ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ಅಡಿಯಲ್ಲಿ ಮುನ್ನಡೆಯುವುದು ಅಗತ್ಯ:ಎಂಬಿಪಿ

ಸಪ್ತಸಾಗರ ವಾರ್ತೆ,ದಾವಣಗೆರೆ, ಎ. 4: ಮೀಸಲಾತಿ ಸೌಲಭ್ಯಗಳಿಂದ ಲಿಂಗಾಯತ ಬಡಮಕ್ಕಳು ವಂಚಿತರಾಗಿದ್ದು, ಸಾಮಾನ್ಯ ಲಿಂಗಾಯತರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚಪೀಠಾಧೀಶರರು ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ರೀತಿಯಲ್ಲಿ ಸಮಾಜದ ಒಕ್ಕೂಟ್ಟು ಮತ್ತು ಏಳ್ಗಿಗಾಗಿ ಅದರನಗುಣವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ದಾವಣಗೆರೆ ದೊಡ್ಡಪೇಟೆ ವಿರಕ್ತಮಠದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಅಖಿಲಭಾರತ ವೀರಶೈವ…

Read More

ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನಾವುಗಳು ಕಲಿಯುವುದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ದಾವಣಗೆರೆ, ಎ.3:“ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನನಗೆ ಬಹಳ ಸಂತೋಷವಾಗಿದೆ. ನಾವು ಅವರಿಂದ ಕಲಿಯುವುದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದಾವಣಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ಈ ಕ್ಷೇತ್ರದಲ್ಲಿ ನೂರಕ್ಕೆ 98% ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಸುಮಾರು 60 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿದ್ದರೆ, 61 ಸಾವಿರ ಕುಟುಂಬಗಳು ಗೃಹಜ್ಯೋತಿ ಯೋಜನೆ…

Read More

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ರೈಲುಪ್ರಯಾಣದರಹೆಚ್ಚಳ : ಬಿಜೆಪಿನಾಯಕರುಮೌನ-ಸಿಎಂಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ…

Read More

ಶಾಮನೂರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಪಡೆದರು.ಬಳಿಕ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ್ ಖಂಡ್ರೆ ಸೇರಿ ಹಲವು ಮಂದಿ ಸಚಿವರು, ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More