ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 22:
ದೆಹಲಿಯ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಂಟ್ಯಾಕ್) ಸಂಸ್ಥೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ನಗರದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ ಸಾವಳಗಿ ಹಾಗೂ ದರ್ಶ ಕುಲಕರ್ಣಿ ಅವರ ತಂಡ ಪ್ರಥಮ ಸ್ಥಾನ ಗಳಿಸಿತು. ಶ್ರೀನಿಕಾ ಹಳ್ಳಿ ಹಾಗೂ ವಶಿಷ್ಠ ಗಣೇಶನವರ ಅವರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.
ನಂತರ ನಡೆದ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಎಂ.ಎಸ್. ಮದಭಾವಿ ಅವರು ಪ್ರಶಸ್ತಿ ವಿತರಿಸಿದರು. ಸಾಹಿತಿ ಪ್ರೊ. ದೊಡ್ಡಣ್ಣ ಭಜಂತ್ರಿ ಹಾಗೂ ಶಿಕ್ಷಕಿ ದ್ರಾಕ್ಷಾಯಣಿ ಭಜಂತ್ರಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಚಾರ್ಯೆ ವಸುಧಾ ನಾರ್ವೇಕರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಇಂಟ್ಯಾಕ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ. ಶಾಲೆ ವಿದ್ಯಾರ್ಥಿಗಳ ಸಾಧನೆ


