
ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್
ಸಪ್ತಸಾಗರ ವಾರ್ತೆ,ಬೆಂಗಳೂರು ಆ.22:ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.*ಈ…