ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಪುನೀತ್ ಬಿರಾದಾರ ರಾಜ್ಯಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಜಯಪುರ ಹಾಗೂ ಕೋನಿಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ 2025-26ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ್ ಬಿರಾದಾರ 1 ಕಿಮೀ ಟ್ರ್ಯಾಕ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ…

Read More

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿಯವರ ೧೦೮ನೇ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 19:ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಯವರ ೧೦೮ನೇ ಜಯಂತಿಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು, ಇಂದಿರಾಗಾಂಧಿಯವರು ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರಧಾನ ಮಂತ್ರಿಯಾಗಿದ್ದರು. ತಮ್ಮ ಅವಧಿಯಲ್ಲಿ ಅವರು ಮಾಡಿದಂತಹ ಕಾರ್ಯಗಳು ಎಂದೆಂದಿಗೂ ಅಜರಾಮರವಾಗಿರುತ್ತವೆ. ದೀನದಲಿತರಿಗೆ, ಬಡವರಿಗೆ, ಮಹಿಳೆಯರಿಗೆ, ಸೈನಿಕರಿಗೆ, ರೈತರಿಗೆ ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಪರವಾಗಿ ಕೆಲಸ ಮಾಡಿದ್ದಾರೆ. ಉಳುವವನೇ ಭೂಮಿ…

Read More

ಕಗ್ಗೋಡದಲ್ಲಿ ಉನ್ನತ ಧ್ಯಾನ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ.19: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆರ್ಟ್ ಆಫ್ ಲಿವಿಂಗ್ ನ ಹಿರಿಯ ಗುರುಗಳು ಡಾ. ಬಿ.ಎಂ. ಪಾಟೀಲ ಗುರೂಜಿಯವರ ನೇತೃತ್ವದಲ್ಲಿ ಉನ್ನತ ಧ್ಯಾನ ಶಿಬಿರವು ರಾಮನಗೌಡ ಪಾಟೀಲ (ಯತ್ನಾಳ್) ಗೋ ರಕ್ಷಾ ಕೇಂದ್ರ ಕಗ್ಗೋಡದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿತು.ಕಾರ್ಯಕ್ರಮದಲ್ಲಿ ಡಾ. ಬಿ ಎಂ. ಪಾಟೀಲ ಗುರೂಜಿ ದಿವ್ಯ ಸಾನ್ನಿಧ್ಯ ವಹಿಸಿ, ಇಂದಿನ ಒತ್ತಡದ ಜೀವನದಲ್ಲಿ, ಪ್ರತಿಯೊಬ್ಬರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಲ್ಲರೂ ನೆಮ್ಮದಿಯಿಂದ ನಗು – ನಗುತ್ತಾ ಜೀವಿಸುವುದು. ಯೋಗದ ಜೊತೆಗೆ ಧ್ಯಾನ ಮುಖ್ಯ….

Read More

ಬಸವನ ಬಾಗೇವಾಡಿ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ.19 :ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಬಸವನ ಬಾಗೇವಾಡಿ ತಾಲೂಕಿನ ವಿವಿಧ ಕಚೇರಿಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.ತಾಲೂಕು ಆಡಳಿತ ಸೌಧದಲ್ಲಿರುವ ಭೇಟಿ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದ ಪ್ರಗತಿ ಪರಿಶೀಲನೆ ನಡೆಸಿದರು.ಕಚೇರಿಯ ವಿವಿಧ ವಿಭಾಗಗಳ ಬಾಕಿಯಿರುವ ಕಡತ-ವಹಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕಚೇರಿ ಕಾರ್ಯ ನಿಮಿತ್ತ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿದ್ದು, ಸಕಾಲದಲ್ಲಿ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಡಲು ಸೂಚನೆ ನೀಡಿದರು. ಅಟಲಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ,ಕಡತಗಳ…

Read More

ವಿವಿಧ ಯೋಜನೆಯಡಿ ಅನುದಾನವನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಿ -ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ, ವಿಜಯಪುರ,ನ.19:ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ನಿಗದಿಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಪ್ರಗತಿ ಸಾಧಿಸಬೇಕು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು.ಯಾವುದೇ ಕಾರಣಕ್ಕೂ ಬಿಡುಗಡೆಯಾದ…

Read More

22ರಂದು ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 19: ಒಂದೇ ಸೂರಿನಡಿ ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯಲ್ಲಿ ನವೆಂಬರ್ 22 ರಂದು ಶನಿವಾರ ನಡೆಯಲಿದೆ.ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗೆ ಈ ಶಿಬಿರ ನಡೆಯಲಿದ್ದು, ಅಲೋಪಥಿ ಚಿಕಿತ್ಸೆಗಳು, ಬೆಂಬಲಿತ ಸೇವೆಗಳು, ಆಯುರ್ವೇದ ಚಿಕಿತ್ಸೆಗಳು ಲಭ್ಯವಿರಲಿವೆ. ಈ ಶಿಬಿರದಲ್ಲಿ ಅಲೋಪತಿ ಚಿಕಿತ್ಸೆಗಳಾದ ವೈದ್ಯಕೀಯ…

Read More

ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗಕ್ಕೆಜಮಖಂಡಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ.19:ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅಬ್ದುಲಪೀರಾ ರಜಾಕಸಾಬ ಜಮಖಂಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹಾಗೂ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ ಅವರ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರ ಹಾಗೂ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಆದೇಶದ ಮೇರೆಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ವಿಜಯಪುರ ಜಿಲ್ಲಾ…

Read More

ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರೀಯ ಪುರಸ್ಕಾರ: ವಿಜಯಪುರ ಜಿಪಂ ಸಿಇಒ ರಿಷಿ ಆನಂದಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ದಕ್ಷಿಣದ ರಾಜ್ಯಗಳಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ “ರಾಷ್ಟ್ರೀಯ ಜಲ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ ಅವರು ಜಿಪಂ ಸಿಇಒ ರಿಷಿ ಆನಂದ….

Read More

ತಾಲೂಕು-ಜಿಲ್ಲಾಮಟ್ಟದ ವಿಶೇಷ ಚೇತನರ ಕ್ರೀಡಾಕೂಟ:ನೋಂದಣಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಐದು ತಾಲೂಕುಗಳಲ್ಲಿ ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ಆಯೋಜಿಸಲಾಗಿದೆ.ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ನವೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ವೈ.ಚಿಂಚಲಿ-ಮೊಬೈಲ ಸಂಖ್ಯೆ: 9449939580, ರವಿ ರಾಠೋಡ-ಮೊಬೈಲ ಸಂಖ್ಯೆ: 903555337, ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ಮಳಗೊಂಡ-ಮೊಬೈಲ ಸಂಖ್ಯೆ: 9632315492, ಪರಶುರಾಮ ಭೋಸಲೆ-ಮೊಬೈಲ ಸಂಖ್ಯೆ: 9972441464, ಸಿಂದಗಿ ತಾಲೂಕು…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More