ಮೆಡಿಕಲ್ ಕಾಲೇಜ್ ಹೋರಾಟ: ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 30:74 ದಿನ ಪೂರೈಸಿದ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟವು ನಾಳೆ 75 ನೇ ದಿನಕ್ಕೆ ಕಾಲಿಡುತ್ತಿದೆ. ರಾಜ್ಯ ಸರ್ಕಾರ ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಎಸಗಿರುವ ದ್ರೋಹವನ್ನು ಖಂಡಿಸಿ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಶಿವಾಜಿ ವೃತ್ತದಿಂದ ಗಾಂಧಿವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಜನಗಳ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ 20000 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ, ಯುವಜನ, ಮಹಿಳಾ, ಕೃಷಿ…


