ನ.15ರಂದು ಡಾ. ಎಂ.ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ಅವರ 40 ಪುಟಗಳ ಸಮಗ್ರ ಸಾಹಿತ್ಯ ಲೋಕಾರ್ಪಣೆ ಸಮಾರಂಭ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಭವನದಲ್ಲಿ ನವೆಂಬರ್ 15 ರಂದು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರಿನ ಕುಂದೂರು ಮಠದ ಡಾ. ಶರತ್‍ಚಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗುವ ವಿಚಾರ ಸಂಕಿರಣದಲ್ಲಿ ಡಾ.ವೀರಣ್ಣ ರಾಜೂರ, ಡಾ.ಎಸ್.ಕೆ.ಕೊಪ್ಪಾ, ಡಾ.ಗುರುಪಾದ…

Read More

ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More

ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 11 : ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ “2025-26ನೇ ಸಾಲಿನ ಮಕ್ಕಳ ದಿನಾಚರಣೆ” ನಿಮಿತ್ತ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡ 9-16 ವರ್ಷದೊಳಗಿನ ಜಿಲ್ಲಾಮಟ್ಟದ ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.ಕತೆ, ಕವನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಕುಮಾರಿ ಶ್ರದ್ಧಾ ದತ್ತೂರೆ (ಪ್ರಥಮ ಸ್ಥಾನ) ಹಾಗೂ ಕುಮಾರಿ ವೈಭವಿ ಪತ್ತಾರ…

Read More

ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ನಾಪತ್ತೆ

ಸಪ್ತಸಾಗರ ವಾರ್ತೆ,ವಿಜಯಪುರ, ನ. 11:ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಯುವತಿ ಸೇರಿ ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದ ಬಳಿಯ ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಸಂಭವಿಸಿದೆ.ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾದವರು ಒಂದೇ ಕುಟುಂಬದ ಇಬ್ಬರು ಬಾಲಕರು ಹಾಗೂ ಓರ್ವ ಯುವತಿ ಸೇರಿದ್ದಾರೆ.ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ಬಸಮ್ಮ ಕೊಣ್ಣೂರ (21) ಸಂತೋಷ ಕೊಣ್ಣೂರು (16) ಹಾಗೂ ರವಿ ಕೊಣ್ಣೂರು…

Read More

ಮೌಲಾನಾ ಅಬ್ದುಲ್ ಕಲಾಂ ಅಜಾದ್ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜಯಂತಿಯ ಪ್ರಯುಕ್ತ ಹೊನ್ನುಟಗಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಹಾಗೂ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಜಾದ್ ಅವರ ಶಿಕ್ಷಣ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಪ್ರಾಂಶುಪಾಲ ದಿವಾಕರ್ ಮಾತನಾಡಿ, ಮೌಲಾನಾ ಅಜಾದ್ ಅವರ ಜೀವನ, ಅವರ ಶಿಕ್ಷಣದ ದೃಷ್ಟಿಕೋನ ಹಾಗೂ ಯುವ ಪೀಳಿಗೆಯು…

Read More

ಓಬವ್ವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಒನಕೆ ಓಬವ್ವಳು ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಅವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ. ಅವಳು ರೂಢಿಸಿಕೊಂಡ ಸಂಸ್ಕಾರಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ,ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ…

Read More

ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ. 10: ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ, ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಫೋಟೋಗ್ರಫಿ…

Read More

ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ,ನ.10:ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೋಮವಾರ ದಿಢೀರ ಭೇಟಿ ನೀಡಿ,ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯ‌ನಿರ್ವಹಣೆ ಕುರಿತು ಮಾಹಿತಿ‌ ನೀಡಿದರು.

Read More

ಬಿಜ್ಜರಗಿ ಗುರೂಜಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು,ನ. 10:ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ದಿನಾಂಕ 8-9-2025ರಂದು ಕರ್ನಾಟಕ ಸರ್ಕಾರ ನೀಡುವ 2025-26 ನೆ ಸಾಲಿನ ಪ್ರತಿಷ್ಠಿತ “ಕನಕಶ್ರೀ” ಪ್ರಶಸ್ತಿ, 5ಲಕ್ಷ ಬಹುಮಾನವನ್ನು ವಿಜಯಪುರದ ಸಂಶೋಧಕರಾದ”ಹಾಲುಮತ ಭಾಸ್ಕರ “ಶ್ರೀ ಚಂದ್ರಕಾಂತ ಬಿಜ್ಜರಗಿ ಗುರೂಜಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಅಭಿನಂದಿಸಿದರು.ಭಕ್ತ ಕನಕದಾಸರ ಜಯಂತಿ ಹಾಗೂ ಪ್ರಶಸ್ತಿ ಸಮಾರಂಭವು ಶ್ರೀ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶೀವರಾಜ ತಂಗಡಗಿ,…

Read More

ಮೀನುಮರಿಗಳ ಮಾರಾಟ

ಸಪ್ತಸಾಗರ ವಾರ್ತೆ ವಿಜಯಪುರ, ನ.10: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ನ. 14ರಂದು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704,9900776205 ಸಂಪರ್ಕಿಸಬಹುದಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೀನುಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More