ಸರ್ಕಾರಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಪಕ್ಷ ಬಲಪಡಿಸಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ನ. 25: ಸರಕಾರದ ಯೋಜನೆಗಳು ಮತ್ತು ಸಾಧನೆಗಳ ಕುರಿತು ಜನರ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಿ ಅವರು ಮಾತನಾಡಿದರು.ಪ್ರಚಾರ ಸಮಿತಿಯ ಪದಾಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಮತ್ತು…

Read More

ಫಲಾನುಭವಿಗೆ ಸರ್ಕಾರಿ ಸೌಲಭ್ಯ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 25 :ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ತಮ್ಮ ಕ್ಷೇತ್ರದ ಫಲಾನುಭವಿಗೆ ಸರ್ಕಾರದ ಯೋಜನೆಯ ಕಾರು ವಿತರಿಸಿದರು.ಮಂಗಳವಾರ ವಿಜಯಪುರದ ಗೃಹಕಛೇರಿಯಲ್ಲಿ ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿಯ ಪ್ರವೀಣ ಪೂಜಾರಿ ಇವರಿಗೆ ಸರ್ಕಾರದ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2023-24 ನೇ ಸಾಲಿನ ಸಹಾಯಧನ ಯೋಜನೆ ಅಡಿಯಲ್ಲಿ ನೀಡಲಾಗಿರುವ ಕಾರಿನ ಕೀಲಿಯನ್ನು ಸಚಿವರು ಫಲಾನುಭವಿಗೆ ಹಸ್ತಾಂತರಿಸಿದರು.

Read More

ಹತ್ತಿ ಖರೀದಿ ಕೇಂದ್ರದಲ್ಲಿ ಅಧಿಕಾರಿಯಿಂದ ರೈತರಿಗೆ ಅವಮಾನ: ರೈತರ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24: ಹತ್ತಿ ಖರೀದಿ ಕೇಂದ್ರದಲ್ಲಿ ಆಗುತ್ತಿರುವ ಮೋಸ ಕುರಿತು ಸಿಸಿಐ ಅಧಿಕಾರಿ ಸಿದ್ದಲಿಂಗ ಮದರಕಿಂಡಿ ಅವರು ರೈತರಿಗೆ ಏಕ ವಚನದಲ್ಲಿ ಮಾತನಾಡುತ್ತ ಅನ್ಯಾಯ ಎಸಗಿ ಹತ್ತಿ ಸರಿ ಇಲ್ಲ ಎಂದು ಕಪಾಸ ಸೈಟ್ ಅಲ್ಲಿ ಹತ್ತಿ ಎಂದು ನಮೂದಿಸಿಲ್ಲ. ನಿಮ್ಮ ಹತ್ತಿ ತೆಗೆದುಕೊಳ್ಳುವುದಿಲ್ಲ ಎಂದು ಅಹಂಕಾರದಿಂದ ಮಾತನಾಡಿದ ಅಧಿಕಾರಿಯ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಹತ್ತಿ ಸುರಿವಿ ಹೋರಾಟ ಮಾಡಲಾಯಿತು.ಸತತವಾಗಿ 3 ಘಂಟೆ ಹೋರಾಟದ ನಂತರ ಅಧಿಕಾರಿ ಸಿದ್ದಲಿಂಗ ಮದರಕಿಂಡಿ ಅವರನ್ನು…

Read More

ನವೆಂಬರ 26 ರಂದು ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ 26 ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತದ ಸಂವಿಧಾನ ಪೀಠಿಕೆಯ ಮೆರವಣಿಗೆಯನ್ನು ವಿವಿಧ ಜಾನಪದ‌ ಕಲಾ ತಂಡಗಳೊಂದಿಗೆ ನಡೆಯಲಿದೆ.ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ…

Read More

ಮಿನಿ ಕರ್ನಾಟಕ ಕ್ರೀಡಾ ಕೂಟ: ವಿದ್ಯಾರ್ಥಿಗಳ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ.24: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಓಲಿಂಪಿಕ್ ಸಂಸ್ಥೆ ವತಿಯಿಂದ ಮಿನಿ ಕರ್ನಾಟಕ ಕ್ರೀಡಾ ಕೂಟ ೨೦೨೫ ನವೆಂಬರ ೩ ರಿಂದ ೯ ವರೆಗೆ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿದ್ದಾರೆ.ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳಾದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೊಹಮ್ಮದ್ ಅಕ್ಡಸ್ ಹಳ್ಳಿ, ೫೬ ದೇಹ ತೂಕ ನಲ್ಲಿ ೨ ನೇ…

