ರೈತ ವಿರೋಧಿ ಕ್ಯಾಬಿನೆಟ್ ನಿರ್ಧಾರ ಖಂಡಿಸಿ ಆಪ್ ಆಕ್ರೋಶ

ಪಂಜಾಬ್ ಮಾದರಿಯ ರೈತಪರ ಆಡಳಿತ ಜಾರಿಗೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು. 3: ರಾಜ್ಯ ಸರ್ಕಾರದ ಇತ್ತೀಚಿನ ಕ್ಯಾಬಿನೆಟ್ ನಿರ್ಧಾರ ರೈತರಿಗೆ ಅನ್ಯಾಯವಾಗಿದ್ದು, “ಬೆಳೆ ಬೆಳೆಯಬೇಡಿ, ಪರಿಹಾರ ಕೇಳಬೇಡಿ” ಎನ್ನುವ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆ ಕೊರತೆ, ಅತಿವೃಷ್ಟಿ, ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಸಾಲದ ಹೊರೆ ಸೇರಿದಂತೆ ಹಲವು ಸಮಸ್ಯೆಗಳಿಂದ ರೈತರು…

Read More

ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ- ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 3,ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು…

Read More

ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 3: ಮಿತಿಮೀರಿದ ಪ್ಲಾಸ್ಟಿಕ್‌ ಬಳಕೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಮುಂದಿನ ತಲೆಮಾರಿಗೆ ವಿಷಮುಕ್ತ ಪರಿಸರ ನೀಡಲು ಇಂದೇ ಪ್ಲಾಸ್ಟಿಕ್ ತ್ಯಜಿಸಿ. ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಭೂಮಿ, ಸಮುದ್ರ, ಜೀವಸಂಕುಲಕ್ಕೆ ಅಪಾಯವಾಗಿದೆ. ಅಂಗಡಿ, ಮಾರುಕಟ್ಟೆಗೆ ಹೋಗುವಾಗ ಮನೆಯಿಂದ ಬಟ್ಟೆ ಕೈಚೀಲ ತೆಗೆದುಕೊಂಡು ಹೋಗಬೇಕು….

Read More

ಮಳೆ ಅಭಾವ ಪರಿಸ್ಥಿತಿ ಎದುರಿಸಲು ಸಜ್ಜಾಗಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 3:ಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅವರು ಹೇಳಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮುಂಗಾರು ಮಳೆ…

Read More

ಮೋದಿ, ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಹಣ ದ್ವಿಗುಣದ ಆಮಿಷ!

ಸಾಮಾಜಿಕ ಜಾಲತಾಣಗಳಲ್ಲಿ AI ಆಧಾರಿತ ನಕಲಿ ಜಾಹೀರಾತುಗಳ ಅಬ್ಬರ – ಮೌನ ಯಾಕೆ ಸರ್ಕಾರ? ಜನರಲ್ಲಿ ಹೆಚ್ಚುತ್ತಿರುವ ಆತಂಕ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 3: “ಕೇವಲ ₹22 ಸಾವಿರ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಿ…”, “ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಹೊಸ ಯೋಜನೆ…”, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದಿಸಿದ ವಿಶೇಷ ಹೂಡಿಕೆ ಅವಕಾಶ…” – ಇಂತಹ ಶೀರ್ಷಿಕೆಗಳೊಂದಿಗೆ ಕಳೆದ ಒಂದು ತಿಂಗಳಿನಿಂದ ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿರುವ…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಮೊದಲ 30 ದಿನ: ಪ್ರಮುಖ ನಿರ್ಧಾರಗಳ ಸರಣಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಆಡಳಿತ, ಮೂಲಸೌಕರ್ಯ, ರೈತ ಕಲ್ಯಾಣ, ಉದ್ಯೋಗ, ಶಿಕ್ಷಣ, ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ.ಪ್ರಮುಖವಾಗಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳ ಗಡುವು, 2,500 ಚದರ ಅಡಿವರೆಗಿನ ಮನೆಗಳಿಗೆ ಓಸಿ ವಿನಾಯಿತಿಯೊಂದಿಗೆ ಶಾಶ್ವತ ವಿದ್ಯುತ್ ಸಂಪರ್ಕ,…

