ಪುನೀತ ರಾಜಕುಮಾರ ಸಾಧನೆ, ಸೇವೆ ಯುವಪೀಳಿಗೆಗೆ ಪ್ರೇರಣೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಪುನೀತ ರಾಜಕುಮಾರ ಅವರ ಸಾಧನೆ, ಸೇವೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಪುನೀತ ರಾಜಕುಮಾರ ಅವರ ಜನ್ಮದಿನದ ನಿಮಿತ್ತ ಹಮ್ಮಿಕೊಂಡ ‘ಸ್ಫೂರ್ತಿ ದಿನ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುನೀತ ರಾಜಕುಮಾರ ತಮ್ಮ ವಿನಯಶೀಲ ನಡವಳಿಕೆ ಮತ್ತು ನಟನೆಯಿಂದ ಕನ್ನಡಿಗರ ಮನೆಮಾತಾಗಿದ್ದರು. ತಮ್ಮಸಮಾಜ ಸೇವೆ, ಮಾನವೀಯ ಗುಣಗಳಿಂದ ಜನಮನ ಗೆದ್ದು, ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ತಮ್ಮ ಜೀವನದಲ್ಲಿ ಮಾಡಿದ…

Read More

ಸಾಲ ಸೌಲಭ್ಯಕ್ಕೆ‌ ಸಲ್ಲಿಸಿದ‌ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣಕ್ಕೆ ವಿಲೇವಾರಿ ಮಾಡಿ: ಜಿಪಂ‌ ಸಿಇಒ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ‌ ಮಾ. 17:ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸೇರಿದಂತೆ ಸರಕಾರದ ವಿವಿಧ ಯೋಜನೆಯಡಿ ಅನೇಕ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಈವರೆಗೂ ಅರ್ಜಿಗಳನ್ನು‌ ಬ್ಯಾಂಕ್ ಗಳು ಬಾಕಿ ಉಳಿಸಿಕೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ತಕ್ಷಣಕ್ಕೆ ಫಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ‌ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಡಿಸ್ಟ್ರಿಕ್ಟ್ ಲೆವೆಲ್…

Read More

ಸರಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಕರ್ನಾಟಕ ರಾಜ್ಯದಲ್ಲಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ಮನವಿ ಸ್ವೀಕರಿಸಲು ಡಿ.ಸಿ. ತಡ ಮಾಡಿದ್ದಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ವಿದ್ಯಾರ್ಥಿಗಳು ವಿಫಲ ಯತ್ನ ಮಾಡಿದರು.ನಂತರ ಆಗಮಿಸಿದ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಎಬಿವಿಪಿಯ ಕೇಂದ್ರೀಯ ಕಾರ್ಯ ಸಮಿತಿ ಸದಸ್ಯರಾದ ಸಚಿನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ…

Read More

22 ವಿವಿಧ ಸ್ವತ್ತಿನ ಪ್ರಕರಣ: 36 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16: ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ2025-26 ನೇ ಸಾಲಿನಲ್ಲಿ ಬಸವನ ಬಾಗೇವಾಡಿ ಉಪ-ವಿಭಾಗದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ, ಬಸವನ ಬಾಗೇವಾಡಿ ಹಾಗೂ ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ತೋಟದ ಮನೆ, ದೇವಸ್ಥಾನದ ಬಾಗಿಲು, ಮನೆಗಳ ಬಾಗಿಲು ಮುರಿದು ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಕಳ್ಳತನ, ಬಂಗಾರದ ತಾಳಿಸರ ಸುಲಿಗೆ ಪ್ರಕರಣ, ಮೋಸ ಮಾಡಿ ಕಳವು ಪ್ರಕರಣ, ಮೋಟಾರ್ ಬೈಕ್ ಹಾಗೂ ರೈತರ ಜಮೀನಿನಲ್ಲಿರುವ ಬೋರವೆಲ್ ಪಂಪಸೆಟ್ ಕಳ್ಳತನ ಪ್ರಕರಣಗಳನ್ನು ಪತ್ತೆ…

