ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ 22:ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ ಸಂವಾದ”ದಲ್ಲಿ ಮಾತನಾಡಿದರು.ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ…

Read More

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 22:2026-27 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಹೀಗಿರಬೇಕು. ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ…

Read More

ಪ್ರಕೃತಿ ವಿಕೋಪ: ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 22:ಮುಂಗಾರು ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಮಳೆಗಾಲದಲ್ಲಿ ಪ್ರಕೃತಿ ವಿಕೋಪ, ಪ್ರವಾಹದಲ್ಲಿ ಜೀವ ಹಾನಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಗಳು ಮೊದಲ ಆದ್ಯತೆ ನೀಡುವುದರೊಂದಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಶುಕ್ರವಾರ 2026-27 ನೇ ಸಾಲಿನ ಮುಂಗಾರು ಮಳೆ ಅವಧಿಯ ಪೂರ್ವಸಿದ್ಧತೆ ಕುರಿತ ಜಿಲ್ಲಾ…

Read More

ಶೈಲಾ ದೊಡ್ಡಮನಿಗೆ ಪಿಎಚ್ ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 22:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೈಲಾ ದೊಡ್ಡಮನಿ ಅವರು ಸಲ್ಲಿಸಿದ್ದ “ಎ ಸ್ಟಡಿ ಆನ್ ವುಡ್ ಟೆಕ್ಸ÷್ಚರ್ ಇಮೇಜ್ ಅನಾಲಿಸಿಸ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಶೈಲಾ ದೊಡ್ಡಮನಿ ಅವರು ಗಣಕ ವಿಜ್ಞಾನ ವಿಭಾಗದ ಡಾ. ರೋಹಿಣಿ ಎ. ಭೂಸನೂರಮಠ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೈಲಾ ದೊಡ್ಡಮನಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ…

Read More

ಭಯೋತ್ಪಾದನೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 21:ಭಯೋತ್ಪಾದನೆಯು ಇಡೀ ಮಾನವಕುಲಕ್ಕೆ ದೊಡ್ಡ ಶಾಪವಾಗಿದ್ದು, ಜನರಲ್ಲಿ ಶಾಂತಿ, ಏಕತೆ, ಸಾಮರಸ್ಯ, ಮಾನವೀಯತೆಯನ್ನು ಜೀವಂತವಾಗಿಟ್ಟಾಗ ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಕಾರ್ಯಕ್ರಮದಲ್ಲಿ ‘ಭಯೋತ್ಪಾದನೆ- ಮಾನವೀಯತೆಗೆ ಮಾರಕ’ ಕುರಿತು ಅವರು ಮಾತನಾಡಿದರು.ಯುವ ಜನತೆಗೆ ದೇಶಭಕ್ತಿ, ಸತ್ಯ, ಅಹಿಂಸೆಯ ಮೌಲ್ಯ ತಿಳಿಸಿಕೊಟ್ಟು, ಅವರು ತಪ್ಪು ದಾರಿಗೆ…

Read More

ಮನೆಯ ಮೇಲ್ಛಾವಣೆ ಕುಸಿದು ವೃದ್ಧೆ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 21:ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾಗಿರುವ ದುರಂತಜಿಲ್ಲೆಯ ನಿಡಗುಂದಿ ಪಟ್ಟಣದಗೌರೀಶ್ವರ ದೇವಸ್ಥಾನ ಬಳಿ ಗುರುವಾರ ನಸುಕಿನಲ್ಲಿ ನಡೆದಿದೆ.ನಿಡಗುಂದಿ ನಿವಾಸಿ ಮಹಾದೇವಿ ವಾರದ (55) ಮೃತಪಟ್ಟ ಮಹಿಳೆ.ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಚಾವಣಿ ಕುಸಿದು ಈ ಅವಘಡ ಸಂಭವಿಸಿದೆ.ನಸುಕಿನ ಜಾವ ಮನೆಯ ಮೇಲ್ಚಾವಣಿ ಕುಸಿದು ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.ಮನೆಯ ಹೊರಗೆ ಮಲಗಿದ್ದ ಪತಿಶಿವಾನಂದ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾದೇವಿ…

Read More

ವಿದ್ಯುತ್ ಚಿತಾಗಾರ ನಿರ್ಮಾಣ: ಶಾಸಕ ಯತ್ನಾಳ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 20:ನಗರದ ವಾರ್ಡ್ ನಂ.8 ರಲ್ಲಿ ಬರುವ ಚಾಲುಕ್ಯ ನಗರ ಪೂರ್ವ ಭಾಗದ ದೇವಗಿರಕರ ಸ್ಮಶಾನದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಂಜೂರಿಸಲಾದ ರೂ.4 ಕೋಟಿ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಸಕರಾತ್ಮಕವಾಗಿ ಸ್ಪಂದಿಸಿದರು. ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಅಶೋಕ…

Read More

ವಿಜಯಪುರದ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 20:ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಅನುಭವಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಕ್ರಮ ಶುಲ್ಕ ವಸೂಲಿ ಹಾಗೂ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಕಾರ್ಮಿಕರು ಬಸ್ ನಿಲ್ದಾಣವನ್ನು ಅವಲಂಬಿಸಿಕೊಂಡಿದ್ದರೂ, ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿ ಎದ್ದು…

Read More

ಬಸವನ ಬಾಗೇವಾಡಿಯಲ್ಲಿ ಇಂಧನ, ಅಡುಗೆ ಅನಿಲ ಕೃತಕ ಅಭಾವ: ದಾಸ್ತಾನು ಪರಿಶೀಲಿಸಲು ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಮೇ. 20:ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್, ಡೀಸೆಲ್ ಹಾಗೂ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೃತಕ ಅಭಾವ ಸೃಷ್ಟಿಯಾಗುತ್ತಿದ್ದು, ಸಾರ್ವಜನಿಕರು, ರೈತರು ಹಾಗೂ ಬಡ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಪಟ್ಟಣದ ಪೆಟ್ರೋಲ್ ಬಂಕ್‌ಗಳಲ್ಲಿ ಸಕಾಲಕ್ಕೆ ಇಂಧನ ಸಿಗದೆ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಡೀಸೆಲ್ ನಂಬಿಕೊಂಡಿರುವ ರೈತರು ನಿತ್ಯ ಪರದಾಡುವಂತಾಗಿದೆ. ಇನ್ನೊಂದೆಡೆ,…

Read More

ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿದ್ಧ:ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಮೇ 20:“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಶಿವಕುಮಾರ್ ಅವರು ಬುಧವಾರ ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಆ ಭಾಗದ ರೈತರೊಂದಿಗೆ ಸಭೆ…

Read More