ಡಿ. 13 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್: ಜಿಲ್ಲಾ ನ್ಯಾಯಾಧೀಶ ಹರೀಶ್
ಸಪ್ತಸಾಗರ ವಾರ್ತೆ, ವಿಜಯಪುರ,ನ. 22: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ.ಎ ಅವರು ತಿಳಿಸಿದರು.ಶನಿವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ…


