ಮಹಿಳಾ ಸಾಧಕಿಯರಿಗೆ “ಅಕ್ಷರದ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ” ಪ್ರದಾನ | 16ನೇ ವರ್ಷದ ಯಶಸ್ವಿ ಸಮಾರಂಭಕ್ಕೆ ಸಾಕ್ಷಿಯಾದ ವಿಜಯಪುರ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 4 : ಭಾರತದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮದಿನದ ಅಂಗವಾಗಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ “ಅಕ್ಷರದ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ” ಪ್ರದಾನ ಸಮಾರಂಭವನ್ನು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ರಾಜ್ಯ ಸಮಿತಿ ವತಿಯಿಂದ ಶನಿವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ,…

Read More

ನಾಳೆ, ನಾಡಿದ್ದು ಗೋಳಗುಮ್ಮಟದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಮೊದಲ ಹೆಜ್ಜೆಯಾಗಿ ಕಲಾಧಾರಾ ವಿಶೇಷ ಕಾರ್ಯಕ್ರಮ: ಡಾ. ಸುಧಾಮೂರ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3 : ನಮ್ಮ ಸಾಂಸ್ಕೃತಿಕ ವೈಭವವನ್ನು ಪ್ರಪಂಚಾದ್ಯಂತ ಪಸರಿಸುವ ಕೆಲಸ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆಯಾಗಿ ಕಲಾಧಾರಾ ಎಂಬ ವಿಶೇಷ ಕಾರ್ಯಕ್ರಮ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯಸಭೆ ಸದಸ್ಯೆ ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಹೇಳಿದರು.ಶನಿವಾರ ವಿಜಯಪುರ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರ್ವಜನಿಕರ ಸಹಕಾರ ದೊರಕಿದರೆ ಪ್ರತಿ ವರ್ಷವೂ ಈ ಕಾರ್ಯಕ್ರಮವನ್ನು ಸಂಘಟಿಸುವ ಯೋಜನೆ ಹೊಂದಲಾಗಿದೆ ಎಂದರು.ಸಾಂಸ್ಕೃತಿಕ ಭವ್ಯತೆಯ ಪ್ರಸಾರದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,…

Read More

ಜ. 6ರಂದು ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3 : ವಿಜಯಪುರದ ಪವಾಡ ಬಸವೇಶ್ವರ ದೇವಾಲಯದಲ್ಲಿ ಜ.6 ರಂದು ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ ನಡೆಯಲಿದೆ ಎಂದು ಪಾರಂಪರಿಕ ವೈದ್ಯ ಪರಿಷತ್ ಜಿಲ್ಲಾ ಸಂಚಾಲಕ ಶಿವಾನಂದ ಜಂಗಿನಮಠ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಾತ, ಪಿತ್ತ, ಕಫ ಸೇರಿದಂತೆ ತ್ರಿದೋಷಗಳಿಗೆ ಪರಿಹಾರ ಕಲ್ಪಿಸುವ ವಿವಿಧ ಗಿಡಮೂಲಿಕೆಗಳು, ಅರೋಗ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಸಮಾವೇಶ ನಡೆಯಲಿದ್ದು, ಸಂಘದ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.ಪಾರಂಪರಿಕ…

Read More

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಹೋರಾಟಗಾರರ ಮೇಲಿನ ಪ್ರಕರಣ ರದ್ದುಗೊಳಿಸಿ- ಎನ್. ರವಿಕುಮಾರ್ ಒತ್ತಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 3: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಎಂದು ಟೀಕಿಸಿದ್ದಾರೆ.ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ…

Read More

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನೀರು ಬಿಡುಗಡೆ- ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಸಚಿವ ಎಂ. ಬಿ.‌ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ-…

Read More

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅವಧಿ ವಿಸ್ತರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ. 3 : 2025-26ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15ರವರೆಗ ವಿಸ್ತರಿಸಲಾಗಿದೆ.ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ದೂರವಾಣಿ : 083552_295523 ಹಾಗೂ ವಿಜಯಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ ಮೊ.8123710766 ತಾಲೂಕು ಬಸವನ ಬಾಗೇವಾಡಿ…

Read More

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅಗತ್ಯ: ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ ಜ.3: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆಯೋಜಿಸಲಾದ ಸಿರಿಧಾನ್ಯ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆನಂದ ಕೆ. ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅತ್ಯಗತ್ಯವಾಗಿದೆ. ಸಿರಿಧಾನ್ಯ ಆಹಾರ ಬಳಕೆ‌ ಮಾಡಬೇಕು.ಮಧುಮೇಹ, ರಕ್ತದೊತ್ತಡದಂತಹ ರೋಗಗಳಿಗೆ ಒಳಗಾಗುವುದನ್ನು ಕಾಣುತ್ತಿದ್ದೇವೆ. ಇಂತಹ ರೋಗಗಳಿಂದ ದೂರ ಉಳಿಯಲು ಸಿರಿಧಾನ್ಯಗಳು ಅತ್ಯಂತ ಸಹಕಾರಿ ಆಗಿವೆ ಎಂದು ಹೇಳಿದರು.ನಮ್ಮ ಹಿರಿಯರ ಆಹಾರ…

Read More

ಜ.5ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ ಜ.3:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದುಕೊರತೆಗಳನ್ನು ಆಲಿಸಲು ಜ.5ರ ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ. 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಆದ್ದರಿಂದ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜ.10 ರಿಂದ 17ರವರೆಗೆ ಸಿದ್ದೇಶ್ವರ ಜಾನುವಾರು ಜಾತ್ರೆ: ಅಚ್ಚುಕಟ್ಟು ಆಯೋಜನೆಗೆ ಜಿಲ್ಲಾಧಿಕಾರಿಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.3: ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ತಾಲೂಕಿನ ತೊರವಿಯಲ್ಲಿ ನಡೆಯುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ಜ.10ರಿಂದ 17ರವರೆಗೆ ನಡೆಯಲಿದ್ದು, ಜಾತ್ರೆಯನ್ನು ಅತ್ಯಂತ ಅಚ್ವುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಗಡಿ ಭಾಗವಾಗಿರುವುದರಿಂದ ಜಾತ್ರೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ…

Read More

ಚರ್ಮರೋಗ ತಜ್ಞ ಇನಾಮದಾರರಿಗೆ ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ….

Read More