ನವೆಂಬರ 26 ರಂದು ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ 26 ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತದ ಸಂವಿಧಾನ ಪೀಠಿಕೆಯ ಮೆರವಣಿಗೆಯನ್ನು ವಿವಿಧ ಜಾನಪದ‌ ಕಲಾ ತಂಡಗಳೊಂದಿಗೆ ನಡೆಯಲಿದೆ.ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ…

Read More

ಮಿನಿ ಕರ್ನಾಟಕ ಕ್ರೀಡಾ ಕೂಟ: ವಿದ್ಯಾರ್ಥಿಗಳ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ.24: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಓಲಿಂಪಿಕ್ ಸಂಸ್ಥೆ ವತಿಯಿಂದ ಮಿನಿ ಕರ್ನಾಟಕ ಕ್ರೀಡಾ ಕೂಟ ೨೦೨೫ ನವೆಂಬರ ೩ ರಿಂದ ೯ ವರೆಗೆ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿದ್ದಾರೆ.ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳಾದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೊಹಮ್ಮದ್ ಅಕ್ಡಸ್ ಹಳ್ಳಿ, ೫೬ ದೇಹ ತೂಕ ನಲ್ಲಿ ೨ ನೇ…

Read More

ಎಲೆಕ್ಟ್ರಿಕ್ ಕಾರಿಗೆ ಆಕಸ್ಮಿಕ ಬೆಂಕಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ತಗುಲಿಧಗಧಗನೇ ಹೊತ್ತಿ ಉರಿದ ಘಟನೆವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.ಪಾರ್ಕ್ ಮಾಡಿದ್ದ ಇವಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲTS 07- UF 6410 ನೋಂದಣಿ ಸಂಖ್ಯೆಯ ಮಹೀಂದ್ರಾ ವೆರಿಟೋ ಕಾರ್ಮೊಹಮ್ಮದಗೌಸ್ ಮುಲ್ಲಾ ಎಂಬುವವರಿಗೆ ಸೇರಿದ್ದು,ಘಟನೆಗೆ ಕಾರಣ ತಿಳಿದು ಬಂದಿಲ್ಲಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಅಗ್ನಿಶಾಮಕ ದಳ ಅಧಿಕಾರಿ ಉಮೇಶ ತಳಕೇರಿ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ…

Read More

ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್

ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ವೃಕ್ಷಥಾನ್ ಹೆರಿಟೇಜ್ ರನ್ ಪೂರ್ವಭಾವಿಯಾಗಿ ಡಿಸೆಂಬರ್ 5 ರಂದು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್ ಜರುಗಲಿದೆ.ಬೆಳಗ್ಗೆ 8 ಗಂಟೆಗೆ ಮರಗಳಿಗಾಗಿ ಮಕ್ಕಳ ಓಟ, ವೃಕ್ಷ ಕಿಡ್ಸ್ ರನ್ ನಡೆಯಲಿದ್ದು, ನರ್ಸರಿ, ಎಲ್.ಕೆ.ಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳಿಗೆ 50 ಮೀ. ಓಟ ನಡೆಯಲಿದೆ. ಇದರಲ್ಲಿ ಪ್ರಥಮ ರೂ. 2500, ದ್ವಿತೀಯ…

Read More

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದನ.27ರಂದು ಒಂದು ದಿನದ ರಾಜ್ಯಮಟ್ಟದ ವಿಚಾರ ಕಮ್ಮಟ

ಸಪ್ತಸಾಗರ ವಾರ್ತೆ,ವಿಜಯಪುರ, ನ. 24: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರ ವತಿಯಿಂದ ಕಮಲಾದೇವಿ ಪಾಟೀಲ ಮೆಮೋರಿಯಲ್ ಎಜ್ಯುಕೇಶನಲ್ ಅಸೋಸಿಯೇಶನ್ ಹಾಗೂ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆ- ನಾಡು ನುಡಿ ಚಿಂತನ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಕಮ್ಮಟ ನವೆಂಬರ್ 27ರ ಬೆಳಿಗ್ಗೆ 10ಗಂಟೆಗೆ ಸಾಯಿ ಪಾರ್ಕ್ ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ…

Read More

ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಆಯ್ಕೆಗೆ ಸಂದರ್ಶನ ಮುಂದೂಡಿಕೆ

ಸಪ್ತಸಾಗರ ವಾರ್ತೆ, ವಿಜಯಪುರ ನ.24:ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ನವೆಂಬರ್ 25ರ ಬೆಳಿಗ್ಗೆ 10.30ಕ್ಕೆ ವಿಜಯಪುರದ ಕೃಷಿ ಡೀನ್ ಅವರ ಕಚೇರಿಯಲ್ಲಿ ಏರ್ಪಡಿಸಿದ ಸಂದರ್ಶನವನ್ನು ಮುಂದೂಡಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳು ತಿಳಿಸಿದ್ದಾರೆ.ಗುತ್ತಿಗೆ ಆಧಾರದ ಮೇಲೆ ಮೀಸಲಾತಿ ಅನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಧಾರವಾಡದ ಕೃಷಿ ಮಹಾವಿದ್ಯಾಲಯದಲ್ಲಿ ಸಂದರ್ಶನ ನಡೆಸಲು ನಿರ್ಧರಿಸಲಾಗಿದ್ದು,ಸಂದರ್ಶನ ದಿನಾಂಕ ಶೀಘ್ರ ತಿಳಿಸಲಾಗುವುದೆಂದೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಹಕರಿಸುವಂತೆ ಅವರು…

