ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 14:ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಳ್ಳಲಿರುವ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹಾಗೂ ವಿದ್ಯಾರ್ಥಿ ನಾಯಕ ಅಕ್ಷಯ್ ಕುಮಾರ್ ಅಜಮನಿ, ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ…

Read More

ಸಂವಿಧಾನದ ಆಶಯದಂತೆ ನಡೆಯುವುದಾದರೆ ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿ-ಪ್ರೊ. ಮಾಡ್ಯಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ. 14:ಭಾರತದ ಸಂವಿಧಾನದ ಆಶಯ ಎಲ್ಲರಿಗೂ ಸಮಾನ ಅವಕಾಶಗಳು ಸ್ಥಾನಮಾನಗಳು ಸಿಗಬೇಕೆಂಬುದಾಗಿದೆ. ಆದರೆ 1952 ರಿಂದ 2026 ರ ವರೆಗೆ ಇಂಡಿ ಕ್ಷೇತ್ರದಿಂದ ಯಾರು ಸಚಿವರಾಗಿಲ್ಲ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ 223 ಕ್ಷೇತ್ರಗಳಿಗೆ ಸಚಿವ ಸ್ಥಾನ ಸಿಕ್ಕಿದೆ.ಆದರೆ ಇಂಡಿಯು ಸಚಿವ ಸ್ಥಾನ ಸಿಗದ ಏಕೈಕ ವಿಧಾನಸಭಾ ಕ್ಷೇತ್ರವಾಗಿದೆ. ಇದೆ ತಿಂಗಳು ೨೦ರ ನಂತರ ಹೊಸ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಇಂಡಿ ಶಾಸಕ ಯಶಾವಂತರಾಯಗೌಡ ಪಾಟೀಲ ಅವರಿಗೆ ಸಚಿವಸ್ಥಾನ ನೀಡಬೇಕು ಎಂದು ಶಿವಯೋಗಪ್ಪ…

Read More

ನ್ಯಾಯಾಧೀಕರಣದ “ಐ” ತೀರ್ಪಿನ ಅಧಿಸೂಚನೆಗೆ ಹೋರಾಟ ಕುರಿತು ಪೂರ್ವಭಾವಿ ಸಭೆ 16ರಂದು

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 14:ನ್ಯಾ. ಬ್ರಿಜೇಶ್‌ಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣದ“ಐ” ತೀರ್ಪಿನಂತೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರದಮೇಲೆ ಒತ್ತಡ ಹೇರಲು ಮುಂದಿನ ಹೋರಾಟದ ರೂಪರೇಷತಯಾರಿಸುವದು ಮತ್ತು ಹೋರಾಟ ಸಮೀತಿ ರಚಿಸುವುದರ ಕುರಿತುಪೂರ್ವಭಾವಿ ಸಭೆಯನ್ನು ವಿಜಯಪುರ ನಗರದ ಅಂಬೇಡ್ಕರವೃತ್ತದ ಬಳಿ ಇರುವ ಡಾ. ಬಿ.ಆರ್.ಅಂಬೇಡ್ಕರ ಸಭಾ ಭವನದಲ್ಲಿಜೂ. 16ರಂದು ಬೆಳಗ್ಗೆ 10-30 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಸಭೆಗೆ ನೀರಾವರಿ ತಜ್ಞ ಡಾ. ಕೃಷ್ಣ ಕೋಲಾರ ಕುಲಕರ್ಣಿ, ಧಾರವಾಡ ಕೃಷಿವಿಶ್ವವಿದ್ಯಾಲಯದ ನಿವೃತ್ತ ಅಧ್ಯಾಪಕ ಡಾ. ರಾಜೇಂದ್ರಪೋದ್ದಾರ, ಜಿಲ್ಲಾ…

Read More

ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 13:ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ, ತಾಲ್ಲೂಕು ಮಟ್ಟದಲ್ಲಿ ರಿಂಗ್ ರಸ್ತೆ ಗ್ರಿಡ್ ನಿರ್ಮಾಣ, ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ, ಯುವ ಯುಗ ಸ್ಥಾಪನೆ, ನಕಲಿ ಫೈನಾನ್ಸ್ ಸ್ಕೀಂ, ರೌಡಿಗಳು ಹಾಗೂ ಡ್ರಗ್ಸ್ ಜಾಲ ನಿಗ್ರಹ, ಗ್ರಾಮೀಣ ಶಿಕ್ಷಣಕ್ಕೆ ಸಿಎಸ್ಆರ್ ನೀತಿ ರಚನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ…

