ಕಬ್ಬಿಗೆ ನ್ಯಾಯಯುತ ಬೆಲೆ ಆಗ್ರಹಿಸಿ ರೈತರ ಹೋರಾಟ ತೀವ್ರ

ಯಲಗೂರ ಕ್ರಾಸ್‌ನಲ್ಲಿ ಹೆದ್ದಾರಿ ತಡೆ; 700ಕ್ಕೂ ಹೆಚ್ಚು ರೈತರ ಪ್ರತಿಭಟನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 13: ಕಬ್ಬಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ.ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಮಂಗಳವಾರ 700ಕ್ಕೂ ಹೆಚ್ಚು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ಹೆಚ್ಚಿನ ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಹಾಗೂ…

Read More

ಬರದ ಬೇಗುದಿಗೆ ಸ್ಪಂದನೆ: ರೈತರಿಗೆ ಗರಿಷ್ಠ ಪರಿಹಾರಕ್ಕೆ ವೈಜ್ಞಾನಿಕ ವರದಿ ಶೀಘ್ರ ಸಲ್ಲಿಸಿ

ಎರಡನೇ ದಿನವೂ ಬರಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ. ಪಾಟೀಲ ಭೇಟಿ; ತೊಗರಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಪರಿಶೀಲನೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.10 :ಜಿಲ್ಲೆಯಲ್ಲಿ ತೀವ್ರ ಬರಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು, ರೈತರಿಗೆ ಸರ್ಕಾರದಿಂದ ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಬೆಳೆ ಹಾನಿಯ ವೈಜ್ಞಾನಿಕ ವರದಿಯನ್ನು ತ್ವರಿತವಾಗಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲೆಯ ಬರಪರಿಸ್ಥಿತಿ ಹಾಗೂ ಬೆಳೆ…

Read More

ಸಚಿವ ಸಂಪುಟ ವಿಳಂಬಕ್ಕೆ ಸಿಎಂ ವಿರುದ್ಧ ಯತ್ನಾಳ ತೀವ್ರ ವಾಗ್ದಾಳಿ

‘ಎಲ್ಲ ಇಲಾಖೆಗಳನ್ನೂ ತಮ್ಮ ಬಳಿಯೇ ಇಟ್ಟುಕೊಳ್ಳಲು ಸಂಪುಟ ವಿಸ್ತರಣೆ ಮುಂದೂಡುತ್ತಿದ್ದಾರೆ; ಬರದ ನಡುವೆಯೂ ಕೃಷಿ ಸಚಿವರಿಲ್ಲ‘ ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಆಗುತ್ತಿರುವ ವಿಳಂಬದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ದೇಶಪೂರ್ವಕವಾಗಿಯೇ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಸಂಪುಟ ವಿಸ್ತರಣೆಯನ್ನು ವಿಳಂಬಗೊಳಿಸುತ್ತಾ ಹೋದರೆ ಹೆಚ್ಚಿನ ಇಲಾಖೆಗಳು…

Read More

ತಾಯಿ ಹಾಗೂ ಶಿಕ್ಷಕನ ಋಣ ತೀರಿಸಲು ಯಾವ ಕಾಲಕ್ಕೂ ಸಾಧ್ಯವಿಲ್ಲ: ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯರು

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 27:ಜಗತ್ತಿನಲ್ಲಿ ತಾಯಿ ಋಣ ಹಾಗೂ ಕಲಿಸಿದ ಶಿಕ್ಷಕನ ಋಣ ಯಾವ ಕಾಲಕ್ಕೂ ತೀರಿಸಲು ಸಾಧ್ಯವಿಲ್ಲದಂತಹ ಅದ್ಭುತ ತ್ಯಾಗಿ ಜೀವಿ ಇವರಿಬ್ಬರು. ನಾನು ಇಂತಹ ಶಿಕ್ಷಕರ ಕೈಯಲ್ಲೇ ಕಲಿತು ಒಂದು ಮಠದ ಸ್ವಾಮೀಜಿಯಾಗಿದ್ದೇನೆ ಎಂಬ ಹೆಮ್ಮೆ ನನಗಿದೆ ಎಂದು ಮನಗೂಳಿ ಹಿರೇಮಠ ಶ್ರೀ.ಷ.ಬ್ರ.ಅಭಿನವ ಸಂಗನಬಸವ ಶಿವಾಚಾರ್ಯರು ಹೇಳಿದರು.ನಗರದಲ್ಲಿ ನಡೆದ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯ ಶ್ರೀ ಎಸ್‌.ಬಿ.ಪಾಟೀಲ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ 2003-04ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ 2005-06ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ…

