ಕ್ರೀಡಾ ವಸತಿ ಶಾಲೆಗೆ ಅಬುಜಿರ್ ಮಕಾನದಾರ ಆಯ್ಕೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 16 : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಅಬುಜಿರ್ ಮಕಾನದಾರ ಈತನು ಹಾವೇರಿ ಜಿಲ್ಲೆಯ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ವೈ. ಬಿ. ಗಿರಣಿವಡ್ಡರ ತಿಳಿಸಿದ್ದಾರೆ.ತಾಲೂಕು ಮಟ್ಟ, ಜಿಲ್ಲಾ ಮಟ್ಟ, ಬೆಳಗಾವಿ ವಿಭಾಗಮಟ್ಟದಲ್ಲಿ ಯುವ ಜನ ಸೇವಾ ಇಲಾಖೆಯ ವತಿಯಿಂದನಡೆದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತನಾದಬಳಿಕ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ.ಈತನ ಸಾಧನೆಗೆ ಶಾಲೆಯ ಸಹ ಶಿಕ್ಷಕ…

Read More

ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಜಿಲ್ಲೆಯ ಇಂಡಿ ನಗರದ ಕೆಇಬಿ ಎದುರಿಗಿನ ಮಸೂತಿ ಹತ್ತಿರ ನಡೆದಿದೆ.ಇಂಡಿ ತಾಲೂಕಿನ ಹಿರೇ ಮಸಳಿ ಗ್ರಾಮದ ನಿವೃತ್ತ ಯೋಧ ಮಾರುತಿ ಕ್ಷತ್ರಿ (45)ಎಂಬ ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆದಿದೆ.ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೂವರು ಮುಸುಕುಧಾರಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದಾರೆ.ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ವೈದ್ಯರು ಕಣ್ಣಿಗೆ ಕಾಣುವ ದೇವರು: ಜನರ ನಂಬಿಕೆ ಉಳಿಸಿಕೊಳ್ಳಿ-ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.16:“ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು.ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ರಾಜ್ಯಪಾಲರ ಜತೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.“ಈ ವೃತ್ತಿಯಲ್ಲಿ…

Read More

ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 15 : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.​ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಶೇ.100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು…

Read More

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ 

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.15: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ…

Read More

ಸರ್ವರ್ ಸಮಸ್ಯೆ ಬಗೆಹರಿಸಿ –ಅಪ್ಪುರಾಜ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15:ಸರ್ವರ್ ಸಮಸ್ಯೆ ಬಗೆಹರಿಸಿ ಜನರಿಗೆ ಸಕಾಲಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.ಜಿಲ್ಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಮುಂಜಾನೆ 8 ಗಂಟೆಯಿಂದಲೇ ತಹಸೀಲ್ದಾರ್ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ದಿನವಿಡೀ ಕಾಯುವಂತಾಗಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ…

Read More

ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ ಹೊತ್ತಿಗೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15: ಕನಕದಾಸರ ಕೀರ್ತನೆಗಳು ಸಮಾನತೆ, ಮಾನವೀಯತೆ, ವೈಚಾರಿಕತೆಯ ಆಧಾರದ ಮೇಲೆ ಸ್ವಸ್ಥ ಸಮಾಜ ನಿರ್ಮಿಸುವ ಸಾಮಾಜಿಕ ಕಾಳಜಿ ಹೊಂದಿದ್ದು, ಅವು ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ಸಂಜೆ ಶ್ರೀ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಆನ್ ಲೈನ್ 116 ನೇ ಉಪನ್ಯಾಸದಲ್ಲಿ ‘ಕನಕದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ…

Read More

ಗ್ರಾಮೀಣ ಮಹಿಳೆಯರು ಸಾಹಿತ್ಯದ ಸಾಧಕರು – ಭಾರತಿ ಪಾಟೀಲಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, 14: ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರಸೀಮಿತಗೊಳಿಸದೇ ಅದರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮಜೀವನ ಸಾರ್ಥಕವಾಗುತ್ತದೆ.ರಾಜ್ಯಮಟ್ಟದ ಕೋ. ಚನ್ನಬಸಪ್ಪ ದತ್ತಿ ಪ್ರಶಸ್ತಿಗೆ ಈ ಬಾರಿ ರೂಪಾ ರಜಪೂತ ಆಯ್ಕೆಯಾಗಿದ್ದಾರೆ. ಗ್ರಾಮೀಣ ಮಹಿಳೆಯರೂ ಸಹಇಂದು ಸಾಹಿತ್ಯದ ಸಾಧಕರಾಗಿ ಹೊರಹೊಮ್ಮಿದ್ದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಕೋ. ಚನ್ನಬಸಪ್ಪ ದತ್ತಿ, ಸುಶೀಲಾಬಾಯಿ ಮತ್ತು ದಿ….

Read More

ರೋಜರ್ಸ್ ಅಂಡ್ ರೋವರ್ಸ್ ಘಟಕದ ಕಾರ್ಯಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.14:ನಗರದ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಪ್ರೆಸಿಡೆನ್ಸಿ ಶಿಕ್ಷಣಮಹಾವಿದ್ಯಾಲಯದ 2025-26 ನೇ ಸಾಲಿನ ರೋಜರ್ಸ್ ಅಂಡ್ ರೋವರ್ಸ್ಘಟಕದ ವತಿಯಿಂದ ಮಹಾ ವಿದ್ಯಾಲಯದ ಸಭಾಭವನದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಘಟನಾ ಆಯುಕ್ತ ಡಿ. ಬಿ. ಅತ್ತಾರ ಅವರು ಮಾತನಾಡಿ, “ವ್ಯಕ್ತಿ, ಪುಸ್ತಕ ಮತ್ತು ಸ್ಥಳ” ಎಂಬ ಮೂರು ಅಂಶಗಳು ವ್ಯಕ್ತಿತ್ವ ವಿಕಸನದ ಪ್ರಮುಖ ತಳಹದಿಗಳಾಗಿವೆ ಎಂದು ತಿಳಿಸಿದರು.ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ತರಬೇತಿ ಆಯುಕ್ತ ಎಸ್….

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ. 14:ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ…

Read More