ವಿಜಯಪುರದಲ್ಲಿ ರಾಣಿ ಚೆನ್ನಮ್ಮ ಭವ್ಯ ಪ್ರತಿಮೆ ಅನಾವರಣ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9 : ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಷ್ಠಾಪಿಸಲಾಗಿರುವ ಭವ್ಯ ಅಶ್ವಾರೂಢ ವೀರ ರಾಣಿ ಕಿತ್ತೂರ ಚೆನ್ನಮ್ಮ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಅನಾವರಣಗೊಳಿಸಿದರು.ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿ ಸೇರಿದಂತೆ ಹಲವಾರು ಸ್ವಾಮೀಜಿಗಳ ಪಾವನ ಸಾನ್ನಿಧ್ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೃಹತ್ ಕೆಂಪು ವಸ್ತ್ರವನ್ನು ಸರಿಸುವ ಮೂಲಕ ಮೂರ್ತಿಯನ್ನು ಅನಾವರಣಗೊಳಿಸಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಡಾ.ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ರಾಮಲಿಂಗಾರೆಡ್ಡಿ, ಭೈರತಿ ಸುರೇಶ, ಡಾ.ಎಚ್.ಸಿ….

Read More

ಕೃಷ್ಣಾಮೇಲ್ದಂಡೆಯೋಜನೆಗೆಕೇಂದ್ರಸರ್ಕಾರದಿಂದಸಿಗದಸಹಕಾರ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ವಿಜಯಪುರ, ಜ.9:“ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಚುನಾವಣೆ ಪ್ರಚಾರದ ವೇಳೆ…

Read More

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ: ಸಿದ್ದರಾಮಯ್ಯ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜ. 9:ವಿಜಯಪುರ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.ಶುಕ್ರವಾರ ವಿಜಯಪುರ ನಗರದ ದರಬಾರ ಹೈ ಸ್ಕೂಲ್ ಮೈದಾನದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳ ಉದ್ಘಾಟನೆಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಟ ಮಾಡಲಾಗಿದೆಹಿಂದೆ ಬಿಜೆಪಿ ಸರ್ಕಾರ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿತ್ತು. ಸಚಿವರಾದಎಂ.ಬಿ. ಪಾಟೀಲ ಹಾಗೂ ಶಿವಾನಂದ ಪಾಟೀಲ ಅವರು ಜಿಲ್ಲೆಯಲ್ಲಿಸರ್ಕಾರಿ ಮೆಡಿಕಲ್ ಗೆ ಬೇಡಿಕೆ ಇಟ್ಟಿದ್ದರು.ನಮ್ಮ ಸರ್ಕಾರ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪೂರ್ಣ ಅನುದಾನ ಕೊಡಿ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9 : ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರುವ ಬಜೆಟ್‌ನಲ್ಲಿ ಕಾಲೇಜು ಆರಂಭಕ್ಕೆ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮನವಿ ಮಾಡಿದರು.ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಡೆದ…

Read More

ವಿಜಯಪುರ ಜಿಲ್ಲಾ ಸಂಜೆವಾಣಿ ವರದಿಗಾರ ರುದ್ರಪ್ಪ ಆಸಂಗಿಯವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9:ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಹಾಗೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ರಾಜ್ಯದ 30 ಜಿಲ್ಲೆಗಳ 40 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಹಾ ಗೂ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಪ್ರಶಸ್ತಿಯು ನಗದು 50,000 ಹಾಗೂ ಫಲಕ ಹೊಂದಿದೆ. ಶ್ರೀಮತಿ ಸರಿತಾ ರೈ ಅವರಿಗೆ 2025ನೇ ಸಾಲಿನ ವಿಶೇಷ ಪ್ರಶಸ್ತಿ ಲಭಿಸಿದ್ದು, ಈ ಪ್ರಶಸ್ತಿ ನಗದು ಒಂದು ಲಕ್ಷ ರೂಪಾಯಿ ಹಾಗೂ ಫಲಕ ಹೊಂದಿದೆ.ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಪ್ರಸಕ್ತ ಸಾಲಿನ…

Read More

ರಾಯಣ್ಣ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಕುರುಬರ ನಿಯೋಗದಿಂದ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನೆರವೇರುತ್ತಿರುವ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಕೂಡಾ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕುರುಬ ಸಮಾಜದ ನಿಯೋಗವು ಸಿಎಂ ಸಿದ್ಧರಾಮಯ್ಯನವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಅಧ್ಯಕ್ಷ ರಾಜು ಕಗ್ಗೋಡ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಜಂಟಿಯಾಗಿ ಮಾತನಾಡಿ, ಮುಂದಿನ ಪೀಳಿಗೆಗೆ ಚೆನ್ನಮ್ಮಾ ರಾಯಣ್ಣ ಭಾಂದವ್ಯ ಮತ್ತು ನಿಷ್ಟೆಯ ಶೌರ್ಯ ಸಂದೇಶ ರವಾನೆಯಾಗಬೇಕು ಎಂದರು.ಕುರುಬ ಸಮಾಜದ ಹಲವಾರು ಗಂಭೀರ…

