ಕನ್ನಡ ನಮ್ಮೆಲ್ಲರ ಉಸಿರಾಗಬೇಕು: ಡಾ.ಲಕ್ಷ್ಮಿದೇವಿ ಅಲ್ಕೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23 : ಕನ್ನಡ ಭಾಷೆಯ ಅಭಿಮಾನ ಇಟ್ಟುಕೊಳ್ಳಬೇಕು. ಈ ನಾಡಿನಲ್ಲಿ ಕನ್ನಡ ಕಡ್ಡಾಯಗೊಳಿಸಬೇಕು. ಕನ್ನಡ ನಮ್ಮೆಲ್ಲರ ಉಸಿರಾಗಬೇಕೆಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗ ಮುಖ್ಯಸ್ಥೆ ಡಾ. ಲಕ್ಷ್ಮಿದೇವಿ ಅಲ್ಕೋಡ ಅಭಿಪ್ರಾಯ ವ್ಯಕ್ತಪಡಿಸಿದರು.ರವಿವಾರ ಜಿಲ್ಲಾ, ತಾಲೂಕ ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಆಶ್ರಯದಲ್ಲಿ ಜರುಗಿದ ದತ್ತಿಗಳಾದ ದಿ. ಜಿ.ಎಸ್. ಬಗಲಿ ದತ್ತಿ, ದಿ.ಮಲ್ಲಪ್ಪ ಚಂದಪ್ಪ ಯಲಗೋಡ. ದತ್ತಿ, ದಿ. ಶಿವಮೂತೆ೯ಪ್ಪ ಪಾಟೀಲ ದತ್ತಿ. ಮಾತೋಶ್ರೀ…

Read More

ಪಂಚಮಸಾಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ವೀರಭದ್ರಪ್ಪ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23:ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ವಿಜಯಪುರದ ನೂತನ ಅಧ್ಯಕ್ಷರಾಗಿ ವೀರಭದ್ರಪ್ಪ ಆಯ್ಕೆಯಾಗಿದ್ದಾರೆ.ರವಿವಾರ ನಡೆದ ಜಿಲ್ಲಾಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಶಶಿಧರ ಸಾತಲಗಾಂವ ಜಿಲ್ಲಾಧ್ಯಕ್ಷರಾಗಿ ವೀರಭದ್ರಪ್ಪ, ಉಪಾಧ್ಯಕ್ಷರಾಗಿ ಎಸ್. ಬಿ. ಪಾಟೀಲ್,ಆರ್. ಡಿ. ಬಾಳಿ, ಕಾರ್ಯಾಧ್ಯಕ್ಷರಾಗಿ ಈರಣ್ಣ ಹೊಸಟ್ಟಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ಉಗಾರ ಅವರು ಆಯ್ಕೆಯಾದರು.ಸಭೆಯಲ್ಲಿ ಇಂಡಿ ನೌಕರರ ಸಂಘದ…

Read More

ವೃಕ್ಷಥಾನ್ ಹೆರಿಟೇಜ್ ರನ್: ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23: ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಆಯೋಜಿಸಲಾಗಿದ್ದ ನಿಬಂಧ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ರವಿವಾರ ಬೆಳಿಗ್ಗೆ ಗಗನ್ ಮಹಲ್ದಲ್ಲಿ ನಿಬಂಧ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಂಡು ಗಮನ ಸೆಳೆದಿದ್ದಾರೆ. ಕಳೆದ ವಾರ ನಗರದ ಪ್ರಾಚೀನ ಸ್ಮಾರಕಗಳನ್ನು ಕುಂಚದ ಮೂಲಕ ಬಿಡಿಸಿದ್ದ ಮಕ್ಕಳು ಇಂದು ಕಳೆದ ಒಂದು ದಶಕದಲ್ಲಿ ಬಸವನಾಡಿನ ಪರಿಸರದಲ್ಲಿ ಆಗಿರುವ ಅಮೂಲಾಗ್ರ ಬದಲಾವಣೆಯ ಕುರಿತು ನಿಬಂಧ ಬರೆಯುವ…

