ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಭುವನೇಶ್ವರಿ ಮಠಪತಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:
ನಗರದ ಭುವನೇಶ್ವರಿ ದಾನಯ್ಯ ಮಠಪತಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮಿಜಾ ನದಾಫ ಅವರು ತಕ್ಷಣ ಜಾರಿಗೆ ಬರುವಂತೆ ಈ ನೇಮಕ ಮಾಡಿ ಆದೇಶಿಸಿದ್ದಾರೆ.

Share this