ಎಸ್‌ಐಆರ್ ಪ್ರಕ್ರಿಯೆಶೇ.90 ಮ್ಯಾಪಿಂಗ್ ಪೂರ್ಣ:ಜಿಲ್ಲಾಧಿಕಾರಿ ಡಾ. ಆನಂದ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.4:ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.90ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು…

Read More

ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಕಿತ್ತೂರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 4:ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾಗಿ ರವಿ ಕಿತ್ತೂರ ನೇಮಕಗೊಂಡಿದ್ದಾರೆ.ಸಮಾಜಮುಖಿ ಹಾಗೂ ಸೃಜನಾತ್ಮಕ ಚಟುವಟಿಕೆಯಲ್ಲಿ ಸದಾ ತಮ್ಮನ್ನು ತಾವು ತೊಡಗಿಸಿಕೊಂಡು, ಸಾಮಾಜಿಕ ಹೋರಾಟ ಮತ್ತು ದಲಿತಪರ ಚಿಂತನೆಯ ವ್ಯಕ್ತಿಗಳಾದರವಿ ಕಿತ್ತೂರ ಅವರನ್ನು ವಿಜಯಪುರ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬಗ್ಗೆ ದಲಿತ ಸಾಹಿತ್ಯ ಪರಿಷತ್ ಬೆಳಗಾವಿ ವಿಭಾಗದ ಸಂಯೋಜಕ ಮೋಹನ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗೋವಿಂದಪುರ ಹತ್ಯಾಕಾಂಡ: ಮತ್ತೆ ಆರು ಜನರ ಬಂಧನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಭೀಮಾತೀರದ 6 ಜನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಪ್ರಮುಖ ಆರೋಪಿ ಸೇರಿ 6 ಜನರನ್ನು ಫೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ ಸೇರಿದಂತೆ 6 ಜನರನ್ನು ವಶಕ್ಕೆ ಪಡೆಯಲಾಗಿದೆ.ಕಳೆದ ಮೇ 29 ರಂದು ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡದಲ್ಲಿ ಚಂದ್ರಕಾಂತ ನಿರಾಳೆ, ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್‌, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬಿರ್‌ ಅತ್ತಾರ ಅವರು ಭೀಕರವಾಗಿ ಕೊಲೆಯಾಗಿದ್ದರುಜೂನ್ 1 ರಂದು…

Read More

ಸಂವಿಧಾನದ ಪ್ರತಿ ಹಿಡಿದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಸಪ್ತಸಾಗರ ವಾರ್ತೆ,ಬೆಂಗಳೂರು: ಜೂ.03: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಭಾರತದ ಸಂವಿಧಾನ ಪ್ರತಿ ಹಿಡಿದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಬೋಧಿಸಿದ ಗೌಪ್ಯತಾ ಪ್ರಮಾಣ ವಚನವನ್ನು ಶಿವಕುಮಾರ್ ಅವರು ಬುಧವಾರ ಸ್ವೀಕರಿಸಿದರು.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕಾಂಗ್ರೆಸ್…

Read More

ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಯುತ ಸಮಾಜ ನಿರ್ಮಿಸಿ-ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 3: ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ…

Read More

ನಿಸ್ವಾರ್ಥದಿಂದ ಬದುಕಿ ಬೇರೊಬ್ಬರಿಗೆ ಬೆಳಕಾಗಿ: ಎನ್.ಎಂ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 2:ಐಸ್‌ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನವಾಗಿರುತ್ತದೆ. ಐಸ್‌ಕ್ರೀಮ್ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದುಹೇಳಿದರೆ ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟುಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕುನೀಡುವಂತಾಗಬೇಕು. ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ. ಬಿರಾದಾರ ಹೇಳಿದರು.ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ…

Read More

ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಜಗದೀಶ ಶೆಟ್ಟರ್

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 2 :ಬಿಜೆಪಿ ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.ಕೊಲ್ಹಾಪೂರ ಕನೇರಿಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸನ್ನಿಧಿಯಲ್ಲಿ ನಡೆದ ವಿಜಯಪುರ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಶಿಬಿರವನ್ನು ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಎಂಬುದು ತತ್ವಾಧಾರಿತ ಸಿದ್ಧಾಂತವುಳ್ಳ ಪಕ್ಷ, ಆದರೆ ಕಾಂಗ್ರೆಸ್ ಪಕ್ಷ ಕೇವಲ ಕುಟುಂಬ ಹಾಗೂ ವೋಟ್ ಬ್ಯಾಂಕ್ ಆಧಾರಿತ ರಾಜಕಾರಣವನ್ನು ಮೈಗೂಢಿಸಿಕೊಂಡಿದೆ. ಕೋಟ್ಯಂತರ…

Read More

ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 2 :ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಸಂಚಾಲಕ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ.ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ,ಟ್ರಾಮಾ ಸೆಂಟರ್…

Read More

ಜೂನ್ 3ರಂದೇ ಕಾಂಗ್ರೆಸ್ ಕಚೇರಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಲೋಚನೆ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ಸಪ್ತಸಾಗರವಾರ್ತೆಬೆಂಗಳೂರು, ಮೇ 31: ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಸಮಯ ನಿಗದಿ ಬಾಕಿ ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ ಸಾರ್ವಜನಿಕರ ತೊಂದರೆ ನಿವಾರಣೆಗೆ ಲೋಕಭವನದಲ್ಲಿ ಪ್ರಮಾಣ ವಚನ “ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇನ್ನಷ್ಟೇ ಸಮಯ ನಿಗದಿ…

Read More

ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಜೂನ್ 9 ಮತ್ತು 10 ರಂದು ಬೃಹತ್ ಹೋರಾಟ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 31:ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದ ಪ್ರವಾಸಿ ಮಂದಿರದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಹೋರಾಟದ ಪೂರ್ವಭಾವಿ ಕಾರ್ಯಾಗಾರ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಸಭೆಯಲ್ಲಿ ಪ್ರಶಿಕ್ಷಣಾರ್ಥಿಗಳು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿ ದೊರೆಯುತ್ತಿಲ್ಲ. ಜೊತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಸುಮಾರು ಎರಡುವರೆ ಲಕ್ಷ ರೂಪಾಯಿವರೆಗೆ ನಿಯಮಬಾಹಿರವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು…

Read More