ಅಕ್ರಮ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ, ಅಕ್ಕಿ ವಶ

ಸಪ್ತಸಾಗರ ವಾರ್ತೆ , ವಿಜಯಪುರ,ಮಾ 6:ನಗರದ ಆರ್ ಎನ್ಎಸ್ ಶೋ ರೂಮ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಆರ್ ಎನ್ಎಸ್ ಶೋ ರೂಮ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಟಿ.ರಾಜು ಎಂಬುವವರ ಮೇಲೆ ಜಲ ನಗರ…

Read More

ಕೃ.ಮೇ.ಯೋಜನೆಯ ಸಂತ್ರಸ್ತರಿಗೆ ನ್ಯಾಯ ಕಲ್ಪಿಸಿ: ನಿರಾಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ.5:ವಿಜಯಪುರ-ಬಾಗಲಕೋಟೆ ಉಭಯ ಜಿಲ್ಲೆಗಳಲ್ಲಿ 2023 ರ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಂದುವರೆಸುವುದಾಗಿ ಹಾಗೂ ಸಂತ್ರಸ್ತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿಯೂ ಕಾಂಗ್ರೆಸ್ ನಾಯಕರು ನೀರಾವರಿ ಯೋಜನೆಗೆ ಪ್ರತಿ ವರ್ಷ ರೂ 40,000 ಕೋಟಿಯಂತೆ ಮುಂದಿನ 5 ವರ್ಷಗಳ ಅವಧಿಯಲ್ಲಿ ಎರಡು ಲಕ್ಷ ಕೋಟಿ ಹಣ ಖರ್ಚು ಮಾಡಿ ನೀರಾವರಿ ಯೋಜನೆಯನ್ನು ಪೂರ್ತಿಮಾಡುವುದಾಗಿಯೂ ವಾಗ್ದಾನ ಮಾಡಿದ್ದರು. ಆದರೆ ಕಳೆದ 3 ವರ್ಷದಲ್ಲಿ ಯು.ಕೆ.ಪಿಗೆ…

Read More

ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾ 5: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ…

Read More

ತಾಪಮಾನ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸಲಹೆ, ಸೂಚನೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.5:ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ‌ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು‌‌ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.ರಾಜ್ಯದ ಕೆಲ‌ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ…

Read More

ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕ ಇಲಾಖೆವೆಬ್ ಸೈಟಿನಲ್ಲಿ ಪ್ರಕಟ: ದಾಖಲೆ ಸಲ್ಲಿಸಲು ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ.ಮಾ.4: 2022ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧಿಕೃತ dpl.karnataka.gov.in ವೆಬ್ ಸೈಟಿನಲ್ಲಿ ಮಾರ್ಚ್ 02ರಂದು ಪ್ರಕಟಿಸಲಾಗಿದೆ.ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರ ಪುಸ್ತಕಗಳ ಶೀರ್ಷಿಕೆ,ಲೇಖಕರ ಹೆಸರು,ಪ್ರಕಾಶಕರ ಹೆಸರು,ಮುಖಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ, ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್…

Read More

ವಿಜಯಪುರದಲ್ಲಿ ಹೋಳಿ ರಂಗಿನಾಟದಲ್ಲಿ ಮಿಂದೆದ್ದ ಜನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 4 :ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಎತ್ತ ನೋಡಿದರೂ ಬಣ್ಣದಾಟದ ಸಡಗರ….ಕೆಂಪು, ಹಳದಿ, ಕೇಸರಿ ಹೀಗೆ ನಾನಾ ಬಣ್ಣಗಳನ್ನು ಬಳಿದುಕೊಂಡು, ಇತರರಿಗೂ ಉತ್ಸಾಹದಿಂದ ಎರಚಲು ಮುಂದಾದ ಯುವಕರ ಗುಂಪು…ಅಲ್ಲಲ್ಲಿ ಹೋಲಿ ಇವೆಂಟ್‌ಗಳಲ್ಲಿ ಯುವಕರ ಅಮಿತೋತ್ಸಾಹದ ಬಣ್ಣದಾಟ, ಕುಣಿದಾಟ, ಬೈಕ್ ಮೇಲೆ ಯುವಕರ ಹರ್ಷೋದ್ಘಾರದ ಸಂಚಾರ…ಹೋಳಿ ಹುಣ್ಣಿಮೆ ಅಂಗವಾಗಿ ಬುಧವಾರ ವಿಜಯಪುರದಲ್ಲಿ ಕಂಡು ಬಂದ ದೃಶ್ಯಗಳಿವು.ಬೆಳಿಗ್ಗೆಯಿಂದಲೇ ವಿಜಯಪುರ ರಂಗಿನಾಟದಲ್ಲಿ ಮಿಂದೆದಿತ್ತು. ಸೂರ್ಯನ ಪ್ರಖರವಾದ ಬಿಸಿಲು ಬಣ್ಣದಾಟಕ್ಕೆ ಬ್ರೇಕ್ ಬೀಳಲಿಲ್ಲ. ಮಧ್ಯಾಹ್ನವಾದರೂ ಬಣ್ಣದಾಟದ ಉತ್ಸಾಹಕ್ಕೆ ಮಾತ್ರ…

