ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 27:
ಉದ್ಯಾನವ, ರಸ್ತೆ ಮಧ್ಯೆ ಕಾಮ ದಹನ ನಿಷೇಧಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.
ಪಾಲಿಕೆಯ ವ್ಯಾಪ್ತಿಯ ಉದ್ಯಾನವಗಳಲ್ಲಿ ಕಾಮದಹನ ಮಾಡುವುದರಿಂದ ಪರಿಸರ ಮಾಲಿನ್ಯ, ಉದ್ಯಾನವನಗಳ ಅಲಂಕಾರಿಕ ಗಿಡಗಳಿಗೆ ಹಾನಿ ಉಂಟು ಆಗುವ ಹಾಗೂ ಬೆಂಕಿ ಅವಘಡ ಸಂಭವಿಸುವ ಸಾಧ್ಯತೆ ಇರುತ್ತದೆ. ಇದರಿಂದ, ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ.
ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ಯಾನವನಗಳಲ್ಲಿ ಕಾಮ ದಹನವನ್ನು ಸಾರ್ವಜನಿಕ ರಸ್ತೆ, ಆಸ್ತಿ ಪಾಸ್ತಿಗಳಿಗೆ ಹಾನಿಯಾಗದಂತೆ ಆಚರಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