Read More

ಡಾ. ಸುರೇಶ ಕಾಗಲ್ಕರ್ ಅವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಇತ್ತೀಚೆಗೆ ಬೆಂಗಳೂರಿನ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದರಾಜ್ಯಮಟ್ಟದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿವಿಜಯಪುರದ ಪ್ರಸಿದ್ಧ ಮೂತ್ರಪಿಂಡ ತಜ್ಞ ಡಾ. ಸುರೇಶ ಕಾಗಲ್ಕರ್ ಅವರಿಗೆರಾಜ್ಯಮಟ್ಟದ “ಪ್ರೈಡ್ ಆಫ್ ಕರ್ನಾಟಕ “ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಿನಿಮಾ ನಟ ಚೇತನಅಹಿಂಸ ಹಾಗೂ ಪ್ರಸಿದ್ಧ ವೈದ್ಯ ಪದ್ಮ ಪ್ರಕಾಶ ಹಾಗೂ ತಂಡದಅಧ್ಯಕ್ಷ ರಮೇಶ ಎಸ್.ಜಿ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರು.ವೇದಿಕೆ ಮೇಲೆ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್ ಹಾಗೂ ವಿಧಾನಸಭೆಯಪ್ರತಿಪಕ್ಷದ ನಾಯಕ ಆರ್. ಅಶೋಕ, ಚಲನಚಿತ್ರ ನಟ ಚೇತನಅಹಿಂಸ…

Read More

ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ…

Read More

ಬಾಗಲಕೋಟೆಯಲ್ಲಿ ಜೂ. 15 ರಂದು ಸುಧಾರಿತ ನರರೋಗ, ಅಪಸ್ಮಾರ ಉಚಿತ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜೂ. 13:ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನರರೋಗ ಮತ್ತು ಅಪಸ್ಮಾರ (ಫಿಟ್ಸ್) ರೋಗಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಲಭ್ಯವಾಗಿದೆ. ಜಾಗತಿಕ ಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಜೂ. 15ರಂದು ಸುಧಾರಿತ ನರರೋಗ ಮತ್ತು ಅಪಸ್ಮಾರ ಚಿಕಿತ್ಸಾ ವಿಶೇಷ ಸಮಾಲೋಚನಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಜೂನ್ 15 ರಂದು ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ…

Read More

ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಜಿಲ್ಲೆಯ ಜನರ ಬಹುಕಾಲದ ಕನಸಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ್ ದ್ಯಾಬೇರಿ ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಕರ್ಯ, ಆಸ್ಪತ್ರೆಯ ಸೌಲಭ್ಯಗಳು ಹಾಗೂ ಲಭ್ಯವಿರುವ ಸಂಪನ್ಮೂಲಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.ಪರಿಶೀಲನೆ ವೇಳೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ವಿಶೇಷಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ…

Read More

ಹೈಮಾಸ್ಟ್ ಅಳವಡಿಕೆ ಕಾಮಗಾರಿಗೆ ರೂ.1 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದವರು ವಾಸಿಸುವ ಕಾಲೊನಿಗಳಲ್ಲಿ ಹೈಮಾಸ್ಟ್ ಅಳವಡಿಸುವ ಕಾಮಗಾರಿಗೆ 2026-27ನೇ ಸಾಲಿನ ಕಾಲೊನಿ ಅಭಿವೃದ್ಧಿ/ಪ್ರಗತಿ ಕಾಲೊನಿ ಯೋಜನೆಯಡಿ ರೂ.1 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು.ತೊರವಿ ಗ್ರಾಮದ ಅತಾಲಟ್ಟಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹತ್ತಿರ, ಎಸ್.ಸಿ ಕಾಲೊನಿಯ ಹನುಮಾನ ದೇವಸ್ಥಾನ ಹತ್ತಿರ, ಇಂದಿರಾ ನಗರದ ಝೆಂಡಾ ಕಟ್ಟಿ ಹತ್ತಿರ, ಪರಿಶಿಷ್ಟ ಜಾತಿಯ ಸ್ಮಶಾನದಲ್ಲಿ, ಹರಳಯ್ಯ ಸಮಾಜದ ಮರಗಮ್ಮ…

Read More

ಜೂ. 16,17 ಅಪ್ರೆಂಟಿಸ್ ತರಬೇತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜೂನ್ 16 ಮತ್ತು 17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.ಧಾರವಾಡದಲ್ಲಿರುಬ ನಿಡೆಕ್ ಇಂಡಿಯಾ ಪ್ರೈ. ಲಿ.‌ ಕಂಪನಿ ತರಬೇತುದಾರ(Production Trainee) ಮತ್ತು ಅಪ್ರಂಟಿಸ್ ತರಬೇತಿಗಾಗಿ ಈ‌ ಕ್ಯಾಂಪಸ್ ಸಂದರ್ಶನ ನಡೆಸಲಿದೆ.ಐಟಿಐನ‌ ನಾನಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಜಿಲ್ಲೆಯ ನಾನಾ ಐಟಿಐ ಕಾಲೇಜಿನ…

Read More