಮಾದರಿಯಾಗಿರುವ ಅವರ ಅನುಪಮ ಮತ್ತು ಅಮೋಘ ಸೇವೆಯನ್ನು ಪರಿಗಣಿಸಿ ಈ…

Read More

ಬೆಳಗಾವಿ ಚಳಿಗಾಲ ಅಧಿವೇಶನ:ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ವಿಷಯ ಚರ್ಚೆಗೆ ಅವಕಾಶ ಕೋರಿ ಶಾಸಕ ಯತ್ನಾಳ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಬಾರಿ…

Read More

ಮಹಿಳೆಯಿಂದ ಯುವಕನ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ‌ ಕೊಲೆ ನಡೆದಿದ್ದು, ಸಹೋದರನ‌ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…

Read More

ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರು ನೂತನ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿ ಮೆಂಡೆಗಾರ, ಖಜಾಂಜಿ ರಾಹುಲ್ ಆಪ್ಟೆ ಹಾಗೂ ಕಾರ್ಯಕಾರಣಿ ಸದಸ್ಯ ಗುರುರಾಜ ಗದ್ದನಕೇರಿ…

Read More