Read More

ಅನ್ನದಾತರ ಸಮೃದ್ಧಿಯಲ್ಲಿ ಸಂತೃಪ್ತಿ: ಸಚಿವ ಎಂಬಿಪಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 3:ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ. ಈ ನಿಟ್ಟಿನಲ್ಲಿ ಕಾಯಕನಿರತನಾಗಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ, ಎನ್.ಆರ್.ಎಲ್.ಎಂ ಕಲಿಕಾ ಕಟ್ಟಡ, ಗೋದಾಮು ಹಾಗೂ ಜಲ ಸಂಗ್ರಹಕ್ಕೆ ಅನುಕೂಲವಾಗುವ ಕಲ್ಯಾಣಿ ಉದ್ಘಾಟನೆ ಹಾಗೂ ಡೋಣಿ ಪ್ರವಾಹದಿಂದಾಗಿ ಪುನರ್ವಸತಿ…

Read More

ಮಾ.9ರ ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಡಾ.ಔದ್ರಾಮ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ ಮಾ.3:ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾ. 9ರಂದು ನಗರದಲ್ಲಿ ನಡೆಯಲಿರುವ ಭೀಮ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಭೀಮ ಗಾಯನ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ ಜೀವನ, ಸಾಧನೆ ಸಮಾನತೆಯ ಹೋರಾಟ, ಅಸ್ಪಶ್ಯತೆ ನಿವಾರಣೆ, ಸ್ತ್ರೀ…

Read More

ಟ್ರಂಪ್ ಧೋರಣೆ ಸರಿಯಲ್ಲ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:ಒಂದು ರಾಷ್ಟ್ರದ ಆಧ್ಯಕ್ಷನ ಹತ್ಯೆ ಮಾಡುವುದು, ಅವರನ್ನು ಕರೆದೊಯ್ದಿದ್ದು ಸರಿಯಲ್ಲ. ಅಮೆರಿಕ ಆದ್ಯಕ್ಷ ಟ್ರಂಪ್ ಮಾಡುವುದು ಸರಿಯಲ್ಲ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಖಮನೈ ಹತ್ಯೆಗೆ ಭಾರತದಲ್ಲಿ ಪ್ರತಿಭಟನೆ ಮಾಡಿದ್ದರ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ಒಬ್ಬರ ಸ್ವಾಯತ್ತತೆಯಲ್ಲಿ ಕೈಹಾಕುವುದು ಸರಿಯಲ್ಲ. ಇದು ಸರಿಯಾದ ಧೋರಣೆ ಅಲ್ಲ. ಇದಕ್ಕೆ ಬೆಂಬಲಿಸಿದರೆ ನಮಗೂ ಹೀಗೆ ಆಗುತ್ತದೆ ಎಂದರು.ಜಾಗತಿಕ ನಾಯಕರ ಜೊತೆಗೆ ಚರ್ಚೆ ಮಾಡಿ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕು….

Read More

ಇಸ್ರೇಲ್ ಮೇಲೆ ದಾಳಿ: ಇದು ಸಿಯಾ, ಸುನ್ನಿ ಕದನ- ಯತ್ನಾಳ್ ಪ್ರತಿಕ್ರಿಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:ಇಸ್ರೇಲ್ ಮೇಲೆ ಇರಾನ್ ಹಾಗೂ ಅಮೆರಿಕಾ ದಾಳಿ ಅದು ಅವರವರ ಮಧ್ಯ ಇರುವ ಸಿಯಾ, ಸುನ್ನಿ ಜಗಳ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.ಸೋಮವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ರಂಜಾನ್ ನಂತಹ ಪವಿತ್ರ ದಿನಗಳಲ್ಲಿ ಹೊಡೆದಾಡುತ್ತಿದ್ದಾರೆ. ಯಾವ ಧರ್ಮ ಎಲ್ಲಿ ಹುಟ್ಟಿದ್ದು ಅಲ್ಲೇ ಯುದ್ದ ಆರಂಭವಾಗಿದೆ. ಯುದ್ಧಕ್ಕೂ ಭಾರತಕ್ಕೂ ಸಂಬಂಧವಿಲ್ಲ ಎಂದರು.ಭಾರತ ಎಲ್ಲಾ ದೇಶಗಳ ಜೊತೆ ಒಳ್ಳೆಯ ಸಂಬಂಧವಿರಿಸಿಕೊಂಡಿದೆ. ಇಸ್ರೇಲ್, ಇರಾನ್ ಹಾಗೂ ಅಮೆರಿಕ ಜೊತೆ…

Read More