ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.11:ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ…

Read More

ಮಕ್ಕಳ ಮನೋಲೋಕ ಕುರುಡಾಗಬಾರದು: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.7:ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ…

Read More

ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.7:ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು.‌ ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ‌ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ರಾಜಾಜಿನಗರದಲ್ಲಿ ಶನಿವಾರ ನಡೆದ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಾನ್ ಜ್ಞಾನಿಗಳು, ವಿಜ್ಞಾನಿಗಳು, ಚಿಂತಕರು, ಸಾಹಿತಿಗಳು ಪುಟಗಟ್ಟಲೆ ಹೇಳುವುದನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ನಾಲ್ಕೈದು ಸಾಲಿನಲ್ಲಿ ತಿಳಿಸಿದ ಮಹಾನ್ ನಾಯಕ ಬಸವಣ್ಣನವರು ಎಂದರು.ಅವರ ಒಂದೊಂದು ವಚನವನ್ನಿಟ್ಟುಕೊಂಡು…

Read More

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ- ಸಿಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 5 :ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ” ದಲ್ಲಿ ಮಾತನಾಡಿದರು.ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ…

Read More

ನಾಡ ಹಬ್ಬ ಮೈಸೂರು ದಸರಾಕ್ಕೆ ಡಿಸಿಎಂ ಡಿಕೆಶಿ ಅವರಿಗೆ ಆಮಂತ್ರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 4: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಸಿಇಒ ಮುಖೇಶಕುಮಾರ್, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್.ಪಿ. ವಿಷ್ಣುವರ್ಧನ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರನ್ನು ಒಳಗೊಂಡ ನಿಯೋಗವು ವಿಧಾನಸೌಧದಲ್ಲಿ ಗುರುವಾರ ಆಹ್ವಾನ ಪತ್ರ ನೀಡಿತು.

Read More

ಅಂಜನಾದ್ರಿಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿ.ಎಂಸೂಚನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 3:ಅಂಜನಾದ್ರಿ ಬೆಟ್ಟದ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ…

Read More

ಜಿಬಿಎವ್ಯಾಪ್ತಿಯನೂತನಪಾಲಿಕೆಕಚೇರಿಗಳನಿರ್ಮಾಣಕ್ಕೆನ. 1 ರಂದುಭೂಮಿಪೂಜೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು….

Read More

ಯುಕೆಪಿಹಂತ-3 ಯೋಜನೆಸಾಕಾರಕ್ಕೆಬದ್ಧ, ಎರಡು- ಮೂರುದಿನಗಳಲ್ಲಿಅಂತಿಮತೀರ್ಮಾನ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು…

Read More

ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More

ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 2: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Read More