ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು ಆ.22:ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.*ಈ…

Read More

8 ರೌಡಿಶೀಟರ್ ಗಡಿಪಾರು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20:ಜಿಲ್ಲೆಯಲ್ಲಿ ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಬರುವ ಹಿನ್ನೆಲೆಯಲ್ಲಿ ಎಂಟು ಜನ ರೌಡಿಶೀಟರ್ ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕೊಲೆ, ಕೊಲೆಗೆ ಯತ್ನ, ಆಯುಧ ಕಾಯ್ದೆ, ದೊಂಬಿ, ಹಲ್ಲೆ, ಕನ್ನಾ ಕಳವು ಮುಂತಾದ ಅಪರಾಧಿಕ ಪ್ರಕರಣಗಳಲ್ಲಿ ಈ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.ಇನ್ನು 19 ಜನ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು…

Read More

ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ 19:ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at First Sight” ಎಂದು…

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಭುಗಿಲು ಪುಸ್ತಕ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…

Read More

ತ್ಯಾಗ, ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವ- ಅಮರೇಶ ಸಾಲಕ್ಕಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17 :ನಾವು ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ದೇಶಕ್ಕಾಗಿ ನಿಸ್ವಾರ್ಥವಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣೆಯಾಗಿದೆ ಎಂದು ಇತಿಹಾಸ ಉಪನ್ಯಾಸಕ ಅಮರೇಶ ಸಾಲಕ್ಕಿ ಹೇಳಿದರು.ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಷ್ಟು ಸುಲಭವಾಗಿ ಸಿಕ್ಕಿರುವುದಿಲ್ಲ. ಅದಕ್ಕಾಗಿ…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಪ್ರತಿ ಗಣೇಶ ಮಹಾಮಂಡಳಿಗೆ ರೂ.5001 ನೆರವು: ಶಾಸಕ ಯತ್ನಾಳ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ರೂ.5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಣೆ ಮಾಡಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ…

Read More

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More