ವರುಣಾ ಜನರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ, ಎರಡು ಬಾರಿ ವಿಪಕ್ಷ ನಾಯಕ: ಸಿದ್ದರಾಮಯ್ಯ
ಸಪ್ತಸಾಗರ ವಾರ್ತೆ,ಮೈಸೂರು, ಅ.5: ವರುಣಾ ಕ್ಷೇತ್ರದ ಜನರು ನೀಡಿದ ಆಶೀರ್ವಾದ, ಬೆಂಬಲ ಹಾಗೂ ಶಕ್ತಿಯಿಂದಲೇ ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ವರುಣಾ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಮಹಿಳಾ ವಸತಿ ನಿಲಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರುಣಾ ಕ್ಷೇತ್ರದ ಜನರ ಋಣವನ್ನು ಎಂದಿಗೂ ಮರೆಯುವುದಿಲ್ಲ ಎಂದರು.ಕ್ಷೇತ್ರದಲ್ಲಿ ಒಟ್ಟು…


