ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 19:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು…

Read More

ಮಗಳ ಜನ್ಮದಿನದಂದು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್-ಪೆನ್ ವಿತರಿಸಿದ ಎಸ್‌ಡಿಎಂಸಿ ಅಧ್ಯಕ್ಷ

ಸಪ್ತಸಾಗರ ವಾರ್ತೆ,ತಿಕೋಟಾ, ಜು.19: ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಬದಲು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ ಎಲ್.ಟಿ. 01 ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಬಾರಿಗಿಡದ ದಂಪತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ತಾಲ್ಲೂಕಿನ ಘೋಣಸಗಿ ಎಲ್.ಟಿ. 01 ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಬಾರಿಗಿಡದ ಹಾಗೂ ಅವರ ಪತ್ನಿ ಪವಿತ್ರಾ ಬಾರಿಗಿಡದ ತಮ್ಮ ಮಗಳು ಸಾನ್ವಿಯ ಜನ್ಮದಿನದ ಅಂಗವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್‌ಗಳನ್ನು ವಿತರಿಸಿದರು.ಇದೇ ಶಾಲೆಯ 2ನೇ ತರಗತಿಯಲ್ಲಿ ವ್ಯಾಸಂಗ…

Read More

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಮಡಿವಾಳಯ್ಯ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಜು.18:ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಜಯಪುರದ ಕುಖ್ಯಾತ ರೌಡಿ ಮಡಿವಾಳಯ್ಯ ಪಂಚಯ್ಯ ಹಿರೇಮಠ (38) ವಿರುದ್ಧ ಕರ್ನಾಟಕ ಗೂಂಡಾ ಕಾಯ್ದೆ ಅಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ವಿಜಯಪುರ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಿ ರಸ್ತೆ, ಬಂಬಳ ಅಗಸಿ, ಹಳೆ ಶಿವಶಕ್ತಿ ನಗರ…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸಭೆ: ರಾಜ್ಯ ನಾಯಕರಿಗೆ ವರದಿ ಸಲ್ಲಿಕೆ – ಡಾ. ಅಂಜಲಿ ಲಿಂಬಾಳ್ಕರ್

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಎಸ್‌ಐಆರ್ ವೀಕ್ಷಕಿ ಡಾ. ಅಂಜಲಿ ಲಿಂಬಾಳ್ಕರ್ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಹಲವೆಡೆ ಬಿಎಲ್‌ಒಗಳು…

Read More

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಆದ್ಯತೆ: ಜಲ ಜೀವನ ಮಿಷನ್ ಕಾಮಗಾರಿ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 18:ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸಮಸ್ಯೆ ಇರುವ ಗ್ರಾಮಗಳಿಗೆ ಅಗತ್ಯವಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ 2–3 ತಿಂಗಳು ಮಳೆಯ ಅಭಾವ ಇರುವ ಸಾಧ್ಯತೆ ಇರುವುದರಿಂದ…

Read More

ದಾಂಡೇಲಿ ಜಿಪ್‌ಲೈನ್ ದುರಂತ: 30–40 ಅಡಿ ಎತ್ತರದಿಂದ ಬಿದ್ದು ವಿಜಯಪುರದ ಯುವಕ ಗಂಭೀರ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಪ್ರವಾಸದ ಸಂಭ್ರಮಕ್ಕಾಗಿ ದಾಂಡೇಲಿಯ ಸ್ಟರ್ಲಿಂಗ್ ರಿವರ್ ರೆಸಾರ್ಟ್‌ಗೆ ತೆರಳಿದ್ದ ವಿಜಯಪುರ ನಗರದ ಯುವಕ ಕುಬೇರ ಸುರಪುರ ಜಿಪ್‌ಲೈನ್ ಚಟುವಟಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಜಿಪ್‌ಲೈನ್‌ನ ಲಾಕ್ ಕಟ್ ಆಗಿದ್ದರಿಂದ ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಅವರ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದು, ನರಗಳಿಗೂ ಗಂಭೀರ ಹಾನಿಯಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಕಳೆದ ಜುಲೈ 3ರಂದು ಕುಬೇರ ಸುರಪುರ ಅವರು ತಮ್ಮ…

Read More

ಸೋನಂ ವಾಂಗ್ಚುಕ್‌ರನ್ನು ಬಲವಂತವಾಗಿ ತೆರವುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ಎಐಡಿವೈಒ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಎನ್‌ಇಇಟಿ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಳೆದ 21 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ, ವಿಜ್ಞಾನಿ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ…

Read More

ಸಾಲದ ಬಾಧೆ: ನೇಣಿಗೆ ಶರಣಾದ ರೈತ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಮನನೊಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ, ಮಳೆಯ ಕೊರತೆ ಹಾಗೂ ಸಾಲ ಮರುಪಾವತಿ ಚಿಂತೆಯೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಮೃತರನ್ನು ನಾಗಪ್ಪ ಭೀಮಶ್ಯಾ ಅಥರ್ಗಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ತೋಟದ ವಸತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕುಟುಂಬದ ಮಾಹಿತಿಯ ಪ್ರಕಾರ, ರೈತರು ಕೋಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ ₹15 ಲಕ್ಷ, ತಡವಲಗಾ ಸಹಕಾರಿ ಸಂಘದಲ್ಲಿ ₹65 ಸಾವಿರ…

Read More

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹ

ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 18:ಬಂಟ್ವಾಳದಲ್ಲಿ ಯುವತಿ ಲಾವಣ್ಯ ಅವರನ್ನು ಸಾರ್ವಜನಿಕವಾಗಿ ಕ್ರೂರವಾಗಿ ಹತ್ಯೆಗೈದಿರುವ ಘಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ತೀವ್ರವಾಗಿ ಖಂಡಿಸಿದೆ.ಸಮಿತಿಯ ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಅವರು ಈ ಕುರಿತು ಪ್ರಕಟಣೆ ನೀಡಿ, ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಇಂತಹ ಅಮಾನವೀಯ ಕೃತ್ಯಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಿವೆ ಎಂದು ಹೇಳಿದ್ದಾರೆ.ಲಾವಣ್ಯ ಅವರಿಗೆ ನಿರಂತರ…

Read More

‘ನಾನು’ ಕನ್ನಡ ವೆಬ್ ಸರಣಿಗೆ ಮುಹೂರ್ತ

ಸಪ್ತಸಾಗರ ವಾರ್ತೆ,ಮೈಸೂರು, ಜು.17: ಜೆ.ಕೆ. ಪ್ರೊಡಕ್ಷನ್, ಮೈಸೂರು ನಿರ್ಮಿಸುತ್ತಿರುವ ‘ನಾನು’ ಕನ್ನಡ ವೆಬ್ ಸರಣಿಯ ಚಿತ್ರೀಕರಣಕ್ಕೆ ನಗರದ ಬಂಬು ಬಜಾರ್ ರಸ್ತೆಯ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಛಾಯಾಗ್ರಾಹಕ ಸದಾಶಿವ ಹಿರೇಮಠ ಅವರು ವೆಬ್ ಸರಣಿಗೆ ಶುಭ ಹಾರೈಸಿ, ಉತ್ತಮ ಕಥಾಹಂದರದೊಂದಿಗೆ ಪ್ರೇಕ್ಷಕರ ಮನಗೆಲ್ಲಲಿ ಎಂದು ಆಶಿಸಿದರು.ನಿರ್ದೇಶಕ ಕಲಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ, ಅವರ ಜೀವನದಲ್ಲಿ ನಡೆಯುತ್ತಿರುವ ಬದಲಾವಣೆಗಳು ಹಾಗೂ…

Read More