Read More

ಇಂಗ್ಲೀಷ್ ವ್ಯಾಕರಣ ಶಾಲೆಗೆ ಚಾಲನೆ: ಗ್ರಾಮೀಣ ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಲಿ – ಡಾ. ದೀಪಕ ಶಿಂಧೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 2: ಪ್ರಪಂಚದಲ್ಲಿಯೇ ಭಾರತೀಯರು ಮಾತನಾಡುವ ಇಂಗ್ಲೀಷ್ ಭಾಷೆ ಪರಿಪೂರ್ಣ ಹಾಗೂ ಪರಿಶುದ್ಧವಾಗಿದೆ ಎಂದು ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರು ಹಾಗೂ ಮೌಲ್ಯಮಾಪನ ಉಪಕುಲಸಚಿ ಡಾ. ದೀಪಕ ಶಿಂಧೆ ಹೇಳಿದರು.ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ವ್ಯವಹಾರ ಅಧ್ಯಯನ (ಬಿಬಿಎ) ಕಾಲೇಜಿನ ಆಶ್ರಯದಲ್ಲಿ ಆಯೋಜಿಸಿದ್ದ ‘ಇಂಗ್ಲೀಷ್ ವ್ಯಾಕರಣ ಶಾಲೆ’ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಇಂಗ್ಲೀಷ್ ಇಂದು ಅಂತರರಾಷ್ಟ್ರೀಯ ಭಾಷೆಯಾಗಿದ್ದು, ಶಿಕ್ಷಣ, ಉದ್ಯೋಗ ಹಾಗೂ…

Read More

ಡಾ. ಕಡ್ಲಿಮಟ್ಟಿಯವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 2: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ‌ ಆಯುರ್ವೇದ ವೈದ್ಯ ಪ್ರಶಸ್ತಿ ಲಭಿಸಿದೆ.ಮೈಸೂರಿನಲ್ಲಿ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಈ ಪ್ರಶಸ್ತಿ ನೀಡಿ ಗೌರವಿಸಿದೆ.ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಯನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠದ…

Read More

ಅನಿಲ ಪೈಪ್‌ಲೈನ್ ಬಳಿ ಸುರಕ್ಷತೆ ಪಾಲಿಸಿ: ಥಿಂಕ್ ಗ್ಯಾಸ್ ಜಾಗೃತಿ ಅಭಿಯಾನ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜು.2:ಭೂಗತ ಅನಿಲ ಪೈಪ್‌ಲೈನ್‌ಗಳ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಥಿಂಕ್ ಗ್ಯಾಸ್ ಸಂಸ್ಥೆ ಬಾಗಲಕೋಟೆ ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಶೇಷ ಸುರಕ್ಷತಾ ಜಾಗೃತಿ ಅಭಿಯಾನ ಆರಂಭಿಸಿದೆ.ಅನಿಲ ಪೈಪ್‌ಲೈನ್‌ಗಳ ಸಮೀಪ ಯಾವುದೇ ಉತ್ಖನನ ಕಾರ್ಯ ಕೈಗೊಳ್ಳುವ ಮುನ್ನ ಸಂಬಂಧಿತ ಇಲಾಖೆ ಹಾಗೂ ಥಿಂಕ್ ಗ್ಯಾಸ್ ಸಂಸ್ಥೆಯೊಂದಿಗೆ ಸಮನ್ವಯ ಸಾಧಿಸುವಂತೆ ಸರ್ಕಾರಿ ಇಲಾಖೆ, ಗುತ್ತಿಗೆದಾರರು, ಯುಟಿಲಿಟಿ ಸಂಸ್ಥೆಗಳು ಹಾಗೂ ಖಾಸಗಿ ಉತ್ಖನನ ಏಜೆನ್ಸಿಗಳಿಗೆ ಮನವಿ ಮಾಡಲಾಗಿದೆ. ಅನಧಿಕೃತ ಉತ್ಖನನದಿಂದ ಭೂಗತ ಅನಿಲ…

Read More