ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಿಎಂ ಜೊತೆ ಫಲಪ್ರದ ಚರ್ಚೆ: ರಾಘವ್ ಅಣ್ಣಿಗೇರಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ಉತ್ತರ ಕರ್ನಾಟಕದ ಜನತೆಯನ್ನು ಕಾಡುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಹಾಗೂ ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ಅವರು, ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸಾವಿರಾರು ಸಂತ್ರಸ್ತರು ಫಲವತ್ತಾದ ಕೃಷಿಭೂಮಿಯನ್ನು ಕಳೆದುಕೊಂಡಿದ್ದರೂ ಇಂದಿಗೂ ಸಮರ್ಪಕ ಪರಿಹಾರ ದೊರೆತಿಲ್ಲ. ಅವರಿಗೆ ನ್ಯಾಯಸಮ್ಮತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು…

Read More

ಜು.3 ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಆ.3ರಂದು ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ಸಪ್ತಸಾಗರ ವಾರ್ತೆ,ವಿಜಯಪುರ, ಆ.1:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವೃಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ (ಆ. 2) ಭಾನುವಾರ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 24434 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ವಿಜಯಪುರ ನಗರ-55, ತಿಕೋಟಾ ನಗರ-03 ಸೇರಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ವಿಜಯಪುರ ಗ್ರಾಮೀಣ ಭಾಗದ ಕವಲಗಿಯಲ್ಲಿ 2 ಹಾಗೂ ತಿಡಗುಂದಿಯಲ್ಲಿ 1 ಸೇರಿದಂತೆ ಒಟ್ಟು…

Read More

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಪದವಿ ಕಾಲೇಜು ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ ಉದ್ಘಾಟನೆ ಮಾಡಲಾಯಿತು. ಶಿಬಿರದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ರೆಂಜರ್ಸ್ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರುಮೊದಲಿಗೆ ಅಗಷ್ಟ 1 ರಂದು ಅಂತರಾಷ್ಟ್ರೀಯ ಸ್ಕಾರ್ಫ್ ಡೆ ಯನ್ನು ಕಾಲೇಜಿನ ಉಪನ್ಯಾಸಕರಿಗೆ ಸ್ಕಾರ್ಫ್ ಧಾರಣೆ ಮಾಡುವದರ ಮೂಲಕ ಆಚರಣೆ ಆಚರಣೆ ಮಾಡಲಾಯಿತುಶಿಬಿರದಲ್ಲಿ…

Read More

ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕನ ಕತ್ತು ಹಿಸುಕಿ ಅಮಾನುಷ ಹಲ್ಲೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಇಬ್ಬರು ದುಷ್ಕರ್ಮಿಗಳು ಬಸ್‌ನ್ನು ಮಧ್ಯ ರಸ್ತೆಯಲ್ಲೇ ತಡೆದು ಅಮಾನುಷವಾಗಿ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಅರೆಪ್ರಜ್ಞಾಹೀನಗೊಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಹಳ್ಳಿ ಸಮೀಪ ಶನಿವಾರ ನಡೆದಿದೆ.ಮದರಿ–ಕನ್ನೊಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್‌ನ್ನು ಆರೋಪಿಗಳು ತಡೆದು ನಿರ್ವಾಹಕ ಮಲ್ಲಪ್ಪ ಲಮಾಣಿ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳ ಆರಂಭಿಸಿದರು. ಮಾತಿನ ಚಕಮಕಿ ತೀವ್ರಗೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಗಳು ಏಕಾಏಕಿ ಹಲ್ಲೆಗೆ ಮುಂದಾದರು. ನಿರ್ವಾಹಕ…

Read More

ವ್ಯಸನವೇ ಭವಿಷ್ಯಕ್ಕೆ ಮಾರಕ; ದುಶ್ಚಟಗಳಿಂದ ದೂರವಿದ್ದು ಬದುಕು ಕಟ್ಟಿಕೊಳ್ಳಿ: ಡಿಎಚ್‌ಒ ಡಾ. ಮಲ್ಲನಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಯುವಜನತೆ ಯಾವುದೇ ರೀತಿಯ ವ್ಯಸನಗಳ ಜಾಲಕ್ಕೆ ಸಿಲುಕದೆ ಆರೋಗ್ಯ, ಶಿಕ್ಷಣ, ಸಂಸ್ಕಾರ ಮತ್ತು ಜೀವನ ಮೌಲ್ಯಗಳಿಗೆ ಆದ್ಯತೆ ನೀಡಿ ದೇಶಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ…

Read More

ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…

Read More

ಬೇರುಮಟ್ಟದ ಸಮೀಕ್ಷೆ ಮೂಲಕ ಕಾಂಗ್ರೆಸ್ ಪುನರ್‌ಸಂಘಟನೆ: ಸಚಿನ್ ಯಾದವ್

ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿ ಪುನರ್‌ರಚನೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ; ಸಮಗ್ರ ವರದಿ ಎಐಸಿಸಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಯನ್ನು ಬೇರುಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರ ಸಲಹೆ, ಸಮಾಲೋಚನೆ ಹಾಗೂ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಮಧ್ಯಪ್ರದೇಶದ ಶಾಸಕ ಹಾಗೂ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ ಎಐಸಿಸಿ ನೇಮಿಸಿರುವ ಉಸ್ತುವಾರಿ ಸಚಿನ್ ಯಾದವ್ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ…

Read More

ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಅಭಿವೃದ್ಧಿಗೆ ಆಗ್ರಹ

ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ, ಸರ್ಕಾರಿ ಕಾಲೇಜು–ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ; ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಗ್ರಾಮ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮವನ್ನು ತಕ್ಷಣವೇ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ತಿಂಗಳಿನಿಂದ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಗ್ರಾಮದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ…

Read More

ವಿಶ್ವ ಶ್ರೇಷ್ಠ ಸಾಹಿತ್ಯದ ಅನರ್ಘ್ಯ ಪ್ರತಿಭೆ ಮಧುರಚೆನ್ನರು: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 31: ಹಳ್ಳಿಯೊಂದರಲ್ಲಿ ಹುಟ್ಟಿ, ಸರಳ ಬದುಕಿನಲ್ಲೇ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ ಮಧುರಚೆನ್ನರು ವಿಶ್ವ ಶ್ರೇಷ್ಠ ಸಾಹಿತ್ಯವನ್ನು ರಚಿಸಿದ ಅನರ್ಘ್ಯ ಪ್ರತಿಭೆ ಎಂದು ಶಿಕ್ಷಕ-ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಅರಿವು ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಧುರಚೆನ್ನರ 123ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಲಸಂಗಿ ಗೆಳೆಯರ ಬಳಗವನ್ನು ಕಟ್ಟಿಕೊಂಡು, ಗ್ರಾಮೀಣ ಮಹಿಳೆಯರು ಹಾಡುತ್ತಿದ್ದ ಜಾನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಮಧುರಚೆನ್ನರು ಕನ್ನಡ ಜಾನಪದ ಸಾಹಿತ್ಯಕ್ಕೆ ಅಮೂಲ್ಯ ಸೇವೆ…

Read More