ಅಂಗನವಾಡಿ ಸುತ್ತ ಮುತ್ತಲಿನ ಪ್ರದೇಶ ತುರ್ತು ಶುಚಿಗೊಳಿಸಲು ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚನೆ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 25:ಅಂಗನವಾಡಿ ಸುತ್ತಮುತ್ತಲಿನ ಪ್ರದೇಶವನ್ನು ತುರ್ತಾಗಿ ಶುಚಿಗೊಳಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಆಲಮೇಲ ಪಟ್ಟಣದ ಕಡಣಿ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.ಬಳಿಕ ಅಂಗನವಾಡಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಹಾಗೂಊಟದ ವ್ಯವಸ್ಥೆ ಪರಿಶೀಲಿಸಿದ ಅವರು, ಕೇಂದ್ರದಲ್ಲಿ ಪ್ರತ್ಯೇಕ ಅಡುಗೆ ಕೊಠಡಿ ನಿರ್ಮಾಣಕ್ಕೆ ಸೂಚನೆ ನೀಡಿದರು.ಇದಕ್ಕೂ ಮುನ್ನ ಆಲಮೇಲ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲಿಸಿದರು. ಕಂದಾಯ…


