ಇಂದಿರಾಗಾಂಧಿ ಮುಕ್ತ ವಿ.ವಿ. ಕೋರ್ಸ್ ಗಳಿಗೆ ಪ್ರವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1 : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ ) ದಿಂದ ಪ್ರಸಕ್ತ ಸಾಲಿನ ಪದವಿ ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜನೆವರಿ 31 ಕೊನೆಯ ದಿನವಾಗಿದೆ. ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದು, ಅಲ್ಲದೆ www.ignouadmission.samarth.edu.in ಕ್ಕೆ ಲಾಗಿನ್ ಆಗಿ ಆನ್ಲೈನ್ ಮೂಲಕ ನೊಂದಣಿ ಪಡೆಯಬಹುದಾಗಿದೆ ಹೆಚ್ಚಿನ…

Read More

ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲೆಗೆ ನೀಡಿದ ಕೊಡುಗೆ ಅಪಾರ -ಡಾ.ಔದ್ರಾಮ್

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್…

Read More

ಜಿಲ್ಲೆಯಲ್ಲಿ ಅಪಘಾತ ತಡೆಗೆ ಮುನ್ನೆಚ್ಚರಿಕಾ-ಸುರಕ್ಷತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ…

Read More

ಸಹಾಯ ಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.31:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ಸಾಮಾನ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳನ್ನುಪ್ರೋತ್ಸಾಹಿಸಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗಾಗಿ ಹಾಗೂ ಚಿತ್ರಕಲೆ-ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿಗಳನ್ನು…

Read More

ಕಡಲೆ ಬೆಳೆಗೆ ಕೀಟಬಾಧೆ: ಮುಂಜಾಗ್ರತಾ ಕ್ರಮ ವಹಿಸಲು ಸಲಹೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31:ಜಿಲ್ಲೆಯ ಪ್ರಮುಖ ಹಿಂಗಾರು ಬೆಳೆಗಳಲ್ಲಿ ಕಡಲೆ ಬೆಳೆ ಒಂದಾಗಿದೆ. ಪ್ರಸಕ್ತ ವರ್ಷದಲ್ಲಿ ಬೆಳೆದಿರುವ ಕಡಲೆ ಬೆಳೆಯಲ್ಲಿ ಅಲ್ಲಲ್ಲಿ ಕಾಯಿಕೊರಕದ ಕೀಟ ಬಾಧೆ ಕಂಡು ಬಂದಿದ್ದು, ಇಳುವರಿಯ ಮೇಲೆ ಪರಿಣಾಮ ಬೀರುವ ಕಾರಣ, ರೈತರು ಮುಂಜಾಗ್ರತಾ ಕ್ರಮವಾಗಿ, ಬಿತ್ತುವಾಗ ಪ್ರತಿ ಎಕರೆಗೆ 20 ಗ್ರಾಂ ಸೂರ್ಯಕಾಂತಿ ಅಥವಾ 20 ಗ್ರಾಂ ಜೋಳದ ಬೀಜಗಳನ್ನು ಕೂಡಿಸಿ ಬಿತ್ತಬೇಕು. ನಂತರ ಬೆಳೆಯು ಕಾಳು ಕಟ್ಟುವ ಹಂತದಲ್ಲಿದ್ದಾಗ ಪ್ರತಿ ಎಕರೆಗೆ 10 ಸೇರು ಚುರುಮುರಿ ಹೊಲದಲ್ಲಿ ಚೆಲ್ಲುವುದರಿಂದ ಪಕ್ಷಿಗಳಿಗೆ…

Read More

ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ವ್ಯಾಪಕ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಾದಕ ವಸ್ತು ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳದಂತೆ ಮಾದಕ ವಸ್ತು-ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ…

Read More

ನಾಗಠಾಣ: ವಿಶೇಷ ಸಾಧಕ ಮಕ್ಕಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ವಿಶೇಷ ಸಾಧಕ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಕೆಳದಿ ಚನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 1 ನೇ ವರ್ಗದ ವಿದ್ಯಾರ್ಥಿನಿಯರಾದ ಕು.ಅನುಶ್ರೀ ಹಾಗೂ ಕು.ಶ್ರೀನಿಧಿ ಬಂಡೆ ಮತ್ತು ಅರೇಬಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಫಲಕನಾಜ ಶಹರ ಅವರನ್ನು ಶಾಲೆಯ ವತಿಯಿಂದ…

