ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ ಫೆ.28:ಜಿಲ್ಲೆಯ ಹದಿಮೂರು ತಾಲೂಕಿನ 64 ಪರೀಕ್ಷಾ ಕೇಂದ್ರಗಳಲ್ಲಿ (ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಶನಿವಾರ ಕನ್ನಡ ಮತ್ತು ಅರೆಬಿಕ್ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ‌.ಕೆ ಅವರು ನಗರದ ವಿ.ಬಿ. ದರಬಾರ ಕಾಲೇಜ್, ಎಸ್.ಎಸ್. ಪದವಿ ಪೂರ್ವ ಕಾಲೇಜ್ ಹಾಗೂ ಖೇಡ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಸುಸೂತ್ರ ಹಾಗೂ ಸುಗಮ ಪರೀಕ್ಷೆ ನಡೆಸಲು‌ ಕೈಗೊಳ್ಳಲಾದ ವ್ಯವಸ್ಥೆ ಕುರಿತಾಗಿ ಪರಿಶೀಲನೆ ನಡೆಸಿ,ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.ವಿದ್ಯಾರ್ಥಿಗಳು ಯಾವುದೇ…

Read More

ಶಾಸಕ ಯತ್ನಾಳರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 28:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ನೀಡುವ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ನೀಡಿ ಈಚೆಗೆ ಗೌರವಿಸಲಾಗಿದೆ.ಮಂತ್ರಾಲಯದ ಶ್ರೀ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಡಾ.ಶ್ರೀ 108 ಶ್ರೀ ಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಷ್ಠಿತ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದೇಶ ಕಂಡ ಶ್ರೇಷ್ಠ ಪ್ರಧಾನಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇತಿ ಸರ್ಕಾರದಲ್ಲಿ…

Read More

ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಶೆಟ್ಟಿಹಳ್ಳಿಯಲ್ಲಿ ಪಾದಚಾರಿ ಸಬ್‌ವೇ ಉದ್ಘಾಟನೆ, ಕ್ಯಾಸಂದ್ರದಲ್ಲಿ ಪಾದಚಾರಿ ಮೇಲ್ಸೇತುವೆಗೆ ಶಿಲಾನ್ಯಾಸ

ಸಪ್ತಸಾಗರ ವಾರ್ತೆ,ತುಮಕೂರ, ಫೆ. 27:ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆಯ ಶೆಟ್ಟಿಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪಾದಚಾರಿ ಸಬ್‌ವೇ ಅನ್ನು ಉದ್ಘಾಟಿಸಿ, ಕ್ಯಾಸಂದ್ರ ರೈಲು ನಿಲ್ದಾಣದಲ್ಲಿ ಹೊಸ ಪಾದಚಾರಿ ಮೇಲ್ಸೇತುವೆ (FOB) ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸೋಮಣ್ಣ ಅವರು, ಹೊಸ ಪಾದಚಾರಿ ಸಬ್‌ವೇ ಮೂಲಕ ಸ್ಥಳೀಯ ನಿವಾಸಿಗಳು ರೈಲು ಹಳಿಗಳನ್ನು ಸುರಕ್ಷಿತವಾಗಿ ಮತ್ತು ಸುಲಭವಾಗಿ ದಾಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತುಮಕೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು…

Read More

ಉದ್ಯಾನವನ- ರಸ್ತೆ ಮಧ್ಯೆ ಕಾಮ ದಹನ ನಿಷೇಧ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 27:ಉದ್ಯಾನವ, ರಸ್ತೆ ಮಧ್ಯೆ ಕಾಮ ದಹನ ನಿಷೇಧಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಪಾಲಿಕೆಯ ವ್ಯಾಪ್ತಿಯ ಉದ್ಯಾನವಗಳಲ್ಲಿ ಕಾಮ‌ದಹನ ಮಾಡುವುದರಿಂದ ಪರಿಸರ ಮಾಲಿನ್ಯ, ಉದ್ಯಾನವನಗಳ ಅಲಂಕಾರಿಕ ಗಿಡಗಳಿಗೆ ಹಾನಿ ಉಂಟು ಆಗುವ ಹಾಗೂ ಬೆಂಕಿ ಅವಘಡ ಸಂಭವಿಸುವ ಸಾಧ್ಯತೆ ಇರುತ್ತದೆ. ಇದರಿಂದ, ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ.ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ಯಾನವನಗಳಲ್ಲಿ ಕಾಮ ದಹನವನ್ನು ಸಾರ್ವಜನಿಕ ರಸ್ತೆ, ಆಸ್ತಿ ಪಾಸ್ತಿಗಳಿಗೆ ಹಾನಿಯಾಗದಂತೆ ಆಚರಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ತಡೆಗಟ್ಟಿ : ಶೀಘ್ರವೇ ಖಾಯಂ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಫೆ. 27 :ಕರ್ನಾಟಕದ ಎಲ್ಲಾ ವರ್ಗದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಇಂದು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಶೀಘ್ರವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಾಡಿನ ಯುವಜನರಿಗೆ ಖಾಯಂ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಕುರಿತು ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಈಗಾಗಲೇ ದಲಿತ ವಿದ್ಯಾರ್ಥಿ ಪರಿಷತ್ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಹಲವು ಹೋರಾಟದ…

