ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು ಕಾಲಮಿತಿಯೊಳಗೆ ಒದಗಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.23 : ಜಿಲ್ಲಾ ಮಾನವ ಅಭಿವೃದ್ಧಿ ವರದಿ -2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ -2031 ವರದಿಯ ತಯಾರಿಕೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸರಿಯಾದ ಸಮಗ್ರ ಹಾಗೂ ನಿಖರ ದತ್ತಾಂಶ ಮಾಹಿತಿನ್ನು ಕಾಲ‌ಮಿತಿಯೊಳಗೆ ಒದಗಿಸುವ ಮೂಲಕ ಉತ್ತಮ ಫಲಿತಾಂಶಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ -2025 ಹಾಗೂ ಸಮಗ್ರ…

Read More

ರಾಜ್ಯಪಾಲರಿಗೆ ಅಗೌರವ: ಶಾಸಕರ ಅನರ್ಹಕ್ಕೆ ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 22:ಸಾಂವಿಧಾನಿಕ ಹುದ್ದೆಯಾಗಿರುವ ರಾಜ್ಯಪಾಲರನ್ನು ಅತ್ಯಂತ ಅಗೌರವದಿಂದ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ. ಕೂಡಲೇ ಈ ಎಲ್ಲ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಬೇಕು ಎಂಬ…

Read More

ರಾಜ್ಯಪಾಲರಿಗೆ ಅಡ್ಡಿ: ಶಾಸಕರ ಅನರ್ಹತೆಗೆ ಕಾರಜೋಳ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 23:ರಾಜ್ಯಪಾಲರು ತಮ್ಮ ಭಾಷಣ ಪೂರ್ಣಗೊಳಿಸಿ ಹೊರಟ ವೇಳೆ ಅವರನ್ನು ಅಡ್ಡಗಟ್ಟಿ ಅಗೌರವ ತೋರಿದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕೂಡಲೇ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರ ಚಂದ ಗೆಹ್ಲೋಟ ಒಬ್ಬ ಜನಹಿತ ಚಿಂತನೆಯ ರಾಜ್ಯಪಾಲರು, ದಲಿತ ವರ್ಗಕ್ಕೆ ಸೇರಿದ ಮಹಾನ್ ನಾಯಕನನ್ನು ಒಂದು ರೀತಿ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದೆ. ಈ…

Read More

ವಿವಿಧ ಪ್ರಕರಣದಲ್ಲಿ 1.37 ಕೋಟಿ ಜಫ್ತು: ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 21 :ವಿವಿಧ ಸೈಬರ್ ಪ್ರಕರಣ, ಸರ್ಕಾರಿ ಯೋಜನೆ ದುರಪಯೋಗ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 1,32,38, 183 ಕೋಟಿ ರೂ. ಹಣವನ್ನು ಜಪ್ತು ಮಾಡಿಕೊಳ್ಳುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಎಲ್ಲ ಪ್ರಕರಣದಲ್ಲಿ ಬಳಕೆಯಾಗಿದ್ದ ಸುಮಾರು 2.40 ಲಕ್ಷ ರೂ. ಮೌಲ್ಯದ ಮೊಬೈಲ್‌ಗಳನ್ನು ಸಹ ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ವಿವರಣೆ ನೀಡಿದರು.ಸೈಬರ್ ಪ್ರಕರಣಗಳು ಸೇರಿದಂತೆ ವಿವಿಧ ತೆರನಾದ ಪ್ರಕರಣವನ್ನು ಬೇಧಿಸುವಲ್ಲಿ…

