ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಸಹಾಯಕಾರಿ: ಕೊಣ್ಣೂರ
ಸಪ್ತಸಾಗರ ವಾರ್ತೆ ವಿಜಯಪುರ, ನ. 30: ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಸಮತೋಲನವನ್ನು ಕಾಪಾಡಲು ಪ್ರೋತ್ಸಾಹ ನೀಡುತ್ತವೆ ಎಂದು ಅಂತಾರಾಷ್ಟ್ರೀಯ ವಿಕಲಚೇತನ ಕ್ರಿಕೆಟ್ ಪಟು ರಾಜೇಶ ಕೊಣ್ಣೂರ ಹೇಳಿದ್ದಾರೆ.ಶನಿವಾರ ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳು ಪಾಠದಷ್ಟೆ ಆಟಕ್ಕೂ ಮಹತ್ವ ಕೊಡಬೇಕು. ಪೋಷಕರೂ ತಮ್ಮ ಮಕ್ಕಳಿಗೆ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕ…