Read More

ಡಿ. 13 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್: ಜಿಲ್ಲಾ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ನ. 22: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ.ಎ ಅವರು ತಿಳಿಸಿದರು.ಶನಿವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ವಿಜಯಪುರ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ: ಸಚಿವ ಪಾಟೀಲ ಸಂತಸ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲಶಕ್ತಿ ಅಭಿಯಾನದ “ಜಲ ಸಂಚಯ–ಜನ ಭಾಗಿದಾರಿ” ವಿಶೇಷ ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಭಾರತ ಸರಕಾರದಿಂದ ನೀಡುವ ರಾಷ್ಟ್ರೀಯ ಪುರಸ್ಕಾರ ವಿಜಯಪುರ ಜಿಲ್ಲೆಗೆ ದೊರಕಿರುವುದು ಸಂತಸ ತಂದಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ವತಿಯಿಂದ 11 ಸಾವಿರಕ್ಕೂ ಹೆಚ್ಚು ಚಿಕ್ಕ-ಚಿಕ್ಕ ಚೆಕ್ ಡ್ಯಾಂ, ಬಾಂದಾರಗಳ ನಿರ್ಮಾಣದಿಂದ ಮಳೆ ನೀರು ಇಂಗಿ ಅಂತರ್…

Read More

66 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಶಾಲಾ ಮಕ್ಕಳು ಬೆಂಬಲ

ಸಪ್ತ ಸಾಗರ ವಾರ್ತೆ, ವಿಜಯಪುರ, ನ. 22:ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿಗೆ ಆಗ್ರಹಿಸಿ ಹೋರಾಟ ಸಮಿತಿಯ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಬಸವನ ಬಾಗೇವಾಡಿ ಮತಕ್ಷೇತ್ರದ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯ ಎ. ಎಂ. ಪಾಟೀಲ ಅವರು ಮಾತನಾಡಿ, ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬಡ ಮಕ್ಕಳಿಗಾಗಿ,ಕೃಷಿ ಕಾರ್ಮಿಕರ ಮಕ್ಕಳು…

Read More

39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಸಮಾಜದಲ್ಲಿ ಉತ್ತಮ ಮತ್ತು ಆರೋಗ್ಯಪೂರ್ಣ ಪರಿಸರ ಒದಗಿಸಲು ವಿಜ್ಞಾನ, ತಂತ್ರಜ್ಞಾನ ಮತ್ತು ಸಹಾನುಭೂತಿ ಒಗ್ಗೂಡಿ ಸಾಗಬೇಕು ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಿಶುರೋಗ ವಿಭಾಗ, ಭಾರತೀಯ ಚಿಕ್ಕಮಕ್ಕಳ ತಜ್ಞರ ಸಂಘ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ತಂಡ ಹಾಗೂ…

Read More

ಕನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ತಾಲೂಕಿನ ಕನ್ನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕನ್ನೂರ ಗ್ರಾಮ ಪಂಚಾಯಿತಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷ ವಿಠ್ಠಲ ಭಜಂತ್ರಿ ಮಾತನಾಡಿ, ವಿಜಯಪುರ ತಾಲೂಕಿನ ಕನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕನ್ನೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪರೇಷನ್ ಥೇಟರ್ ಸಲಕರಣೆಗಳಿದ್ದು, ಅದರ ತಂಕ್ಕಂತೆ ಟೆಕ್‌ನಿಷನ್‌ಗಳಿಲ್ಲ, ಲ್ಯಾಬರೊಟರಿ ಇದ್ದು…

Read More

ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು-ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು ಎಂಬ ಖ್ಯಾತಿ ಗಳಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ಮುಸ್ಸಂಜೆ ತಿಕೋಟಾ ತಾಲೂಕಿನ‌ ಸೋಮದೇವರಹಟ್ಟಿ ತಾಂಡಾದಲ್ಲಿ ಮಹಾದ್ವಾರದಿಂದ ದೇವಸ್ಥಾನದವರೆಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ರೂ.50 ಲಕ್ಷ ಅನುದಾನದಲ್ಲಿ ಕೈಗೊಳ್ಳಲಿರುವ ಸಿ.ಸಿ ರಸ್ತೆಯ ನಿರ್ಮಾಣಕ್ಕೆ ಚಾಲನೆ, ಅರವಿಂದ ನಾಯಿಕರವರ ಮನೆಯಿಂದ ಹೀರು ವೇಣು ರಾಠೋಡರ ಮನೆವರೆಗಿನ ಮಾರ್ಗಕ್ಕೆ…

Read More

ರಸ್ತೆ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತುಸೂಕ್ತ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.21: ಮಾನವ ಜೀವ ಅತ್ಯಂತ ಅಮೂಲ್ಯವಾದದ್ದು. ಅಪಘಾತದಿಂದಾಗುವ ಜೀವ ಹಾನಿ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ತಿಳಿವಳಿಕೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು…

Read More