ಸದನದಲ್ಲಿ ನಿರುದ್ಯೋಗಿಗಳ ಪರ ಧ್ವನಿ ಎತ್ತಿದ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 10: ಅರ್ಹ ಯುವಕ ಯುವತಿಯರಿಗೆ ಉದ್ಯೋಗ ನೀಡಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಣವನ್ನೆಲ್ಲ ಬಳಸಿ, ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ ಎಂದು ಬಸನಗೌಡ ಪಾಟೀಲ ಯತ್ನಾಳ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ರಹಿತ ಪ್ರಶ್ನೆ ಸಂಖ್ಯೆ 400 ರ ಮೂಲಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿರುವ ಬಗ್ಗೆ ಮತ್ತು ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಗಮನ ಸೆಳೆದು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕೆಂದು…

Read More

ರಾಷ್ಟ್ರಮಟ್ಟದ ಸೈಕ್ಲಿಂಗ್ ನಲ್ಲಿ ಪುನೀತ ಬಿರಾದಾರಗೆ ಬೆಳ್ಳಿ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10 : ಭಾರತೀಯ ಸೈಕ್ಲಿಂಗ್ ಫೆಡರೇಶನ್ ಹಾಗೂ ಸೈಕ್ಲಿಂಗ್ ಅಸೋಶಿಯೇಶನ್ ಆಫ್ ಓರಿಸ್ಸಾ ಸಹಯೋಗದಲ್ಲಿ ಸಂಬಾಲಪುರಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ ಬಿರಾದಾರ 16 ವಯೋಮಾನದ ಬಾಲಕರ ವಿಭಾಗದ 30 ಕಿ.ಮೀ ಟೀಮ್ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ…

Read More

ಲಿಂಗ ತಾರತಮ್ಯ ಮತ್ತು ಬಾಲ್ಯ ವಿವಾಹ ಪದ್ಧತಿ ಕಿತ್ತೊಗೆಯಬೇಕು : ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10:ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಇರುವ ತಾರತಮ್ಯವನ್ನು ಕಡಿಮೆ ಮಾಡುವುದಲ್ಲದೆ ಇದನ್ನು ಸಮಾಜದಿಂದ ಬೇರು ಸಮೇತ ಕಿತ್ತೊಗೆಯುವ ಕಾರ್ಯವನ್ನು ಮಾಡಬೇಕು ಎಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಅರವಿಂದ ಎಸ್ ಹಾಗರಗಿ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ…

Read More

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪಾಲಕರ ಸಹಕಾರ ಅವಶ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ಮಕ್ಕಳಿಗೆ ಸಂವಹನ ಕಲೆಯನ್ನು, ಪ್ರಶಸ್ತಿ ಪಡೆದವರ ಸಾಧನೆಯನ್ನು ತಿಳಿಸುವುದು ಮತ್ತು ಅವರಿಗೆ ಶಿಕ್ಷಕರು ಪಾಲಕರು ಪ್ರೇರಣೆಯನ್ನು ನೀಡಿ ಸತ್ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಎ.ಎಸ್.ಹಿಪ್ಪರಗಿ ಪ್ರತಿಷ್ಠಾನ ಮತ್ತು ಸಮನ್ವಯ ಆಂಗ್ಲ ಮಾಧ್ಯಮಿಕ ಶಾಲೆ ಬ ಇವುಗಳ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷ್ಣಾಜಿ ದಂಪತಿ ಮತ್ತು ಶಂಭು ತುಪ್ಪದ ಕೊಡಮಾಡಿದ ದತ್ತಿ ದಾಸೋಹಿಗಳು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಇವರು…

Read More

ಅಹಿಂದ ವಿದ್ಯಾರ್ಥಿ ಪರಿಷತ್ ಘಟಕಕ್ಕೆ ರಾಜ್ಯಾಧ್ಯಕ್ಷರಾಗಿ ಶಂಕರ ವಡ್ರೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9:ಅಹಿಂದ ವಿದ್ಯಾರ್ಥಿ ಪರಿಷತ್ ಘಟಕದ ರಾಜ್ಯಾದ್ಯಕ್ಷರಾಗಿ ಶಂಕರ ಘೋರಕನಾಥ ವಡ್ರೆ ಮರಗೂರ ಅವರು ಆಯ್ಕೆಯಾಗಿದ್ದಾರೆ.ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ (ರಿ) ಬೆಂಗಳೂರು ರಾಜ್ಯಾದ್ಯಕ್ಷ ಪ್ರಭುಲಿಂಗ ದೊಡ್ಡಿಣಿ ಅವರ ಆದೇಶದ ಮೇರೆಗೆ ಅಹಿಂದ ವಿದ್ಯಾರ್ಥಿ ಪರಿಷತ್ ಘಟಕ ರಾಜ್ಯಾದ್ಯಕ್ಷರನ್ನಾಗಿ ಶಂಕರ ಘೋರಕನಾಥ ವಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಹಾಗೂ ವಿಠ್ಠಲ ಬಿರಾದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಳಗಾವಿ, ಡಿ.9:“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ…

Read More

ವಲ್ಲಭಭಾಯಿ ಪಟೇಲರು ಏಕತೆಯ ಹರಿಕಾರ: ನಂದಿನಿ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 9: ದೇಶದ ರ‍್ಯೆತರ ಮೇಲಿನ ಶೋಷಣೆ ಹೋಗಲಾಡಿಸಿದ ದೇಶದ ಏಕತೆಗಾಗಿ ಹೋರಾಡಿದ ಹರಿಕಾರ ದೇಶಕಂಡ ಅಪರೂಪದ ವ್ಯಕ್ವತ್ವ ಸರದಾರ ವಲ್ಲಭಭಾಯಿ ಪಟೇಲರದು ಎಂದು ಉಪನ್ಯಾಸಕಿ ನಂದಿನಿ ಬಿರಾದಾರ ಹೇಳಿದರುನಗರದ ವೀರಶ್ಯೆವ ಲಿಂಗಾಯತ ಸಭಾ ಭವನದಲ್ಲಿ ಅಖಿಲ ಭಾರತ ವೀರಶ್ಯೆವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಶಿವಾನುಭವ ಗೋಷ್ಟಿಯಲ್ಲಿ ಸರದಾರ ವಲ್ಲಭಭಾಯಿ ಪಟೇಲರ ಬದುಕು ಮತ್ತು ಹೋರಾಟ ಕುರಿತು ಉಪನ್ಯಾಸ ನೀಡಿದ ಅವರು, ಸರದಾರ ವಲ್ಲಭಬಾಯಿ ಪಟೇಲರು ೧೮೭೫ರಲ್ಲಿ ಜನ್ಮತಾಳಿ ಕಾನೂನು…

Read More

ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ…

Read More

ಜಿಲ್ಲಾಧಿಕಾರಿ ಡಾ. ಆನಂದ‌ ಬಬಲೇಶ್ವರ ತಾಲೂಕಿಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು‌ ಕಚೇರಿಗೆ ಭೇಟಿ ನೀಡಿ,‌ಪರಿಶೀಲನೆ ನಡೆಸಿದರು.ತಾಲೂಕಾ ಆಡಳಿತ ಸೌಧಕ್ಕೆ ತೆರಳಿ,ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು.ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಶೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದುಕೊರತೆ…

Read More

ಗ್ಯಾರಂಟಿ ಯೋಜನೆಗಳ ಕಲಾ ಜಾಥಾ ಪ್ರದರ್ಶನ: ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ…

Read More