ರಕ್ತನಾಳ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 7: ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಲ್ಯತಂತ್ರ ವಿಭಾಗದ ವತಿಯಿಂದ ನವೆಂಬರ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಉಬ್ಬಿರುವ ರಕ್ತನಾಳಗಳು (Varicose Vains) ಮತ್ತು ಚರ್ಮಗತ ರವಿಕಾರಗಳಿಗೆ, ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ರಕ್ತ ವಿಸ್ರಾವಿಯ ಚಿಕಿತ್ಸೆ ಶಿಬಿರ ನಡೆಯಲಿದೆ.
ಈ ಲಕ್ಷಣಗಳಿಂದ ಬಳಲುತ್ತಿರುವ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕು ಎಂದು ಬಿ.ಎಲ್.ಡಿ.ಇ.ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ‌ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ಸಂಪರ್ಕಿಸಬಹುದಾಗಿದೆ.

Share this