Read More

ತಿಂಥಣಿ ಜಾತ್ರೆ: ವಿಶೇಷ ಸಾರಿಗೆ ಬಸ್ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.28:ಯಾದಗಿರಿ ಜಿಲ್ಲೆಯ ತಿಂಥಣಿಯಲ್ಲಿ ಶ್ರೀ ಮೌನೇಶ್ವರ ಜಾತ್ರೆಯು ಜ.28 ರಿಂದ ಫೆ.3ರವರೆಗೆ ಜರುಗಲಿದೆ.ಜಾತ್ರೆಗೆ ತೆರಳುವ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ‌ ಮೂಲಕ ವಿಜಯಪುರ ವಿಭಾಗದ ಸಿಂದಗಿ, ಮುದ್ದೇಬಿಹಾಳ ಮತ್ತು ತಾಳಿಕೋಟೆ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ ಸಾರಿಗೆ ಕಾರ್ಯಾಚರಣೆ ಮಾಡಲಿವೆ.ಪ್ರಯಾಣಿಕರು ಈ ಬಸ್ ಸಾರಿಗೆ ಉಪಯೋಗ ಪಡೆದುಕೊಳ್ಳಬಹುದು. ಸಾರಿಗೆ ಸೌಲಭ್ಯ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಿಂದಗಿ ಘಟಕ ವ್ಯವಸ್ಥಾಪಕರು ಮೊ.7760992266, ಮುದ್ದೇಬಿಹಾಳದ ಘಟಕ ವ್ಯವಸ್ಥಾಪಕರ…

Read More

ಹೋರಾಟಗಾರರ ಬಂಧನ:ಎಐಯುಟಿಯುಸಿ ಕಾರ್ಮಿಕ ಸಂಘಟನೆ ಖಂಡನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಧರಣಿ ನಡೆಸಲು ಮುಂದಾದ ಹೋರಾಟಗಾರರನ್ನು ಬಂಧಿಸಿ, ಸುಳ್ಳು ಮೊಕದ್ದಮೆ ದಾಖಲಿಸಿರುವ ಕ್ರಮವನ್ನು ಎಐಯುಟಿಯುಸಿ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.ಪಿಪಿಪಿ ಮಾದರಿಯ ಬದಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಹೋರಾಟ ಸಮಿತಿಯಿಂದ ನಿರಂತರವಾಗಿ ೧೦೦ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಯುತ್ತಿತ್ತು. ನಿನ್ನೆ ಹೋರಾಟದ ಮುಂದುವರೆದ ಭಾಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಧರಣಿ…

Read More

ಭಾರತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಮರು ಪರಾಮರ್ಶೆಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 15:ಕಳೆದ ಕೆಲವು ದಿನಗಳ ಹಿಂದೆ ಭಾರತ ಸರ್ವೋಚ್ಚ ನ್ಯಾಯಾಲಯವು ತಂದೆ ಪರಿಶಿಷ್ಟ ಜಾತಿ ಅಲ್ಲದಿದ್ದರೂ ತಾಯಿ ಪರಿಶಿಷ್ಟ ಜಾತಿ ಸೇರಿದ್ದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಬೇಕೆಂದು ಆದೇಶ ನೀಡಿದ್ದನ್ನು ಸುಪ್ರೀಂ ಕೋರ್ಟ್ ಮತ್ತೆ ಪರಾಮರ್ಶಿಸಬೇಕು ಎಂದು ಭೀಮ ಸರಕಾರ ಸಂಘಟನೆ ಮನವಿ ಸಲ್ಲಿಸಿದೆ.ಈ ತೀರ್ಪಿನಿಂದ ನಿಜ ಪರಿಶಿಷ್ಟ ಜಾತಿ ಜನರಿಗೆ ಅನ್ಯಾಯಾಗುತ್ತದೆ. ಜೊತೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶ ದುರುಪಯೋಗ ಆಗುವ ಸಾಧ್ಯತೆ ಇದ್ದು, ಈ ನ್ಯಾಯಾಲಯದ ಆದೇಶವನ್ನು…

Read More

ರೈತರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಿದ್ದರಾಮಯ್ಯ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.ನಮ್ಮ ಸರ್ಕಾರ ಬಂದ ಬಳಿಕ ಪ್ರತಿಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ ಎಂದರು.ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು…

Read More

ಕೌಶಲ್ಯಾಭಿವೃದ್ಧಿ ಇಂದಿನ ಅಗತ್ಯ: ಶಂಕರಗೌಡ ಸೋಮನಾಳ

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 9: ಆಧುನಿಕ ಶಿಕ್ಷಣದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೊಂದುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ, ಸಿಕ್ಯಾಬ್ ಎ.ಆರ್.ಎಸ್. ಇನಾಮದಾರ, ಪರೀಕ್ಷೆ ವಿಭಾಗ ಹಾಗೂ ಐಕ್ಯೂಎಸಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಆಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ‍್ಯಾಗಾರವನ್ನು ಉದ್ಘಾಟಿಸಿ ಅವರು…

Read More