Read More

ನೇರ–ದಿಟ್ಟ ವಚನಗಳ ಮೂಲಕ ಕಾಯಕಜೀವಿಗಳ ಧ್ವನಿಯಾದವರು ನಿಜಶರಣ ಅಂಬಿಗರ ಚೌಡಯ್ಯ-ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಜ.21: ವಚನ ಪರಂಪರೆ, ತನ್ನ ನೇರ ವಚನಗಳ ಮೂಲಕ ಸಾಮಾಜಿಕ ಸಮಾನತೆಯ ಸಾರಿದವರು ನಿಜಶರಣ ಅಂಬಿಗರ ಚೌಡಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಅಂಬಿಗರ ಚೌಡಯ್ಯ ಅವರು ಕೇವಲ ವಚನಕಾರ ಮಾತ್ರವಲ್ಲ, ಶ್ರಮಜೀವಿಗಳ ಆಶಯ…

Read More

ಗ್ರಾಮಗಳ ಅಭಿವೃದ್ಧಿಗಾಗಿ ಹೆಮ್ಮೆಯಿಂದ ಕೆಲಸ ನಿರ್ವಹಿಸಿ: ಕಲ್ಲಪ್ಪ ನಂದರಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 21:ಗ್ರಾಮಗಳ ಅಭಿವೃದ್ಧಿಗಾಗಿ ಹೆಮ್ಮೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಹೇಳಿದರು.ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮ ಪಂಚಾಯತಿ ಅಡಿ ಹಮ್ಮಿಕೊಂಡ ರೋಜಗಾರ ದಿವಸ ಕಾರ್ಯಕ್ರಮದಲ್ಲಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗವನ್ನು ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸುವುದು. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡಜನರ ಜೀವನೋಪಾಯದ ಮಟ್ಟ ಸುಧಾರಿಸುವುದು, ರಾಷ್ಟ್ರೀಯ ಗ್ರಾಮೀಣ…

Read More

ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಸಂಸ್ಕಾರದ ಪ್ರತೀಕ – ವಿಠ್ಠಲ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ.21: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡದ ಮೊಟ್ಟಮೊದಲ ಶಾಸನದಿಂದ ಹಿಡಿದು ಇಂದು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದು, ಅಷ್ಟ ದಿಗ್ಗಜರು ಜ್ಞಾನಪೀಠ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಕನ್ನಡದ ಅಭಿಮಾನ ಮೂಡಿಸಿದ ಪಾವನ ಪುಣ್ಯಭೂಮಿ ನಮ್ಮದು. ಕನ್ನಡ ನಮ್ಮ ತಾಯಿಭಾಷೆ, ಮಾತೃಭಾಷೆ, ನುಡಿ ಭಾಷೆಯಾಗಿ ನಾವೆಲ್ಲರೂ ಕನ್ನಡ ಭಾಷೆಯನ್ನು ಅಭಿಮಾನದಿಂದ ಪ್ರೀತಿಸಿ ಆರಾಧಿಸೋಣ. ಕನ್ನಡ ಭಾಷೆ ನಮ್ಮೆಲ್ಲರ ಸಂಸ್ಕೃತಿ ಸಂಸ್ಕಾರದ ಪ್ರತೀಕ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ…

Read More

ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ, ಸಿಂದಗಿ, ಜ. 20: ಪಟ್ಟಣದ ಆರಾಧ್ಯ ದೇವ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೇರವಣಿಗೆ ಮತ್ತು ರಥೋತ್ಸವ ನೀಲಗಂಗಾದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.ದೇವಸ್ಥಾನದಲ್ಲಿ ಮತ್ತು ಮಾರ್ಗ ಮಧ್ಯ ನೀಲಗಂಗಾ ದೇವಸ್ಥಾನ ಹಾಗೂ ಹಳೆ ಬಜಾರದ ಮಧ್ಯದಲ್ಲಿ ವಿಶ್ವನಾಥ…

Read More

16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.19:ನನ್ನ ಭಾರತ ನನ್ನ ಮತ-ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕೆ ಎಂಬ ಘೋಷ ವಾಕ್ಯದಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 25 ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಹಿನ್ನಲೆಯಲ್ಲಿ ನಡೆದ ಪೂರ್ವ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯುವಕರಲ್ಲಿ…

Read More

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಜ. 16 :ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ…

Read More