Read More

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆಸಂಗಿಯವರಿಗೆ ಸನ್ಮಾನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16:ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ರುದ್ರಪ್ಪ ಆಸಂಗಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಹಾಗೂ ಪ್ರಕಾಶಕರ ಸಂಘ ಬೆಂಗಳೂರು ವತಿಯಿಂದ ಸೋಮವಾರ ವಿಜಯಪುರದಲ್ಲಿ ಸನ್ಮಾನಿಸಲಾಯಿತು.ಸಂಘದ ರಾಜ್ಯಾಧ್ಯಕ್ಷ ಡಾ. ಮೆಹಬೂಬ ಮಾಲಬಾವಡಿ ಹಾಗೂ ಪದಾಧಿಕಾರಿಗಳು ಸಂಘದ ಕಚೇರಿಯಲ್ಲಿ ಆಸಂಗಿಯವರಿಗೆ ಸನ್ಮಾನಿಸಿದರು.ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ. ಮೆಹಬೂಬ ಮಾಲಬಾವಡಿ ಅವರು ಮಾತನಾಡಿ, ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಕನ್ನಡಪ್ರಭ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಕರ್ನಾಟಕ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ ಮಾ.16:ಜಿಲ್ಲೆಯ 137 ಪರೀಕ್ಷಾ ಕೇಂದ್ರಗಳಲ್ಲಿ ಮಾ.18 ರಿಂದ ಏಪ್ರಿಲ್ 02ರವರೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆ-1ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163ರ ಪ್ರಕಾರ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಬೆಳಿಗ್ಗೆ 8:30 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು…

Read More

ಸತ್ಸಂಗದತ್ತ ಯುವ ಜನತೆ ಮುಖ ಮಾಡಬೇಕು- ಶಂಕರ ಬೈಚಬಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 16:ಸತ್ಸಂಗವು ನಮ್ಮಲ್ಲಿ ಸದಾಚಾರ , ಸದ್ಬುದ್ದಿ, ಆಚಾರ ವಿಚಾರಗಳನ್ನು ತಿಳಿಸುವ ಮೂಲಕ ಮಾನವೀಯ ಮೌಲ್ಯಗಳನ್ನು, ಪ್ರೀತಿ ಅಂತಕರಣವನ್ನು ಬೆಳೆಸುತ್ತದೆ. ಇವುಗಳಲ್ಲಿ ಪಾಲ್ಗೊಳ್ಳುವುದರಿಂದ ಇಂದಿನ ಹಲವು ಒತ್ತಡಗಳ ಬದುಕಿನಿಂದ ಮುಕ್ತವಾಗಿಬದುಕಲು ಸಾಧ್ಯವಾಗುತ್ತದೆ. ಈ ಕಾರಣ ಸತ್ಸಂಗದತ್ತ ಯುವಜನತೆ ಮುಖ ಮಾಡಿ ಅದರಲ್ಲಿ ಪಾಲ್ಗೊಂಡು ಬದುಕನ್ನು ರೂಪಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಶಂಕರ ಬೈಚಬಾಳ ಇಂದಿಲ್ಲಿ ಕರೆ ನೀಡಿದರು.ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 552ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Read More