Read More

ಕೃಷಿಯೊಂದಿಗೆ ಮೌಲ್ಯ ವರ್ಧನೆ ಕಲಿತು ಹೆಚ್ಚಿನ ಲಾಭ ಹೊಂದಿ:ಸಂಗಮೇಶ

ಸಪ್ತಸಾಗರ ವಾರ್ತೆ,ತಾಳಿಕೋಟೆ, ಫೆ. 27:ಆಧುನಿಕ ಜಗತ್ತಿನಲ್ಲಿ ಹೆಚ್ಚುತ್ತಿರುವ ಖರ್ಚಿಗೆ ಅನುಗುಣವಾಗಿ ಕೇವಲ ಕೃಷಿ ಮಾಡಿದರೆ ಸಾಲದು ಬೆಳೆದ ಬೆಳೆಗಳನ್ನು ಮೌಲ್ಯ ವರ್ಧನೆ ಮಾಡಿ ಉಪ ಉತ್ಪನ್ನಗಳನ್ನು ಸ್ವತಃ ಮಾರಾಟ ಮಾಡುವುದರಿಂದ 4-5 ಪಟ್ಟು ಲಾಭ ಪಡೆಯಬಹುದು. ಅಂದಾಗ ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸಬಲರಾಗಿ ಸಮಾಜದಲ್ಲಿ ಉನ್ನತ ರೀತಿಯಲ್ಲಿ ಬದುಕಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಹೇಳಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ರೈತ ಸ್ವಾವಲಂಭಿ ಸಂಘಟನೆ ಪೌಂಢೇಶನ್ ಸಹಯೋಗದಲ್ಲಿ ವಿಜಯಪುರ…

Read More

ಯುಗಾದಿ ಹಬ್ಬದ ನಿಮಿತ್ತ ವಿಶೇಷ ಸಾರಿಗೆ ವ್ಯವಸ್ಥೆ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.27: ಯುಗಾದಿ ಹಬ್ಬದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಮಾ.11 ರಿಂದ 22ರವರೆಗೆ ಶ್ರೀಶೈಲದಲ್ಲಿ ಜರುಗುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ತಿಳಿಸಿದ್ದಾರೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ಘಟಕ ಕೇಂದ್ರ ಸ್ಥಾನಗಳಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಪ್ರಯಾಣಿಕರಿಗೆ ವಿಜಯಪುರ…

Read More

ಫೆ. 28ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 26:ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 28ರಂದು ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಅರ್ಜುನ ಲಮಾಣಿ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುವರ್ಣ ಸಂಭ್ರಮ ಲೋಕಾರ್ಪಣೆ ಮಾಡಲಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ…

Read More

ಕರ್ನಾಟಕ ದರ್ಶನ ಪ್ರವಾಸಕ್ಕೆ‌ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 26 :2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ -ಟಿ.ಎಸ್.ಪಿ ಯೋಜನೆಯಡಿಯಲ್ಲಿ ವಿಜಯಪುರ ನಗರ- ಗ್ರಾಮೀಣ ವಲಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ 8. 9 ಹಾಗೂ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಕರ್ನಾಟಕ ದರ್ಶನ ಕಾರ್ಯಕ್ರಮವನ್ನು ನೋಡಲ್ ಏಜೆನ್ಸಿ ಕೆ.ಎಸ್.ಟಿ.ಡಿ.ಸಿ ಮೂಲಕ 5 ದಿನಗಳ ಪ್ರವಾಸ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ‌ ನೀಡಿದರು.‌ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು, ಪ್ರವಾಸವು ಕೇವಲ ಮನರಂಜನೆಗಾಗಿ ಅಲ್ಲ. ರಾಜ್ಯದ ಭವ್ಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತ್ಯಕ್ಷವಾಗಿ ಕಂಡು…

Read More

ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ ಫೆ.26:ನಮ್ಮ ದೇಶದಲ್ಲಿ ಶೇ.70 ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು, ಗ್ರಾಮ ಅಭಿವೃದ್ಧಿ ಅವಶ್ಯಕತೆಯಿದೆ ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.‌ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ‌ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಮಹಿಳೆಯರ ಸಬಲೀಕರಣ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ…

Read More