Read More

ಅಲ್ಪಸಂಖ್ಯಾತರ ಓಲೈಕೆಗೆ ಅಕ್ರಮವಾಗಿ ಮನೆ ಹಂಚಿಕೆ ನಿರ್ಧಾರ ಖಂಡನೀಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ನಿಯಮಾವಳಿಗಳನ್ನು ಗಾಳಿಗೆ ತೂರಿ ಅಲ್ಪ ಸಂಖ್ಯಾತರನ್ನು ಓಲೈಸಲು ಕೋಗಿಲು ಸಂತ್ರಸ್ತರಿಗೆ ಅಕ್ರಮವಾಗಿ ಮನೆ ಹಂಚಿಕೆ ಮಾಡುತ್ತಿರುವುದು ಖಂಡನೀಯ ಹಾಗೂ ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬೆಂಗಳೂರಿನ ಯಲಹಂಕದ ಕೋಗಿಲುವಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಕುಟುಂಬಗಳನ್ನು ತೆರವು ಮಾಡಿದ ನಂತರ ಅವರಿಗೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ಮೂಲಕ ಮನೆಗಳನ್ನು ಜನವರಿ 1, 2026 ರಂದು ಹಸ್ತಾಂತರ…

Read More

ವಂದೇ ಮಾತರಂ ಗೀತೆ ರಾಷ್ಟ್ರೀಯ ಭಾವನೆಯ ಸಂಕೇತ: ಶಾಸಕ ಯಶವಂತಗೌಡ ಪಾಟೀಲ

ಸಪ್ತಸಾಗರ ವಾರ್ತೆ, ಇಂಡಿ, ಡಿ. 30: ನಮ್ಮ ದೇಶ ವಿಭಿನ್ನ ರಾಜ್ಯಗಳು, ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದೆ. ಆದರೆ ನಮ್ಮೆಲ್ಲರ ಚಿಂತನೆ ಒಂದೇ ಆಗಿರಬೇಕು ಎಂಬುದನ್ನು ವಂದೇ ಮಾತರಂ ಗೀತೆ ಪ್ರಚುರಪಡಿಸುತ್ತದೆ ಎಂದು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತಗೌಡ ಪಾಟೀಲ ತಿಳಿಸಿದ್ದಾರೆ.ಇಂಡಿ ನಗರದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ನಡೆದ ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಿಜಯಪುರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ,…

Read More

ಹೊಸ ವರ್ಷಾಚರಣೆ:ಬಿಗಿ ಬಂದೋಬಸ್ತ್-ಎಸ್ಪಿ ಲಕ್ಷಣ ನಿಂಬರಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಜಿಲ್ಲೆಯ ವಿಜಯಪುರ ನಗರ, ತಾಲೂಕಾ ಮಟ್ಟದ ಹಾಗೂ ಹೋಬಳಿ ಮಟ್ಟದ ನಗರಗಳಲ್ಲಿ 2026 ರ – ಹೊಸ ವರ್ಷಾಚರಣೆ ಮಾಡುವ ಕಾಲಕ್ಕೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಮುಂಜಾಗ್ರತೆ ವಹಿಸಿ, ಜಿಲ್ಲೆಯ ಎಲ್ಲ ಹೋಟೆಲ್, ಲಾಡ್ಜ್, ರೆಸ್ಟೋರೆಂಟ್ ಹಾಗೂ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟ ಮಾಲೀಕರು, ಮ್ಯಾನೇಜರುಗಳ ಸಭೆ ಕೈಕೊಂಡಿದ್ದು, ಸಭೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಎಲ್ಲ ಅಗತ್ಯ ಮುಂಜಾಗ್ರತೆ ಕ್ರಮ ವಹಿಸುವ ಕುರಿತು ಸೂಚಿಸಿದ್ದಲ್ಲದೇ…

Read More