Read More

ಎಲೆಕ್ಟ್ರಿಕ್ ಕಾರಿಗೆ ಆಕಸ್ಮಿಕ ಬೆಂಕಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ತಗುಲಿಧಗಧಗನೇ ಹೊತ್ತಿ ಉರಿದ ಘಟನೆವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.ಪಾರ್ಕ್ ಮಾಡಿದ್ದ ಇವಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲTS 07- UF 6410 ನೋಂದಣಿ ಸಂಖ್ಯೆಯ ಮಹೀಂದ್ರಾ ವೆರಿಟೋ ಕಾರ್ಮೊಹಮ್ಮದಗೌಸ್ ಮುಲ್ಲಾ ಎಂಬುವವರಿಗೆ ಸೇರಿದ್ದು,ಘಟನೆಗೆ ಕಾರಣ ತಿಳಿದು ಬಂದಿಲ್ಲಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಅಗ್ನಿಶಾಮಕ ದಳ ಅಧಿಕಾರಿ ಉಮೇಶ ತಳಕೇರಿ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ…

Read More

ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್

ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ವೃಕ್ಷಥಾನ್ ಹೆರಿಟೇಜ್ ರನ್ ಪೂರ್ವಭಾವಿಯಾಗಿ ಡಿಸೆಂಬರ್ 5 ರಂದು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್ ಜರುಗಲಿದೆ.ಬೆಳಗ್ಗೆ 8 ಗಂಟೆಗೆ ಮರಗಳಿಗಾಗಿ ಮಕ್ಕಳ ಓಟ, ವೃಕ್ಷ ಕಿಡ್ಸ್ ರನ್ ನಡೆಯಲಿದ್ದು, ನರ್ಸರಿ, ಎಲ್.ಕೆ.ಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳಿಗೆ 50 ಮೀ. ಓಟ ನಡೆಯಲಿದೆ. ಇದರಲ್ಲಿ ಪ್ರಥಮ ರೂ. 2500, ದ್ವಿತೀಯ…

Read More

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದನ.27ರಂದು ಒಂದು ದಿನದ ರಾಜ್ಯಮಟ್ಟದ ವಿಚಾರ ಕಮ್ಮಟ

ಸಪ್ತಸಾಗರ ವಾರ್ತೆ,ವಿಜಯಪುರ, ನ. 24: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರ ವತಿಯಿಂದ ಕಮಲಾದೇವಿ ಪಾಟೀಲ ಮೆಮೋರಿಯಲ್ ಎಜ್ಯುಕೇಶನಲ್ ಅಸೋಸಿಯೇಶನ್ ಹಾಗೂ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆ- ನಾಡು ನುಡಿ ಚಿಂತನ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಕಮ್ಮಟ ನವೆಂಬರ್ 27ರ ಬೆಳಿಗ್ಗೆ 10ಗಂಟೆಗೆ ಸಾಯಿ ಪಾರ್ಕ್ ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ…

Read More

ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಆಯ್ಕೆಗೆ ಸಂದರ್ಶನ ಮುಂದೂಡಿಕೆ

ಸಪ್ತಸಾಗರ ವಾರ್ತೆ, ವಿಜಯಪುರ ನ.24:ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ನವೆಂಬರ್ 25ರ ಬೆಳಿಗ್ಗೆ 10.30ಕ್ಕೆ ವಿಜಯಪುರದ ಕೃಷಿ ಡೀನ್ ಅವರ ಕಚೇರಿಯಲ್ಲಿ ಏರ್ಪಡಿಸಿದ ಸಂದರ್ಶನವನ್ನು ಮುಂದೂಡಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳು ತಿಳಿಸಿದ್ದಾರೆ.ಗುತ್ತಿಗೆ ಆಧಾರದ ಮೇಲೆ ಮೀಸಲಾತಿ ಅನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಧಾರವಾಡದ ಕೃಷಿ ಮಹಾವಿದ್ಯಾಲಯದಲ್ಲಿ ಸಂದರ್ಶನ ನಡೆಸಲು ನಿರ್ಧರಿಸಲಾಗಿದ್ದು,ಸಂದರ್ಶನ ದಿನಾಂಕ ಶೀಘ್ರ ತಿಳಿಸಲಾಗುವುದೆಂದೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಹಕರಿಸುವಂತೆ ಅವರು…

Read More

ನ.28ರಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ನ.24: ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ನವೆಂಬರ್ 28ರಿಂದ 30ರವರೆಗೆ ನಗರದ ಸೋಲಾಪುರ ರಸ್ತೆಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.ನ.28ರಂದು ಬೆಳಿಗ್ಗೆ 8 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.ನ.30ರಂದು ಸಂಜೆ 4 ಗಂಟೆಗೆ ನಡೆಯುವ ಮುಕ್ತಾಯ ಸಮಾರಂಭದಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ…

Read More