Read More

ಅಶ್ಲೀಲ ಸಾಹಿತ್ಯ ಮತ್ತು ಸಿನಿಮಾಗಳನ್ನು ನಿಷೇಧಿಸುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ಉತ್ತರ ಕರ್ನಾಟಕದಲ್ಲಿ ಅಶ್ಲೀಲ ಸಾಹಿತ್ಯ ಮತ್ತು ಸಂಗೀತದಿಂದಾಗಿ ಈ ಭಾಗದ ಮಕ್ಕಳ ಮನಸ್ಸಿನ ಮೇಲೆ ವ್ಯಾಪಕವಾದ ಪರಿಣಾಮಗಳು ಬೀರುತ್ತವೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಮಟ್ಟ ಕುಸಿಯುತ್ತಿದೆ. ಸಮಾಜದಲ್ಲಿ ಮೌಲ್ಯಗಳು ಕುಸಿತಗೊಂಡು ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ರಾಜ್ಯದ ಹಿತದೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಜಾನಪದ ಸಾಹಿತ್ಯ ಸಿನಿಮಾ/ಚಲನಚಿತ್ರಗಳಲ್ಲಿ ಹಿಂಸೆಯನ್ನು ಪ್ರಚೋದಿಸುವ ಬಂದೂಕು, ಮಚ್ಚು, ಲಾಂಗು, ರಾಬರಿ, ಐಟಂ ಸಾಂಗ್ ಮತ್ತು ಅತ್ಯಾಚಾರದಂತ ದೃಶ್ಯಗಳನ್ನು ಹೆಚ್ಚಾಗಿ ಬಳಸದಂತೆ ರಾಜ್ಯದಿಂದ ನಿಷೇಧಿಸಬೇಕು ಎಂದು ರಾಜ್ಯ…

Read More

ಜಿಲ್ಲೆಯ ಜನತೆ ಪರವಾಗಿ ಸಿ.ಎಂ. ಸಿದ್ದುಗೆ ಕೃತಜ್ಞತೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ರಾಜ್ಯದ ಸುದೀರ್ಘ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಾಖಲೆ ಮಾಡಿದ ಬಳಿಕ ಜಿಲ್ಲೆಗೆ ವೈದ್ಯಕೀಯ ಕಾಲೇಜಿನ‌ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳನ್ನು ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಸ್ವಾಗಿತಿಸಿ, ಕೃತಜ್ಞತೆ ಸಲ್ಲಿಸುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಗುರುವಾರ ನಗರದ ವಿಡಿಸಿಸಿ ಬ್ಯಾಂಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ಕಾಲದವರೆಗೆ…

Read More

ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8: ಮನುಕುಲಕ್ಕೆ ಸುಂದರ ಬದುಕಿನ ದಾರಿ ತೋರಿದ ಜಗತ್ತಿನ ಶ್ರೇಷ್ಠ ಸಂತ ಸಿದ್ಧೇಶ್ವರ ಸ್ವಾಮೀಜಿಯವರ ಜೀವನ, ಚಿಂತನೆಗಳು ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿವೆ ಎಂದು ನಿಜಶರಣಾನಂದ ಸ್ವಾಮೀಜಿಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಕಲ್ಲಯಾರೂಢ ಮಠದಲ್ಲಿ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ 3ನೇ ಗುರುನಮನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.ಅಧ್ಯಾತ್ಮದ ಮೇರು ಪರ್ವತ, ಸದ್ಗುಣಗಳ ಪ್ರತಿರೂಪವಾಗಿದ್ದ ಸಿದ್ದೇಶ್ವರ ಶ್ರೀಗಳು ಸರಳ ಜೀವನ, ಆಳವಾದ ಆಧ್ಯಾತ್ಮಿಕ ಜ್ಞಾನದೊಂದಿಗೆ ಜಾತಿ, ಮತ, ಪಂಥದ ಭೇದಭಾವವಿಲ್ಲದೆ ಎಲ್ಲರಿಗೂ ತತ್ವಶಾಸ್ತ್ರವನ್ನು ಅರ್ಥವಾಗುವ ಭಾಷೆಯಲ್ಲಿ…

Read More

ಸಿಎಂ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ : ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.8 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜನವರಿ 7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸಿ ಗುರುವಾರ ಸಂಭ್ರಮಾಚರಣೆ ಮಾಡಿತು.ಮುಖ್ಯಮಂತ್ರಿಗಳು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡುವ ಬಗ್ಗೆ ಘೋಷಿಸಿದ ಹಿನ್ನೆಲೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ…

Read More