ವೃಕ್ಷಥಾನ್ ಹೆರಿಟೇಜ್ ರನ್- 20 ಸಾವಿರ ದಾಖಲೆಯ ಓಟಗಾರ ನೋಂದಣಿ
ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ವೃಕ್ಷಥಾನ್ ಹೆರಿಟೇಜ್ ರನ್ ಆರನೇ ಆವೃತಿಯಲ್ಲಿ ಈ ಬಾರಿ 20 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು, ಮುಂಬೈ, ದೆಹಲಿ ಮತ್ತು ಚೆನೈ ಮಹಾನಗರಗಳನ್ನು ಹೊರತು ಪಡಿಸಿದರೆ, ವಿಜಯಪುರದಂತಹ ಟೈರ್-3 ನಗರದಲ್ಲಿ ನಡೆಯುವ ಮ್ಯಾರಥಾನ್ ನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಓಟಗಾರರು ಭಾಗವಹಿಸುತ್ತಿರುವುದು ಇತಿಹಾಸ ಸೃಷ್ಟಿಸಲಿದೆ ಎಂದು ಕೋಟಿ ವೃಕ್ಷ ಅಭಿಯಾನ ಪ್ರತಿಷ್ಠಾನ ತಿಳಿಸಿದೆ.ಒಂದು ಸಾಮಾಜಿಕ ಉದ್ದೇಶಕ್ಕಾಗಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಒಂದಡೆ ಸೇರಿ ಓಟದ ಮೂಲಕ ವಿಜಯಪುರದ…


