ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
“ಜನರು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ; ಈಗ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು.” “ಅಧಿಕಾರಿಗಳು ಜನರ ಮಧ್ಯೆ ಇರಬೇಕು; ಕಚೇರಿಗಳ ಗೋಡೆಗಳ ನಡುವೆ ಅಲ್ಲ.” “ಅಭಿವೃದ್ಧಿ, ಪಾರದರ್ಶಕತೆ ಮತ್ತು ಶಿಸ್ತು – ಸರ್ಕಾರದ ಮೂರು ಮೂಲಮಂತ್ರಗಳು.” ಸಪ್ತಸಾಗರ ವಾರ್ತೆ,ಬೆಳಗಾವಿ, ಜು. 9: ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಹಾಗೂ…