Read More

ನ.28ರಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ನ.24: ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ನವೆಂಬರ್ 28ರಿಂದ 30ರವರೆಗೆ ನಗರದ ಸೋಲಾಪುರ ರಸ್ತೆಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.ನ.28ರಂದು ಬೆಳಿಗ್ಗೆ 8 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.ನ.30ರಂದು ಸಂಜೆ 4 ಗಂಟೆಗೆ ನಡೆಯುವ ಮುಕ್ತಾಯ ಸಮಾರಂಭದಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ…

Read More

ಕನ್ನಡ ನಮ್ಮೆಲ್ಲರ ಉಸಿರಾಗಬೇಕು: ಡಾ.ಲಕ್ಷ್ಮಿದೇವಿ ಅಲ್ಕೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23 : ಕನ್ನಡ ಭಾಷೆಯ ಅಭಿಮಾನ ಇಟ್ಟುಕೊಳ್ಳಬೇಕು. ಈ ನಾಡಿನಲ್ಲಿ ಕನ್ನಡ ಕಡ್ಡಾಯಗೊಳಿಸಬೇಕು. ಕನ್ನಡ ನಮ್ಮೆಲ್ಲರ ಉಸಿರಾಗಬೇಕೆಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗ ಮುಖ್ಯಸ್ಥೆ ಡಾ. ಲಕ್ಷ್ಮಿದೇವಿ ಅಲ್ಕೋಡ ಅಭಿಪ್ರಾಯ ವ್ಯಕ್ತಪಡಿಸಿದರು.ರವಿವಾರ ಜಿಲ್ಲಾ, ತಾಲೂಕ ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಆಶ್ರಯದಲ್ಲಿ ಜರುಗಿದ ದತ್ತಿಗಳಾದ ದಿ. ಜಿ.ಎಸ್. ಬಗಲಿ ದತ್ತಿ, ದಿ.ಮಲ್ಲಪ್ಪ ಚಂದಪ್ಪ ಯಲಗೋಡ. ದತ್ತಿ, ದಿ. ಶಿವಮೂತೆ೯ಪ್ಪ ಪಾಟೀಲ ದತ್ತಿ. ಮಾತೋಶ್ರೀ…

Read More

ಪಂಚಮಸಾಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ವೀರಭದ್ರಪ್ಪ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23:ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ವಿಜಯಪುರದ ನೂತನ ಅಧ್ಯಕ್ಷರಾಗಿ ವೀರಭದ್ರಪ್ಪ ಆಯ್ಕೆಯಾಗಿದ್ದಾರೆ.ರವಿವಾರ ನಡೆದ ಜಿಲ್ಲಾಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಶಶಿಧರ ಸಾತಲಗಾಂವ ಜಿಲ್ಲಾಧ್ಯಕ್ಷರಾಗಿ ವೀರಭದ್ರಪ್ಪ, ಉಪಾಧ್ಯಕ್ಷರಾಗಿ ಎಸ್. ಬಿ. ಪಾಟೀಲ್,ಆರ್. ಡಿ. ಬಾಳಿ, ಕಾರ್ಯಾಧ್ಯಕ್ಷರಾಗಿ ಈರಣ್ಣ ಹೊಸಟ್ಟಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ಉಗಾರ ಅವರು ಆಯ್ಕೆಯಾದರು.ಸಭೆಯಲ್ಲಿ ಇಂಡಿ ನೌಕರರ ಸಂಘದ…

Read More

ವೃಕ್ಷಥಾನ್ ಹೆರಿಟೇಜ್ ರನ್: ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23: ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಆಯೋಜಿಸಲಾಗಿದ್ದ ನಿಬಂಧ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ರವಿವಾರ ಬೆಳಿಗ್ಗೆ ಗಗನ್ ಮಹಲ್ದಲ್ಲಿ ನಿಬಂಧ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಂಡು ಗಮನ ಸೆಳೆದಿದ್ದಾರೆ. ಕಳೆದ ವಾರ ನಗರದ ಪ್ರಾಚೀನ ಸ್ಮಾರಕಗಳನ್ನು ಕುಂಚದ ಮೂಲಕ ಬಿಡಿಸಿದ್ದ ಮಕ್ಕಳು ಇಂದು ಕಳೆದ ಒಂದು ದಶಕದಲ್ಲಿ ಬಸವನಾಡಿನ ಪರಿಸರದಲ್ಲಿ ಆಗಿರುವ ಅಮೂಲಾಗ್ರ ಬದಲಾವಣೆಯ ಕುರಿತು ನಿಬಂಧ ಬರೆಯುವ…

Read More