ರಕ್ತದಾನ ಶಿಬಿರ ಮತ್ತು ಆ್ಯಪ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 1 : ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ಶ್ರೀ ಟಿ.ಕೆ. ಪಾಟೀಲ (ಬೆನಕಟ್ಟಿ) ಚಾರಿಟೇಬಲ ಟ್ರಸ್ಟ್ ಶಿವಗಿರಿ, ಬಿ.ಎಲ್.ಡಿ.ಈ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಭಾರತೀಯರೆಡ್ ಕ್ರಾಸ್ ಸಂಸ್ಥೆ ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ “ವಕೀಲರ ದಿನಾಚರಣೆ 2025 ” ರ ಅಂಗವಾಗಿ “ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಹಾಗೂ ಆ್ಯಪ್ ಬಿಡುಗಡೆ” ಕಾರ್ಯಕ್ರಮವನ್ನು ಬುಧವಾರ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರ ಪಾಲ್ಗೊಳುವಿಕೆಯನ್ನು ಉತ್ತೇಜಿಸಲು ಮತ್ತು ಸಮರ್ಪಕ ವ್ಯವಸ್ಥೆಯನ್ನು ಕೈಗೊಳ್ಳುವ ಉದ್ದೇಶದಿಂದ, ಅಂದು ರಕ್ತದಾನ ನೋಂದಣಿ ಅಪ್ಲಿಕೇಶನ್ ಅನ್ನು ಅಧಿಕೃತವಾಗಿ ವಕೀಲರ ದಿನಾಚರಣೆಯ ಅಂಗವಾಗಿ ಈ ವೆಬ್‌ಸೈಟ್‌ಲಿಂಕ್ ಬಿಡುಗಡೆಗೊಳಿಸಲಾಗುವುದು.
ವಿಜಯಪುರ ಜಿಲ್ಲೆಯಲ್ಲಿ ರಕ್ತದ ಕೊರತೆಯಿದ್ದು ಈ ವಿಷಯವಾಗಿ ಮುಂದಿನ ದಿನಮಾನಗಳಲ್ಲಿ ಜಿಲ್ಲೆಯಲ್ಲಿ ರಕ್ತದ ಕೊರತೆಯನ್ನು ನೀಗಿಸುವ ಸದುದ್ದೇಶದಿಂದ ಈ ಕಾರ್ಯಕ್ರವನ್ನು ಶ್ರೀ ಟಿ.ಕೆ.ಪಾಟೀಲ (ಬೆನಕಟ್ಟಿ) ಚಾರಿಟೇಬಲ್ ಟ್ರಸ್ಟ್ ಶಿವಗಿರಿ ವತಿಯಿಂದ ಈ ನಿಟ್ಟಿನಲ್ಲಿ ದೃಢಸಂಕಲ್ಪ ಮಾಡಿ ಈ ವೆಬ್ ಸೈಟ್ ಲಿಂಕ್ ಮತ್ತು ಕ್ಯೂಆರ್ ಕೋಡ್ ಹೊಂದಿದ್ದು, ಇದರಲ್ಲಿ ರಕ್ತದಾನಿಗಳ ನೋಂದಣಿ, ಮುಂದಿನ ರಕ್ತದಾನ ಶಿಬಿರಗಳ ಯೋಜನಾ ಮಾಹಿತಿ, ರಕ್ತದಾನಿಗಳ ಹೆಸರು ಮತ್ತು ರಕ್ತದ ಗ್ರೂಪ್ ಗಳ ಮಾಹಿತಿ, ಈ ವೆಬ್ ಲಿಂಕ್ ನಲ್ಲಿ ಇದ್ದು, ಇದರ ಬಳಕೆಯನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ಕೋರಲಾಗಿದೆ.

Share this