ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ: ಡಿಕೆಶಿ ವಿಸ್ತರಣೆ ಶೀಘ್ರದಲ್ಲೇ; ರಿಜಿಜು ಕಾಂಗ್ರೆಸ್‌ ಚಿಂತೆ ಬಿಟ್ಟು ತಮ್ಮ ಸರ್ಕಾರ ನೋಡಲಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 8:ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಶೀಘ್ರದಲ್ಲೇ ಇತ್ಯರ್ಥವಾಗಲಿದ್ದು, ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.ವಿಧಾನಸೌಧ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ಮಹಿಳೆಯರಿಗೆ ಹೆಚ್ಚಿನ ಶಕ್ತಿ ನೀಡುತ್ತೇವೆ” ಎಂದರು.ಮಹಿಳಾ ಮೀಸಲಾತಿ ವಿಚಾರವಾಗಿ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಕೇಂದ್ರ…

Read More

ನಿಮ್ಮ ಜತೆ ಸರ್ಕಾರವಿದೆ, ನೀವು ಸರ್ಕಾರದ ಜತೆ ನಿಲ್ಲಿ- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ.6: “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್ ಅವರು…

Read More

ಸಚಿವ ಸ್ಥಾನ ಅತೃಪ್ತಿ: ರಾಜೀನಾಮೆ ಕೊಟ್ಟರೆ ಕ್ಷಣದಲ್ಲೇ ಅಂಗೀಕಾರ – ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 4: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ. “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರೂ ರಾಜೀನಾಮೆ ನೀಡಿದರೆ ಕ್ಷಣದಲ್ಲೇ ಅಂಗೀಕರಿಸುತ್ತೇನೆ. ರಾಜಕೀಯದಲ್ಲಿ ತಾಳ್ಮೆ ಅತ್ಯಂತ ಮುಖ್ಯ, ಪಕ್ಷವೇ ಮೊದಲ ಆದ್ಯತೆ” ಎಂದು ಹೇಳಿದರು.ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ನನಗೂ, ಪರಮೇಶ್ವರ್ ಅವರಿಗೂ ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ…

Read More

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 23: “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.“ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು….

Read More

ಪತ್ರಕರ್ತರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಲಿ: 183ನೇ ಪತ್ರಿಕಾ ದಿನಾಚರಣೆಯಲ್ಲಿ ಒಕ್ಕೊರಲಿನ ಆಗ್ರಹ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 23:ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಒತ್ತಡ, ವೃತ್ತಿ ಅಸ್ಥಿರತೆ, ಭದ್ರತೆಯ ಕೊರತೆ ಹಾಗೂ ಡಿಜಿಟಲ್ ಯುಗದ ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಪತ್ರಕರ್ತರ ಸುರಕ್ಷತೆ, ಸಾಮಾಜಿಕ ಭದ್ರತೆ ಹಾಗೂ ವೃತ್ತಿಪರ ಹಕ್ಕುಗಳನ್ನು ಖಾತರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಪತ್ರಕರ್ತರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಬೇಕು ಎಂದು 183ನೇ ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಒತ್ತಾಯಿಸಲಾಯಿತು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ…

Read More

ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 19:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು…

Read More

ಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯ.

ಸ್ವಇಚ್ಛೆಯಿಂದ ಭೂಮಿ ನೀಡುವವರಿಗೆ ಪರಿಹಾರ ಸಪ್ತಸಾಗರ ವಾರ್ತೆ,ಬೆಂಗಳೂರು, ಜು.15: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಶಿವಕುಮಾರ್ ಅವರು ಮಾತನಾಡಿದರು. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ…

Read More

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಮೊದಲ 30 ದಿನ: ಪ್ರಮುಖ ನಿರ್ಧಾರಗಳ ಸರಣಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಆಡಳಿತ, ಮೂಲಸೌಕರ್ಯ, ರೈತ ಕಲ್ಯಾಣ, ಉದ್ಯೋಗ, ಶಿಕ್ಷಣ, ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ.ಪ್ರಮುಖವಾಗಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳ ಗಡುವು, 2,500 ಚದರ ಅಡಿವರೆಗಿನ ಮನೆಗಳಿಗೆ ಓಸಿ ವಿನಾಯಿತಿಯೊಂದಿಗೆ ಶಾಶ್ವತ ವಿದ್ಯುತ್ ಸಂಪರ್ಕ,…

Read More

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸಿಎಂ ಡಿ ಕೆ ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.28:“2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಭಾನುವಾರ ನಡೆದ ಎಐಟಿಯುಸಿ (ಇಂಟೆಕ್) 316 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.“ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು ಕಾಂಗ್ರೆಸ್ ಕಾರ್ಯಕಾರಿ…

Read More