ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 10:
ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಅಲಮೇಲ ಪಟ್ಟಣದಲ್ಲಿ ನಡೆದಿದೆ.
ಅಜರುದ್ದೀನ್ ಅಬ್ದುಲ್ ರಜಾಲ್ ಮಕಾನದಾರ್ (38) ಕೊಲೆಯಾದ ವ್ಯಕ್ತಿ.
ಅಜರುದ್ದೀನ್ ಬೈಕ್ ಮೇಲೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವ ಉಂಟಾಗಿ ಅಜರುದ್ದೀನ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ ಅಜರುದ್ದೀನ್
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Editor
Rudrappa B Asangi
Editor
Managing Editor
Chetan Asangi
Managing Editor