ಎಲ್ಲಿ ಮಹಿಳೆಯರಿಗೆ ಗೌರವವಿದೆಯೋ ಅಲ್ಲಿ ದೇವತೆಗಳು ವಾಸಿಸುತ್ತಾರೆ- ದಾನಮ್ಮ ತಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15 :ಮಹಿಳೆಯರನ್ನು ಪೂಜ್ಯನಿಯ ಭಾವದಿಂದ ನೋಡಬೇಕು. ಅವಳನ್ನು ಗೌರವಿಸಿದರೆ ದೇವತೆಗಳು ಪ್ರಸನ್ನರಾಗುತ್ತಾರೆ ಎಂದು ಶಿವಬಸವ ನಿಲಯದ ದಾನಮ್ಮತಾಯಿ ಹೇಳಿದರು.ಭಾನುವಾರ ನಗರದ ಸಾಯಿ ಪಾರ್ಕ್ ಗೀತಾ ಪಾಠಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಹಿಳೆ ಮನೆಯ ಒಳಗೂ ಮತ್ತು ಹೊರಗೂ ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಾಳೆ. ಏನೇ ಕಷ್ಟ ಬಂದರೂ ಕುಟುಂಬ ನಿರ್ವಹಣೆ ಜೊತೆಗೆ ಉದ್ಯೋಗದಲ್ಲಿಯೂ ಕೂಡ ಎಲ್ಲರ ಮೆಚ್ಚುಗೆಗೆ ಪಾತ್ರಳಾಗುತ್ತಾಳೆ. ಹಾಗಾಗಿ ಸಮಾಜ ಅವಳಿಗೆ ಇನ್ನೂ ಹೆಚ್ಚಿನ ಅವಕಾಶವನ್ನು ಕಲ್ಪಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ…

Read More

ವಿಶ್ವ ಭಾಷಣ ದಿನ ಆಚರಿಸಿದ ಬಂಡೆ ಸಹೋದರಿಯರು

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15: ಪ್ರತಿ ವರ್ಷ ಮಾರ್ಚ್ 15 ರಂದು ವಿಶ್ವ ಭಾಷಣ ದಿನವನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 1 ನೇ ವರ್ಗದ ವಿದ್ಯಾರ್ಥಿಗಳಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಭಾಷಣ ಮಾಡಿ ಗಮನ ಸೆಳೆದರು.ಶಕ್ತಿಯುತ ಪದಗಳನ್ನು ಬಳಸುವದರಿಂದ ಭಾಷಣಗಳು ಜನರ ಮೇಲೆ ಗಾಢವಾಗಿ ಪ್ರಭಾವ ಬೀರುತ್ತವೆ.ಪ್ರಜಾಪ್ರಭುತ್ವ, ಉತ್ತಮ ಆಡಳಿತ ಮತ್ತು ಮಾನವ ಹಕ್ಕುಗಳು, ಸಮಾಜದಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಉತ್ತೇಜಿಸಿ, ಜನರ ನಡುವಿನ ಬಾಂಧವ್ಯವನ್ನು ಬಲಪಡಿಸುವುದು ವಿಶ್ವ ಭಾಷಣ ದಿನದ ಉದ್ಧೇಶವಾಗಿದೆ.ಹೊಸ ವಿಚಾರಗಳನ್ನು…

Read More

ಭೀಮಾನದಿಯಲ್ಲಿ ಯುವಕ ನೀರು ಪಾಲು

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15:ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆಇಂಡಿ ತಾಲೂಕಿನ ಪಡನೂರು ಬಳಿಯ ಭೀಮಾನದಿಯಲ್ಲಿ ಭಾನುವಾರ ನಡೆದಿದೆ.ಪಡನೂರು ಗ್ರಾಮದ ಅನೀಲಕುಮಾರ ಪೂಜಾರಿ ನೀರು ಪಾಲಾದ ಯುವಕ.ಇಂದು ಬೆಳಿಗ್ಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕ ಪೂಜಾರಿ ನೀರಲ್ಲಿ ನಾಪತ್ತೆಯಾಗಿದ್ದಾನೆ.ಅನೀಕುಮಾರನಿಗಾಗಿ ಗ್ರಾಮಸ್ಥರಿಂದ ಶೋಧ ಕಾರ್ಯ ಕೈಗೊಂಡಿದ್ದಾರೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಮೋಟರ್ ಬೋಟ್ ಮೂಲಕ ಅನೀಲಕುಮಾರನಿಗಾಗಿ ಶೋಧನೆ ಕಾರ್ಯ ಕೈಗೊಂಡಿದ್ದಾರೆ.ಅನೀಲಕುಮಾರ ಇನ್ನೂ ಪತ್ತೆಯಾಗಿಲ್ಲ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.ಇಂಡಿ ಗ್ರಾಮೀಣ ಪೊಲೀಸ್ ಠಾಣಾ…

Read More