ಮಾ.9ರಂದು‌ ಭೀಮ ಗಾಯನ ಕಾರ್ಯಕ್ರಮ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.2:
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಗಾಂಧಿ, ಬುದ್ಧ, ಬಸವ ವಿಚಾರಧಾರೆಗಳನ್ನು ಜನಮಾನಸದಲ್ಲಿ ಜಾಗೃತಗೊಳಿಸಲು ನಾಡಿನ ಹೆಸರಾಂತ ಹಾಗೂ ಪರಿಣತಿ ಹೊಂದಿದ ಕಲಾವಿದರನ್ನೊಳಗೊಂಡ ಕಲಾತಂಡಗಳಿಂದ ಭೀಮ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಮಾ. 9ರಂದು‌ ವಿಜಯಪುರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘದ ಕಲಾತಂಡದಿಂದ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾ.3ರ ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಈ ಪೂರ್ವಭಾವಿ ಸಭೆಗೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ. ಪದಾಧಿಕಾರಿಗಳು, ಗಣ್ಯರು,ಸಮಾಜದ ಮುಖಂಡರು ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಲಹೆ ಸೂಚನೆ ನೀಡುವಂತೆ ವಾರ್ತಾ‌ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Share this