ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.5ರ ಉಪ ಚುನಾವಣೆ:ಚುನಾವಣಾ ವೇಳಾ ಪಟ್ಟಿ ನಿಗದಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:
ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. 05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ 6 ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ 17ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share